ಜ್ಯೋತಿಷಿಯ ಮನೆಯಿಂದ ಕದ್ದ ಹಣದ ಜೊತೆ ರೀಲ್ಸ್ ಮಾಡಿ ಎಡವಟ್ಟು – ಲಕ್ಷಾಂತರ ರೂಪಾಯಿ ದೋಚಿದ್ದ ಕಳ್ಳರು ಆರಾಮಾಗಿ ತಗಲಾಕ್ಕೊಂಡ್ರು..!!

ಜ್ಯೋತಿಷಿಯ ಮನೆಯಿಂದ ಕದ್ದ ಹಣದ ಜೊತೆ ರೀಲ್ಸ್ ಮಾಡಿ ಎಡವಟ್ಟು – ಲಕ್ಷಾಂತರ ರೂಪಾಯಿ ದೋಚಿದ್ದ ಕಳ್ಳರು ಆರಾಮಾಗಿ ತಗಲಾಕ್ಕೊಂಡ್ರು..!!

ನ್ಯೂಸ್‌ ಆ್ಯರೋ : ಖ್ಯಾತ ಜ್ಯೋತಿಷಿ ತರುಣ್ ಶರ್ಮಾ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದನ್ನು ಕಳವು ಮಾಡಿದ ಖದೀಮರು ಕೊನೆಗೂ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಖತರ್ನಾಕ್ ಕಳ್ಳರು ಪ್ಲಾನ್ ಮಾಡಿ ಜ್ಯೋತಿಷಿ ಮನೆಗ ಕನ್ನ ಹಾಕಿದ್ದಾರೆ. ಮನೆಯಲ್ಲಿದ್ದ ನಗದು ಹಣವನ್ನು ದೋಚಿ ರಾತ್ರೋರಾತ್ರಿ ಪರಾರಿಯಾಗಿದ್ದಾರೆ. ಜ್ಯೋತಿಷಿ ಸಂಪಾದಿಸಿದ್ದ ಹಣವೆಲ್ಲಾ ಕಳ್ಳರ ಪಾಲಾಗಿತ್ತು. ಈ ಸಂಬಂಧ ತರುಣ್ ಶರ್ಮಾ ಅವರು ಪೊಲೀಸರಿಗೆ ದೂರು ನೀಡಿದ್ದರು.

ಕಳ್ಳತನ ನಡೆದು ತಿಂಗಳು ಉರುಳಿದರೂ ಕಳ್ಳರ ಸುಳಿವು ಸಿಗಲಿಲ್ಲ. ಇತ್ತ ಕಳ್ಳರು ನಮ್ಮನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದು ಕಳ್ಳತನ ಮಾಡಿದ ನೋಟಿನ ಜೊತೆಗೆ ತೆಗೆದ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದ ಹಾಗೇ ಪೊಲೀಸರಿಗೆ ಕಳ್ಳನ ಸುಳಿವು ಸಿಕ್ಕಿದೆ. ಮಾಹಿತಿ ಪಡೆದ ಪೊಲೀಸರು ಓರ್ವನ ಖದೀಮನ ಬಂಧಿಸಿ 2 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿ ಈ ವಿಡಿಯೋ ಹರಿದಾಡಲು ಆರಂಭಿಸುತ್ತಿದ್ದಂತೆ ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು ಸೈಬರ್ ಕ್ರೈಂ ಪೊಲೀಸರ ನೆರವು ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ 2 ಲಕ್ಷ ರೂಪಾಯಿ ನಗದು, ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಇನ್ನು ಮತ್ತೊರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *