7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ಮೇ 8) ನಡೆದಿದ್ದು, ಮೇ 14ರವರೆಗೆ ಅಂದರೆ ಮುಂದಿನ ಏಳು ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ಈ ಹಿನ್ನಲೆ ಇಂದೇ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದು, ಅಮಾವಾಸ್ಯೆ ದಿನವೇ ರೇವಣ್ಣ ಜೈಲುಪಾಲಾಗಿದ್ದಾನೆ.

ಎಸ್ ಐಟಿ ಕಸ್ಟಡಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ರೇವಣ್ಣರನ್ನು ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಧೀಶರು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿದ ಹಿನ್ನೆಲೆಯಲ್ಲಿ ಕೋರ್ಟ್ ಹಾಲ್ ನಿಂದ ಹೊರಬಹುವಾಗ ರೇವಣ್ಣ ಕಣ್ಣೀರು ಹಾಕಿದರು. ಇನ್ನ ಎಸ್ಐಟಿ ಅಧಿಕಾರಿಗಳು ರೇವಣ್ಣರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.

ಸದ್ಯ ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರನ್ನು 7 ದಿನಗಳ ಕಾಲ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆದರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಮೇ 9 ರಂದು ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಒಂದು ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಜಾಮೀನು ನೀಡಿದರೆ ರಿಲೀಫ್ ಸಿಗಲಿದೆ. ಇಲ್ಲವಾದರೆ ಮೇ 14ರವರೆಗೆ ಮಾಜಿ ಸಚಿವ ಎಚ್. ಡಿ. ರೇವಣ್ಣ ಜೈಲಿನಲ್ಲೇ ಇರಬೇಕಿದೆ.

ಇನ್ನು ವಿಶೇಷ ತನಿಖಾ ತಂಡದ ವಶದಲ್ಲಿ ಇರುವ ಮಾಜಿ ಸಚಿವ ಎಚ್‌. ಡಿ. ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು 2 ಗಂಟೆಗಳ ಕಾಲ ರೇವಣ್ಣ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಬಳಿಕ ಡಿಸ್ಚಾರ್ಜ್‌ ಮಾಡಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *