ಚೈತ್ರಾ ಗ್ಯಾಂಗ್ ಶುದ್ಧ ವಂಚಕರು, ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ – ದೊಡ್ಡವರ ಹೆಸರು ಹೊರಬರುತ್ತೆಂದು ಬೊಗಳೆ ಬಿಟ್ಟ ಚೈತ್ರಾ ಕುಂದಾಪುರ : ಕಮೀಷನರ್ ಹೇಳಿಕೆ

ಚೈತ್ರಾ ಗ್ಯಾಂಗ್ ಶುದ್ಧ ವಂಚಕರು, ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ – ದೊಡ್ಡವರ ಹೆಸರು ಹೊರಬರುತ್ತೆಂದು ಬೊಗಳೆ ಬಿಟ್ಟ ಚೈತ್ರಾ ಕುಂದಾಪುರ : ಕಮೀಷನರ್ ಹೇಳಿಕೆ

ನ್ಯೂಸ್ ಆ್ಯರೋ‌ : ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಏಳು ಕೋಟಿ ರೂ. ಹಣ ಪಡೆದು ಉದ್ಯಮಿ ಗೋವಿಂದ ಬಾಬು ಪೂಜಾರಿ ( Govinda Babu Poojary) ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಕಮೀಷನರ್ ಬಿ‌. ದಯಾನಂದ್ (Police commissioner B Dayanand) ಪ್ರತಿಕ್ರಿಯೆ ನೀಡಿದ್ದು, ಚೈತ್ರಾ ಗ್ಯಾಂಗ್ (Chaithra Kundapura) ನಿಂದ ಇದೊಂದು ನೇರಾನೇರಾ ವಂಚನೆ ಪ್ರಕರಣವಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಮತ್ತವಳ ತಂಡವನ್ನು ಸಿಸಿಬಿ ಬಂಧಿಸಿತ್ತು. ಸಿಸಿಬಿ ಕಚೇರಿಯೆದುರು ಮಾಧ್ಯಮಗಳೊಡನೆ ಗುರುವಾರ ಪ್ರತಿಕ್ರಿಯೆ ನೀಡಿದ್ದ ಚೈತ್ರಾ, ಪ್ರಕರಣದಲ್ಲಿ ದೊಡ್ಡದೊಡ್ಡವರ ಹೆಸರೆಲ್ಲಾ ಹೊರಬರಲಿದೆ ಎಂದು ಬಾಂಬ್‌ ಸಿಡಿಸಿದ್ದಳು. ಆದರೆ ಇದೆಲ್ಲಾ ಸುಳ್ಳು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಕಮೀಷನರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಧ್ಯಾಹ್ನ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಪ್ರಕರಣದಲ್ಲಿ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ. ಸಿಸಿಬಿ ಅಧಿಕಾರಿಗಳ ತಂಡ ವಂಚಕರನ್ನು ಬಂಧನಕ್ಕೊಳಪಡಿಸಿದ್ದು, ಪ್ರಕರಣದಲ್ಲಿ ಶಾಮೀಲಾದ ಎಲ್ಲರನ್ನೂ ಸೆರೆಹಿಡಿಯಲಾಗುವುದು ಎಂದರು.

ಹಣ ಮರುವಸೂಲಿ ಬಗ್ಗೆ ನಂತರ ತನಿಖೆ ನಡೆಯಲಿದ್ದು, ಸದ್ಯಕ್ಕೆ ಸಿಸಿಬಿ ವಿಚಾರಣೆ ನಡೆಸುತ್ತಿದೆ‌‌. ಪ್ರಕರಣದಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ. ಸಂಪೂರ್ಣ ತನಿಖೆಯ ಬಳಿಕ ಪ್ರಕರಣದ ಬಗ್ಗೆ ವಿವರಣೆ ನೀಡಲಾಗುವುದು ಎಂದವರು ಹೇಳಿಕೆ ನೀಡಿದ್ದಾರೆ‌.

Related post

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ –…

ನ್ಯೂಸ್‌ ಆ್ಯರೋ : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್​ ಸಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ…
ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್ ಆಯ್ತು ಅಪರೂಪದ ವಿಡಿಯೋ..!

ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್…

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ…

Leave a Reply

Your email address will not be published. Required fields are marked *