Nejar Murder Case : ಪ್ರವೀಣ್ ಮತ್ತು ಅಯ್ನಾಝ್ ಅವರದ್ದು 8 ತಿಂಗಳ ಫ್ರೆಂಡ್ಶಿಪ್ – ಎಸ್.ಪಿ ಡಾ.‌ಅರುಣ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

Nejar Murder Case : ಪ್ರವೀಣ್ ಮತ್ತು ಅಯ್ನಾಝ್ ಅವರದ್ದು 8 ತಿಂಗಳ ಫ್ರೆಂಡ್ಶಿಪ್ – ಎಸ್.ಪಿ ಡಾ.‌ಅರುಣ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

ನ್ಯೂಸ್ ಆ್ಯರೋ : ದೀಪಾವಳಿ ಹಬ್ಬದಂದು ದೀಪದಿಂದ ಕಂಗೊಳಿಸಬೇಕಿದ್ದ ಉಡುಪಿ ಜಿಲ್ಲೆಯಲ್ಲಿ ಮಾತ್ರ ಕತ್ತಲೆ ಆವರಿಸಿತ್ತು. ಈ ಶುಭ ದಿನವೇ ಅಂದರೆ ನವೆಂಬರ್ 12ರಂದು ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದ ಒಂದೇ ಮನೆಯ ನಾಲ್ವರ ಭೀಕರ ಹತ್ಯೆ ಎಲ್ಲರನ್ನೂ ದಿಗ್ಭ್ರಮೆಗೊಳಿಸಿತ್ತು. ಈ ಹತ್ಯೆಯ ನರಹಂತಕನನ್ನು ಶೀಘ್ರದಲ್ಲೇ ಪತ್ತೆಹಚ್ಚುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಯಿತು. ಈ ಹತ್ಯಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿ ಎಸ್.ಪಿ ಡಾ. ಅರುಣ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್.ಪಿ ಡಾ.ಅರುಣ್ ಹೇಳಿದ್ದೇನು..?

ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು. ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಪೊಸೆಸಿವ್ ನೆಸ್ ನಿಂದ ಕೊಲೆ ಮಾಡಬೇಕೆಂದು ಪೂರ್ವ ಸಿದ್ಧತೆ ಮಾಡಿಕೊಂಡಿದ್ದ” ಎಂದು ಮಾಹಿತಿ ನೀಡಿದರು.

ಪ್ರವೀಣ್ ಯಾವ ರೀತಿ ಹತ್ಯೆ ಮಾಡಿದ್ದ..?

ಪ್ರವೀಣ್ ಅಂದು ಆರಂಭದಲ್ಲಿ ಅಯ್ನಾಝ್ ಗೆ ಮೊದಲು ದಾಳಿ ಮಾಡುತ್ತಾನೆ. ಹಸೀನಾ, ಅಫ್ನಾನ್, ಆಸಿಂ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಬಳಿಕ ಬೇರೆ ಬೇರೆ ವಾಹನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾನೆ. ಕೈ ಗಾಯಕ್ಕೆ ಚಿಕಿತ್ಸೆ ಪಡೆದು, ಚಾಕು ಮನೆಯಲ್ಲೇ ಇಟ್ಟು ಹೆಂಡತಿ ತವರು ಮನೆಗೆ ಹೋಗಿದ್ದಾನೆ. ಕೈಗೆ ಗಾಯವಾಗಿದೆ ಎಂಬ ಬಗ್ಗೆ ಪತ್ನಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿದ್ದಾನೆ ಎಂದರು.

ಕ್ರಿಮಿನಲ್ ಹಿಸ್ಟರಿಯಿಲ್ಲ, ಅಮಲು ಪದಾರ್ಥ ಸೇವನೆ ವರದಿ ಬರಬೇಕಷ್ಟೆ:

ಕೇವಲ 15 ನಿಮಿಷದಲ್ಲಿ ಆತ ನಾಲ್ವರನ್ನು ಕೊಲೆ ಮಾಡಿದ್ದಾನೆಂದರೆ ಅವನ ಮೆಂಟಲ್ ಸ್ಟೇಟಸ್ ಆ ಸಂದರ್ಭ ಹೇಗಿರಬಹುದೆಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ನಾವು ಎಲ್ಲಾ ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲ. 2007 ಪೂನಾ ಪೊಲೀಸ್ ಆಗಿದ್ದ, ಉತ್ತಮ ಸಂಬಳಕ್ಕಾಗಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸೇರಿದ್ದಾನೆ. ಅಮಲು ಪದಾರ್ಥ ಸೇವನೆ ಮಾಡಿದ್ದಾನೋ ಎಂಬ ಬಗ್ಗೆ ಮೆಡಿಕಲ್ ವರದಿ ಬರಲಿದೆ ಎಂದರು.

ಇನ್ನು ಕುಡುಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ವ್ಯಕ್ತಿಯ ವಿಚಾರಣೆ ಮಾಡಿದ್ದೇವೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯುತ್ತೇವೆ. ಆರೋಪಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರ ಬಂದೋಬಸ್ತ್ ನಿಯೋಜನೆ ಆಗಿದೆ. ಗಂಭೀರ ಪ್ರಕರಣವಾಗಿರುವ ಕಾರಣ ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ. ನಾವು ಕೊಡುವುದೂ ಇಲ್ಲ ಎಂದು ಎಸ್.ಪಿ ಹೇಳಿದರು.

ತನಿಖೆ ಯಾವ ರೀತಿ ಸಾಗುತ್ತಿದೆ…?

ಹತ್ಯೆಗೀಡಾದ ಹಸೀನಾ ಅವರಿಗೂ ಆರ್ಥಿಕ ಮೋಸ ಆಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಕುಟುಂಬದಿಂದ ದೂರು ಪಡೆದುಕೊಂಡು ತನಿಖೆ ಮಾಡುತ್ತೇವೆ. ಅಯ್ನಾಝ್ ಕುಟುಂಬ ಫ್ಯಾಮಿಲಿ ತನಿಖೆಗೆ ಬಹಳ ಬೆಂಬಲ ಕೊಟ್ಟಿದ್ದಾರೆ. ನೂರ್ ಮೊಹಮ್ಮದ್ ಕುಟುಂಬ ಬಹಳ ನೋವಲ್ಲಿದ್ದಾರೆ. ಆ ನೋವು ಯಾವ ರೀತಿ ಇರಬಹುದೆಂದು ನಮಗೆ ತಿಳಿದಿದೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತವೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಗ್ಗೆ ಕುಟುಂಬ ಮನವಿ ನೀಡಿದೆ ಎಂದರು. ಇನ್ನು ತನಿಖೆಗೆ ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ನಾಲ್ವರ ಕೊಲೆ ಪ್ರಕರಣ ದೊಡ್ಡ ಸವಾಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾದ ಪ್ರಕರಣ ಇದಾಗಿತ್ತು. ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ. ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ. ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ಕೊಡುವ ಬಗ್ಗೆ ಶಿಫಾರಸ್ಸು ಮಾಡಿದ್ದೇನೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕೆ ಹೇಳಿದರು.

ಒಟ್ಟಾರೆಯಾಗಿ ನಾಲ್ವರನ್ನು ನಿರ್ದಾಕ್ಷಿಣ್ಯವಾಗಿ ಕೊಲೆಗೈದ ನರಹಂತಕನಿಗೆ ಕಠಿಣವಾದ ಮತ್ತು ಸರಿಯಾದ ಶಿಕ್ಷೆ ಆಗಬೇಕೆಂದು ಎಲ್ಲರ ಅಭಿಲಾಷೆ. ಈ ನಿಟ್ಟಿನಲ್ಲಿ ಪರಿಶ್ರಮ ಪಡುತ್ತಿರುವ ಪೊಲೀಸ್ ಇಲಾಖೆಯ ಕಾರ್ಯತತ್ಪರತೆಯನ್ನು ಮೆಚ್ಚಲೇಬೇಕು.

Related post

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Leave a Reply

Your email address will not be published. Required fields are marked *