ಮತ್ತೆ ಬಿಟ್ ಕಾಯಿನ್ ಹಗರಣ ಸದ್ದು – ಕುಖ್ಯಾತ ಹ್ಯಾಕರ್ ಶ್ರೀಕಿ ನಿವಾಸದ ಮೇಲೆ ಎಸ್‌ಐಟಿ ದಾಳಿ

ಮತ್ತೆ ಬಿಟ್ ಕಾಯಿನ್ ಹಗರಣ ಸದ್ದು – ಕುಖ್ಯಾತ ಹ್ಯಾಕರ್ ಶ್ರೀಕಿ ನಿವಾಸದ ಮೇಲೆ ಎಸ್‌ಐಟಿ ದಾಳಿ

ನ್ಯೂಸ್ ಆ್ಯರೋ : ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತವನ ಸಹಚರ ಸುನೀಶ್ ಹೆಗ್ಡೆ ನಿವಾಸದ ಮೇಲೆ ಎಸ್‌ಐಟಿ ತಂಡ ಮಂಗಳವಾರ ದಾಳಿ ನಡೆಸಿದೆ.

ನ್ಯಾಯಾಲಯದಿಂದ ಸೋಮವಾರ ಸಂಜೆ ವಾರೆಂಟ್ ಪಡೆದಿದ್ದ ಎಸ್ಐಟಿ ಮಂಗಳವಾರ ಮುಂಜಾನೆಯೇ ಬೆಂಗಳೂರಿನ ಸಂಜಯನಗರದಲ್ಲಿರುವ ಅವರ ನಿವಾಸದ ಮೇಲೆ ದಾಳಿ ಮಾಡಿದೆ.

ನೂರಾರು ಕೋಟಿ ರೂ. ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್ ಶ್ರೀಕೃಷ್ಣ ಈ ಹಿಂದೆ ಸರ್ಕಾರದ ನೇಮಕಾತಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡಿದ್ದ. ದೇಶವಿದೇಶದ ಪ್ರತಿಷ್ಠಿತ ಸಂಸ್ಥೆಗಳ ವೆಬ್ ಸೈಟ್ ಹ್ಯಾಕ್ ಮಾಡಿ ನೂರಾರು ಕೋಟಿ ರೂ. ಗಳಿಸಿಕೊಂಡಿದ್ದ. ಈ ಹಣವನ್ನು ಬಿಟ್ ಕಾಯಿನ್ ಗೆ ಪರಿವರ್ತಿಸಿದ್ದ. ಡ್ರಗ್ಸ್ ವಹಿವಾಟಿನ ಮೇಲೆ ಸಿಸಿಬಿ ದಾಳಿ ಎಸಗಿದ ಸಂದರ್ಭದಲ್ಲಿ ಈತನ ಹಗರಣ ಬಯಲಿಗೆ ಬಂದಿತ್ತು.

ಈತನ ಬಳಿ ಇದ್ದ ಬಿಟ್ ಕಾಯಿನ್‌ಗಳನ್ನು ಅಧಿಕಾರಿಗಳ ಮೂಲಕ ವ್ಯಾಲೆಟ್ ನಿಂದ ರಾಜಕಾರಣಿಗಳೇ ವರ್ಗಾಯಿಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.

ಹಲವು ಪ್ರಭಾವಿಗಳೂ ಈತನೊಡನೆ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದ್ದು, ಈತ ತನಿಖಾಧಿಕಾರಿಗಳಿಗೇ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *