ಇದೆಂಥಾ ಅವಸ್ಥೆ..! ರಾಜ್ಯದಲ್ಲಿ ಒಂದೇ ವರ್ಷದಲ್ಲಿ ಅಪ್ರಾಪ್ತ ವಯಸ್ಸಿನ ಗರ್ಭಿಣಿಯರ ಸಂಖ್ಯೆ 28757….!!!

ನ್ಯೂಸ್ ಆ್ಯರೋ : ರಾಜ್ಯದಲ್ಲಿ ಇದೀಗ ಅಕ್ರಮವಾಗಿ ಭ್ರೂಣ ಪತ್ತೆ ಮಾಡುವುದು, ಭ್ರೂಣ ಹತ್ಯೆಯಂತಹ ಅನೇಕ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ‌. ಈ ಬೆನ್ನಲ್ಲೇ ಅಪ್ರಾಪ್ತ ಮಕ್ಕಳ ಬಾಲ್ಯವಿವಾಹ, ಅಪ್ರಾಪ್ತ ಮಕ್ಕಳ ಗರ್ಭಧಾರಣೆ ಪ್ರಕರಣಗಳ ಸಂಖ್ಯೆ ನಿಜಕ್ಕೂ ರಾಜ್ಯದ ಜನತೆಯನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ರಾಜ್ಯ ಸರ್ಕಾರ ಬಾಲ್ಯ ವಿವಾಹ ತಡೆಯುವುದಕ್ಕೆ ಹಲವಾರು ಕಾನೂನು ರೂಪಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ, ರಾಜ್ಯದಲ್ಲಿ ಒಂದೇ ವರ್ಷದಲ್ಲಿ 28,657 ಬಾಲ ಗರ್ಭಿಣಿಯರಾಗಿರುವ ವಿಷಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬಹಿರಂಗಗೊಂಡಿದೆ.


ಯಾದಗಿರಿ ಜಿಲ್ಲೆಯಲ್ಲಿ 921 ಬಾಲ ಗರ್ಭಿಣಿಯರಿದ್ದು, ಸುರಪುರ ತಾಲೂಕಿನಲ್ಲಿ 300ಕ್ಕೂ ಹೆಚ್ಚು ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎನ್ನಲಾಗ್ತಿದೆ. ಇದರಿಂದ ಯಾದಗಿರಿ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಿಲ್ಲುತ್ತಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾ ಘಟಕದ ಕಣ್ಣು ತಪ್ಪಿಸಿ ಬಾಲ್ಯ ವಿವಾಹವಾಗಿರೋದು ತಿಳಿದು ಬಂದಿದೆ. ಕೂಡಲೇ ಸರ್ಕಾರ ತಪ್ಪಿತಸ್ಥರ ಮೇಲೆ ಪ್ರಕರಣ ದಾಖಲಿಸಿ ಮತ್ತೆ ಇಂತಹ ಘಟನೆ ಜರುಗದಂತೆ ಎಚ್ಚರಿಕೆ ವಹಿಸಬೇಕಾಗಿದೆ.‌ ಇಂತಹ ಪ್ರಕರಣಗಳನ್ನು ಕಡೆಗಣಿಸದೆ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ಸೇರಿ ಇದರ ವಿರುದ್ಧ ಕಾರ್ಯಾಚರಿಸಬೇಕಿದೆ.