ಹುಲಿ ಉಗುರು ಅಷ್ಟೇ ಅಲ್ಲ, ಆನೆ ಬಾಲದ ಕೂದಲಿಗೂ ಭಾರೀ ಡಿಮ್ಯಾಂಡ್ – ಆಭರಣ ಶೋರೂಂಗಳ ಮೇಲೂ ದಾಳಿಗೆ ಅರಣ್ಯಾಧಿಕಾರಿಗಳ ಪ್ಲ್ಯಾನ್

ಹುಲಿ ಉಗುರು ಅಷ್ಟೇ ಅಲ್ಲ, ಆನೆ ಬಾಲದ ಕೂದಲಿಗೂ ಭಾರೀ ಡಿಮ್ಯಾಂಡ್ – ಆಭರಣ ಶೋರೂಂಗಳ ಮೇಲೂ ದಾಳಿಗೆ ಅರಣ್ಯಾಧಿಕಾರಿಗಳ ಪ್ಲ್ಯಾನ್

ನ್ಯೂಸ್ ಆ್ಯರೋ : ಹುಲಿ ಉಗುರಿನ ಲಾಕೆಟ್​ ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್ ಮನೆಯಿಂದಲೇ ಬಂಧನವಾಗಿದ್ದ ವರ್ತೂರು ಸಂತೋಷ್ ಅವರ ಬಳಿಕ ಅರಣ್ಯಾಧಿಕಾರಿಗಳು ಹುಲಿ ಉಗುರು ಲಾಕೆಟ್ ಧರಿಸಿದ ಸೆಲೆಬ್ರೆಟಿಗಳಿಗೆ ನೋಟಿಸ್ ಜಾರಿ ಮಾಡಿದ್ದರು. ಇದೀಗ ಅರಣ್ಯಾಧಿಕಾರಿಗಳು ಮತ್ತೊಂದು ರೇಡ್​​​ಗೆ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹುಲಿ ಉಗುರಿಗೆ ಪೆಂಡೆಂಟ್ ಮಾಡಿಕೊಡುವ ಆಭರಣ ಅಂಗಡಿಗಳ ಮಾಲೀಕರು ಎಲ್ಲಿಂದ ಹುಲಿ ಉಗುರು ತರ್ತಾರೆ ಎಂಬ ಕುರಿತು ಮಾಹಿತಿ ಕಲೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.

ಮಾಧ್ಯಮಗಳ ವರದಿಗಳ ಪ್ರಕಾರ ಕೇವಲ ಹುಲಿ ಉಗುರಲ್ಲದೇ ಆನೆ ಬಾಲದ ಕೂದಲನ್ನ ಸಂಗ್ರಹ ಮಾಡಿರುವ ಬಗ್ಗೆಯೂ ಶೋಧಕ್ಕೆ ಮುಂದಾಗಿದ್ದಾರೆ. ಸ್ಮಗ್ಲಿಂಗ್ ಮೂಲಕ ಹುಲಿ ಉಗುರು ಹಾಗೂ ಆನೆ ಬಾಲದ ಕೂದಲನ್ನು ಸಂಗ್ರಹ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ಆಭರಣದ ಶೋ ರೂಂ ಗಳ ಮೇಲೆ ದಾಳಿ ನಡೆಸಲು ಅರಣ್ಯಾಧಿಕಾರಿಗಳು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಸದ್ಯ ಸಿಐಡಿ, ಬಿಬಿಎಂಪಿ ಫಾರೆಸ್ಟ್ ಸೆಲ್ ಅಧಿಕಾರಿಗಳು ಹುಲಿ ಉಗುರು ಮಾರಾಟದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ರಾಜ್ಯಾದ್ಯಂತ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಈ ವಿಚಾರದಲ್ಲಿ ಇದೀಗ ಅನೇಕರಿಗೆ ಕಂಟಕ ಎದುರಾಗುವ ಸಾಧ್ಯತೆಗಳಿವೆ. ನಿನ್ನೆಯಷ್ಟೇ ನಟ ದರ್ಶನ್, ಜಗ್ಗೇಶ್ ಹಾಗೂ ನಿಖಿಲ್ ಕುಮಾರಸ್ವಾಮಿ ಮನೆ ಮೇಲೂ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *