ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ – ಬೆಚ್ಚಿದ ಬೆಂಗಳೂರು, ಇದು ಹುಸಿ ಬೆದರಿಕೆ ಎಂದ ಕಮೀಷನರ್..!!

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ – ಬೆಚ್ಚಿದ ಬೆಂಗಳೂರು, ಇದು ಹುಸಿ ಬೆದರಿಕೆ ಎಂದ ಕಮೀಷನರ್..!!

ನ್ಯೂಸ್ ಆ್ಯರೋ‌ : ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ಕಳೆದ ವರ್ಷ ಇದೇ ರೀತಿ 30 ಇಮೇಲ್ ಬಂದಿತ್ತು, ಇದೀಗ ಮತ್ತೆ 15 ಶಾಲೆಗಳಿಗೆ ಕರೆ ಬಂದಿದೆ. ಈಗಾಗಲೇ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳದ ಸಿಬ್ಬಂದಿ , ಪೊಲೀಸರು ಶಾಲೆಗಳಿಗೆ ದೌಡಾಯಿಸಿ ತಪಾಸಣೆ ನಡೆಸುತ್ತಿದ್ದಾರೆ. ಶಾಲೆಯ ಶೌಚಾಲಯ, ಕೊಠಡಿ, ತರಗತಿ, ಸ್ಟಾಫ್ ರೂಮ್ ಸೇರಿದಂತೆ ಎಲ್ಲಾ ಕಡೆ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಇದು ಹುಸಿ ಬೆದರಿಕೆಯಾಗಿದೆ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅವರು ಹೇಳಿದರು.

ಇಮೇಲ್ ಮೂಲಕ ಕಿಡಿಗೇಡಿಗಳು ಬೆಂಗಳೂರು ನಗರದ ನ್ಯಾಪಲ್, ವಿದ್ಯಾಶಿಲ್ಪ, ಬಸವೇಶ್ವರನಗರ, ಯಲಹಂಕ ಸೇರಿದಂತೆ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ‌ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಾಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮಕ್ಕಳು ಆತಂಕಪಡುವುದು ಬೇಡ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದ್ದಾರೆ.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *