ರಾಜ್ಯಾದ್ಯಂತ ಆಸ್ತಿ ನೋಂದಣಿ 30% ದುಬಾರಿ – ಪರಿಷ್ಕೃತ ಮಾರ್ಗಸೂಚಿ ದರ ಇಂದಿನಿಂದ ಅನ್ವಯ

ರಾಜ್ಯಾದ್ಯಂತ ಆಸ್ತಿ ನೋಂದಣಿ 30% ದುಬಾರಿ – ಪರಿಷ್ಕೃತ ಮಾರ್ಗಸೂಚಿ ದರ ಇಂದಿನಿಂದ ಅನ್ವಯ

ನ್ಯೂಸ್ ಆ್ಯರೋ : ಇಂದಿನಿಂದ ಆಸ್ತಿ ನೋಂದಣಿ ಶೇಕಡ 20 ರಿಂದ 30ರವರೆಗೆ ದುಬಾರಿ ಆಗಲಿದೆ. ರಾಜ್ಯದಾದ್ಯಂತ ಸ್ಥಿರಾಸ್ತಿ ಮಾರ್ಗಸೂಚಿ ದರ ಏರಿಕೆಯಾಗಿದೆ.

ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗುವ ಆಸ್ತಿಗಳಿಗೆ ಪರಿಷ್ಕೃತ ಮಾರ್ಗಸೂಚಿ ದರ ಅನ್ವಯವಾಗಲಿದ್ದು, ಶೇಕಡ 20 ರಿಂದ 30ರಷ್ಟು ನೋಂದಣಿ ಮತ್ತು ಮುದ್ರಾಂಕ ಶುಲ್ಕದ ಹೊರೆ ಹೆಚ್ಚಾಗಲಿದೆ.

ಸೆಪ್ಟೆಂಬರ್ 29ಕ್ಕೆ ರಾಜ್ಯದಲ್ಲಿ ಹಳೆಯ ಮಾರ್ಗಸೂಚಿ ದರ ಅನ್ವಯ ಆಸ್ತಿ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿದೆ.

ಸೆಪ್ಟೆಂಬರ್ 30, ಅಕ್ಟೋಬರ್ 1 ಮತ್ತು ಅಕ್ಟೋಬರ್ 2ರಂದು ಸತತವಾಗಿ ರಜೆ ಇದ್ದು, ಅಕ್ಟೋಬರ್ 3ರಿಂದ ಹೊಸ ಮಾರ್ಗಸೂಚಿ ದರದ ಅನ್ವಯ ಆಸ್ತಿ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಇಂದಿನಿಂದ ಆಸ್ತಿ ಖರೀದಿದಾರರಿಗೆ ಹೆಚ್ಚಿನ ಶುಲ್ಕದ ಹೊರ ಬೀಳಲಿದೆ.

ರಾಜ್ಯದಲ್ಲಿ ಮಾರ್ಗಸೂಚಿ ದರ ಏರಿಕೆಯಾದರೆ ವರ್ಷಕ್ಕೆ 2000 ಕೋಟಿ ರೂ ಆದಾಯ ಬರುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಇತ್ತೀಚೆಗೆ ಹೇಳಿಕೆ ನೀಡಿದ್ದರು. ರಾಜ್ಯದಲ್ಲಿ ಎಲ್ಲಾ ಕಡೆ ಮಾರ್ಗಸೂಚಿ ದರ ಏರಿಕೆ ಆಗಲ್ಲ. ಕೆಲವು ಕಡೆ ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಳ ಇದ್ದರೆ, ಅಂತಹ ಪ್ರದೇಶಗಳಲ್ಲಿ ದರ ಹೆಚ್ಚಳವಾಗುವುದಿಲ್ಲ ಎಂದಿದ್ದರು.

ಇನ್ನೂ, ಆಸ್ತಿ ನೋಂದಣಿ ಸೇರಿದಂತೆ ಇತರೆ ಪ್ರಕ್ರಿಯೆಗಳಿಗೆ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ಆಸ್ತಿದಾರರೇ ಬಯಸಿದ ದಿನ, ಸಮಯಕ್ಕೆ ಆಸ್ತಿ ನೋಂದಣಿ ಮಾಡಿಕೊಳ್ಳುವ, ಆನ್ಲೈನ್ನಲ್ಲೇ ಶುಲ್ಕ ಪಾವತಿ ವ್ಯವಸ್ಥೆಯಿರುವ ‘ಕಾವೇರಿ 2.0’ ತಂತ್ರಾಂಶವು ಈಗಾಗಲೇ ಅಳವಡಿಕೆಯಾಗಿದೆ.

ಮಾರ್ಗಸೂಚಿ ದರ ಪರಿಷ್ಕರಣೆ ಪ್ರಕ್ರಿಯೆ ಆರಂಭವಾದ ನಂತರ 20 ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ಭಾರಿ ಪ್ರಮಾಣದ ಆಸ್ತಿ ನೋಂದಣಿ ಆಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 1762 ಕೋಟಿ ರೂ. ಸಂಗ್ರಹವಾಗಿದೆ. ಸೆಪ್ಟೆಂಬರ್ ಕೊನೆಯ ವಾರ 1200 ಕೋಟಿ ರೂ. ಸಂಗ್ರಹವಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ನಾಳೆಯಿಂದ ಹೊಸ ಮಾರ್ಗಸೂಚಿ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ಸಿದ್ಧತೆ ಮಾಡಿಕೊಂಡಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *