ರೈತರ ವಿರೋಧದ ನಡುವೆಯೂ ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಹರಿಸಲು ಸೂಚನೆ – ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ

ರೈತರ ವಿರೋಧದ ನಡುವೆಯೂ ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಹರಿಸಲು ಸೂಚನೆ – ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ

ನ್ಯೂಸ್ ಆ್ಯರೋ : ಕರ್ನಾಟಕ ರೈತರ ವಿರೋಧದ ನಡುವೆಯೂ ತಮಿಳುನಾಡಿಗೆ ಮತ್ತೆ 15 ದಿನ 5000 ಕ್ಯೂಸೆಕ್ಸ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ.

ಮಂಗಳವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿರುವುದಕ್ಕೆ ಮಂಡ್ಯದ ರೈತರ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯುಆರ್​ಸಿ ಆದೇಶ ಹೊರಡಿಸುತ್ತಿದ್ದಂತೆ ಮಂಡ್ಯದಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಹೆಚ್ಚಾಗತೊಡಗಿದೆ. ಶ್ರೀರಂಗಪಟ್ಟಣದಲ್ಲಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಮುಂದುವರಿದಿದ್ದು, ಬೆಂಗಳೂರು, ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಈ ಬಗ್ಗೆ ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಮಾತನಾಡಿ, ರಾಜ್ಯದ ರೈತರ ಬೆಳೆಗೆ, ಬೆಂಗಳೂರಿನ ಜನರಿಗೆ ಕುಡಿಯಲು ನೀರಿಲ್ಲ. ಇಂತಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ನೀರು ಬಿಡಬಾರದು. ಸುಪ್ರೀಂಕೋರ್ಟ್​ನಲ್ಲಿ ಸರ್ಕಾರ ಸಮರ್ಥವಾಗಿ ವಾದ ಮುಂದುವರಿಸಲಿ.

ಕಾವೇರಿ ನೀರಿನ ವಿಚಾರದಲ್ಲಿ ನಾವು ರಾಜ್ಯ ಸರ್ಕಾರದೊಂದಿಗೆ ಇದ್ದೇವೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಸರ್ಕಾರ, ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸುತ್ತೇವೆ ಎಂದು ಹೇಳಿದರು.

Related post

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ –…

ನ್ಯೂಸ್‌ ಆ್ಯರೋ : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್​ ಸಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ…
ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್ ಆಯ್ತು ಅಪರೂಪದ ವಿಡಿಯೋ..!

ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್…

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ…

Leave a Reply

Your email address will not be published. Required fields are marked *