ದಕ್ಷಿಣ ಕನ್ನಡ ಜಿಲ್ಲೆಯ 14 ಕಡೆಗಳಲ್ಲಿ NIA ದಾಳಿ – ಪ್ರಧಾನಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಎಸಗಲು ಜಿಲ್ಲೆಯಿಂದ ಹಣಕಾಸು ನೆರವು.!!

ದಕ್ಷಿಣ ಕನ್ನಡ ಜಿಲ್ಲೆಯ 14 ಕಡೆಗಳಲ್ಲಿ NIA ದಾಳಿ – ಪ್ರಧಾನಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಎಸಗಲು ಜಿಲ್ಲೆಯಿಂದ ಹಣಕಾಸು ನೆರವು.!!

ನ್ಯೂಸ್ ಆ್ಯರೋ : ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಿದ್ದಾರೆ.

ಕಳೆದ ವರ್ಷ 2022ರ ಜುಲೈ ತಿಂಗಳಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆದಿದ್ದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಅಂಶ ಬಹಿರಂಗವಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಐಎನ್​ಎ ಅಧಿಕಾರಿಗಳು ಫುಲ್ವಾರಿ ಶರೀಫ್ ಎಂಬುವವನನ್ನು ಬಂಧಿಸಿದ್ದರು.

ಇನ್ನು ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಲು ದಕ್ಷಿಣ ಕನ್ನಡದಿಂದ ಹಣಕಾಸು ನೆರವು ನೀಡಲಾಗಿದೆ ಎಂಬ ಸತ್ಯ ತನಿಖೆ ವೇಳೆ ಬಹಿರಂಗವಾಗಿತ್ತು. ಈ ಹಣದ ಜಾಡು ಹಿಡಿದು ಹೊರಟ ಅಧಿಕಾರಿಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಮೂಲಕ ಭಾರತಕ್ಕೆ ಹಣ ಬರುತ್ತಿದ್ದು, ಇದನ್ನು ಭಾರತದಲ್ಲಿ ಭಯೋತ್ಪಾದಕ ಎಸಗಲು ಬಳಸಲಾಗುತ್ತಿದೆ ಎಂಬ ಅಂಶವನ್ನು ಪತ್ತೆ ಹಚ್ಚಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಾರ್ಚ್​ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.

ಪ್ರಧಾನಿ ಮೋದಿ ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಿರುವವರ ಜೊತೆ ಈ ನಾಲ್ವರು ಸಂಪರ್ಕ ಹೊಂದಿದ್ದು, ಹಣಕಾಸು ನೆರವು ಒದಗಿಸಿದ್ದಾರೆ ಎಂಬ ಆರೋಪದಡಿ ದಾಳಿ ನಡೆದಿತ್ತು. ಕೃತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೂ ಸಹ ಇವರ ಮೇಲಿದೆ ಎಂದು ಹೇಳಲಾಗಿತ್ತು.

Related post

Loksabha Results : ಗೆಲುವಿನ ಖಾತೆ ತೆರೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ – ಚಾಮರಾಜನಗರ, ಹಾಸನ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

Loksabha Results : ಗೆಲುವಿನ ಖಾತೆ ತೆರೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ –…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಗೆಲುವಿನ ಖಾತೆ ತೆರೆದಿದೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರು ಒಂದು ಲಕ್ಷಕ್ಕೂ ಅಧಿಕ…
Loksabha Results : ಸರಳ ಬಹುಮತ ಗಳಿಸುವಲ್ಲಿ ಎಡವುತ್ತಾ ಬಿಜೆಪಿ? – ದಕ್ಷಿಣ ಕನ್ನಡ, ಬೆಂ.ಗ್ರಾಮಾಂತರ ಉಡುಪಿಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

Loksabha Results : ಸರಳ ಬಹುಮತ ಗಳಿಸುವಲ್ಲಿ ಎಡವುತ್ತಾ ಬಿಜೆಪಿ? –…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಎಣಿಕೆ ಕಾರ್ಯ ಇನ್ನೂ ಮುಂದುವರಿದಿದ್ದು, ಆಡಳಿತಾರೂಢ ಬಿಜೆಪಿ ಪಕ್ಷ ಸರಳ ಬಹುಮತದ ಕೊರತೆ ಎದುರಿಸುವ ಆತಂಕಕ್ಕೆ ಸಿಲುಕಿದೆ. ಎಲ್ಲಾ ಮತಗಟ್ಟೆ ಸಮೀಕ್ಷೆಗಳನ್ನು…
ದಿನ‌ ಭವಿಷ್ಯ 04-06-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 04-06-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಬಸುರಿಯು ನೆಲದ ಮೇಲೆ ನಡೆದುಕೊಂಡು ಹೋಗುವಾಗ ವಿಶೇಷ ಕಾಳಜಿ ವಹಿಸಬೇಕು. ಇನ್ನೂ ಸಂಬಳ ಪಡೆಯದವರು, ಇಂದು ಅವರು ಹಣಕ್ಕಾಗಿ ತುಂಬಾ ಚಿಂತೆ ಮಾಡಬಹುದು ಮತ್ತು ನಿಮ್ಮ ಸ್ನೇಹಿತರಿಂದ ಸಾಲವನ್ನು…

Leave a Reply

Your email address will not be published. Required fields are marked *