ಪ್ರಧಾನಿ ಮೋದಿಯಿಂದ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ : ರಾಜ್ಯದ ಮೊದಲ ಆಕ್ಸಸ್‌ ಕಂಟ್ರೋಲ್ಡ್‌ ಹೈವೆ

ಪ್ರಧಾನಿ ಮೋದಿಯಿಂದ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ : ರಾಜ್ಯದ ಮೊದಲ ಆಕ್ಸಸ್‌ ಕಂಟ್ರೋಲ್ಡ್‌ ಹೈವೆ

ನ್ಯೂಸ್‌ ಆ್ಯರೋ : 11 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಬಹುನೀರೀಕ್ಷಿತ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನುಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯದಲ್ಲಿ ಲೋಕರ್ಪಣೆ ಮಾಡಿದರು.

ಬೆಂಗಳೂರು ಟು ಮೈಸೂರು ಸುಗಮ ಸಂಚಾರಕ್ಕಾಗಿ ನಿರ್ಮಾಣ ಆಗಿರುವ 118 ಕಿ.ಮೀ ಉದ್ದದ ಬೆಂಗಳೂರು – ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಲೋಕಾರ್ಪಣೆ ಆಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನಿತಿನ್‌ ಗಡ್ಕರಿ, ಸಂಸದರಾದ ಸುಮಲತಾ, ಪ್ರತಾಪ್​ ಸಿಂಹ, ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ ಸೇರಿ ಹಲವರು ಭಾಗಿಯಾದರು. 1.8 ಕಿಲೋಮೀಟರ್ ರೋಡ್ ಶೋ ನಡೆಸಿದ ಬಳಿಕ ಹೆದ್ದಾರಿ ಉದ್ಘಾಟಿಸಿದರು.

ರಾಜ್ಯದ ಮೊದಲ ಆಕ್ಸಸ್‌ ಕಂಟ್ರೋಲ್ಡ್‌ ಹೈವೆ ಇದಾಗಿದ್ದು, ಇದರ ವಿಶೇಷತೆಗಳು ಇಲ್ಲಿವೆ.

  • ಹೆದ್ದಾರಿಯಲ್ಲಿಯೇ ಹೆಲಿಕಾಪ್ಟರ್ ಇಳಿಯುವ ವ್ಯವಸ್ಥೆ
  • ದ್ವಿಚಕ್ರ– ತ್ರಿಚಕ್ರ ವಾಹನಗಳಿಗೆ ಎಕ್ಸ್‌ಪ್ರೆಸ್‌ವೇನಲ್ಲಿ ನಿರ್ಬಂಧ
  • ಎಕ್ಸ್‌ಪ್ರೆಸ್‌ವೇನ ಎರಡೂ ಬದಿ 7 ಅಡಿ ಎತ್ತರದ ತಂತಿಬೇಲಿ
  • ಪ್ರಯಾಣದ ಅವಧಿ 3 ಗಂಟೆಯಿಂದ 90 ನಿಮಿಷಕ್ಕೆ ಇಳಿಕೆ

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *