ಸೇವೆ ಆರಂಭವಾದ ಹತ್ತು ವರ್ಷಗಳ ಬಳಿಕ ಲಾಭದ ಹಳಿಗೆ ಏರಿದ ನಮ್ಮ ಮೆಟ್ರೋ – ದಕ್ಷಿಣ ಭಾರತದ ಮೊದಲ ಮೆಟ್ರೋ ರೈಲಿನ ಆದಾಯ ಎಷ್ಟು ಗೊತ್ತಾ?

ಸೇವೆ ಆರಂಭವಾದ ಹತ್ತು ವರ್ಷಗಳ ಬಳಿಕ ಲಾಭದ ಹಳಿಗೆ ಏರಿದ ನಮ್ಮ ಮೆಟ್ರೋ – ದಕ್ಷಿಣ ಭಾರತದ ಮೊದಲ ಮೆಟ್ರೋ ರೈಲಿನ ಆದಾಯ ಎಷ್ಟು ಗೊತ್ತಾ?

ನ್ಯೂಸ್ ಆ್ಯರೋ‌ : ದಕ್ಷಿಣ ಭಾರತದ ಮೊದಲ ಮೆಟ್ರೋ ಎಂಬ ಖ್ಯಾತಿ ಪಡೆದಿರುವ ಬೆಂಗಳೂರಿನ ನಮ್ಮ ಮೆಟ್ರೋ ಆರಂಭವಾಗಿ ದಶಕದ ಬಳಿಕ ಲಾಭದತ್ತ ಮುಖ ಮಾಡಿದೆ.

100 ಕೋಟಿ ರೂ. ಲಾಭದ ನಿರೀಕ್ಷೆ

2022-23ರ ಅವಧಿಯಲ್ಲಿ ಲಾಭದ ಗಡಿವರೆಗೆ ಬಂದಿದ್ದ ನಮ್ಮ ಮೆಟ್ರೋ 2023-24ರ ಸಾಲಿನಲ್ಲಿ 100 ಕೋಟಿ ರೂ. ಲಾಭ ಗಳಿಸುವ ಗುರಿ ಹೊಂದಿದೆ. ಪ್ರಯಾಣ ದರ, ಇತರ ಶುಲ್ಕ ಸೇರಿ 2022-23ರಲ್ಲಿ 594.02 ಕೋಟಿ ರೂ. ಆದಾಯ ಬಂದಿತ್ತು. ಆದರೆ ನಿರ್ವಹಣೆಗೆ 486.61 ಕೋಟಿ ರೂ. ವೆಚ್ಚವಾಗಿದೆ. ಅಂತಿಮವಾಗಿ ನಮ್ಮ ಮೆಟ್ರೋ 40 ಕೋಟಿ ರೂ. ಲಾಭದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ (ಬಿ.ಎಂ.ಆರ್.ಸಿ.ಎಲ್.) ಅಧಿಕಾರಿಗಳು ಮಾತನಾಡಿ, ಕಳೆದ ವರ್ಷ ಮೆಟ್ರೋ ರೈಲಿನಲ್ಲಿ ಪ್ರತಿನಿತ್ಯ 5.32 ಲಕ್ಷ ಮಂದಿ ಪ್ರಯಾಣಿಸಿದ್ದರು. ಈ ವರ್ಷ ಈ ಸಂಖ್ಯೆ 6.3 ಲಕ್ಷಕ್ಕೆ ಏರಿಕೆಯಾಗಿದೆ. ಇದೇ ರೀತಿ ಪ್ರಯಾಣಿಕರ ಸಂಖ್ಯೆ ಮುಂದುವರಿದರೆ ಆ ಆರ್ಥಿಕ ವರ್ಷದ ಕೊನೆಗೆ 100 ಕೋಟಿ ರೂ. ಲಾಭ ಬರಲಿದೆ ಎಂದಿದ್ದಾರೆ.

ಪ್ರಸ್ತುತ ಇರುವ ಹಸಿರು ಮತ್ತು ನೇರಳೆ ಮಾರ್ಗಗಳ ಜೊತೆಗೆ 3 ವರ್ಷದೊಳಗೆ ಕೆಂಪು, ಹಳದಿ, ನೀಲಿ ಮಾರ್ಗಗಗಳು ಆರಂಭಗೊಳ್ಳುವ ನಿರೀಕ್ಷೆ ಇದೆ. ಆಗ ಮೆಟ್ರೋ ಜಾಲವು 175 ಕಿ.ಮೀ.ಗೆ ಹೆಚ್ಚಾಗಲಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *