ಹಾಸ್ಟೆಲ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿನಿ – ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ, ಪರಿಶೀಲನೆ

ಹಾಸ್ಟೆಲ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿನಿ – ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ, ಪರಿಶೀಲನೆ

ನ್ಯೂಸ್ ಆ್ಯರೋ : ವಸತಿ ಶಾಲೆಯಲ್ಲೇ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರಾಯಚೂರು ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ‌ ಪವಿತ್ರಾ(15) ಮೃತಪಟ್ಟಿರುವ ವಿದ್ಯಾರ್ಥಿನಿಯೆಂದು ಗುರುತಿಸಲಾಗಿದೆ.

ದೇವದುರ್ಗ ತಾಲೂಕಿನ ಬೋಗಿರಾಮನಗುಂಡ ಗ್ರಾಮದ ನಿವಾಸಿಯಾಗಿದ್ದು, SSLC ತರಗತಿಯಲ್ಲಿ‌ ವಿದ್ಯಾಭ್ಯಾಸ ಮಾಡುವುದಕ್ಕಾಗಿ ಕಿತ್ತೂರುರಾಣಿ ಚನ್ನಮ್ಮ ವಸತಿಯಲ್ಲಿ ಶಾಲೆಯಲ್ಲಿ ಇದ್ದಳು. ಆದರೆ ನಿನ್ನೆಯ ದಿನ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.

ಘಟನಾ ವಿಷಯ ತಿಳಿದು ಸ್ಥಳಕ್ಕೆ ಡಿಎಸ್ಪಿ ಮಂಜುನಾಥ, ಜಿಲ್ಲಾ ಪರಿಶಿಷ್ಟ ಪಂಗಡ ಅಧಿಕಾರಿ ರಾಜೇಂದ್ರ ಜಲ್ದರ್, ಗ್ರಾಮೀಣ ಸಿ ಪಿ ಐ ಗುಂಡೂರಾವ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತ ಮಗಳನ್ನು ಕಳೆದುಕೊಂಡು‌ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ವಸತಿ ನಿಲಯದ ಇತರೆ ವಿದ್ಯಾರ್ಥಿನಿಯರು ಆತಂಕಗೊಂಡಿದ್ದರು.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *