Sudden increase in alcohol consumption in the state, huge revenue for the exchequer

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ ಖುಷಿ ಹೆಚ್ಚಿಸಿದೆ.

ಈ ಬಾರಿ ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ 0.43 ಶೇ. ಹೆಚ್ಚಳವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡಿ ಬೇರೆ ಯೋಜನೆಗಳಿಗೆ ಹಣ ನೀಡಲು ಕಷ್ಟಪಡುತ್ತಿದ್ದ ಸರ್ಕಾರಕ್ಕೆ ಮದ್ಯ ಪ್ರಿಯರು ಹೆಗಲು ನೀಡಿದ್ದಾರೆ.

ಕಳೆದ ಬಾರಿ ಮದ್ಯ ದರ ಏರಿಕೆಯಾದರೂ ತಲೆ ಕೆಡಿಸಿಕೊಳ್ಳದ ಮದ್ಯ ಪ್ರಿಯರು ಕುಡಿಯುವದನ್ನು ಕಡಿಮೆ ಮಾಡಿಲ್ಲ. ಕಳೆದ ವರ್ಷ ದಿನಕ್ಕೆ 80 ಕೋಟಿ ರೂ. ಸರಾಸರಿ ಆದಾಯ ಬರುತ್ತಿತ್ತು. ಈಗ ಒಂದು ದಿನಕ್ಕೆ 90 ಕೋಟಿ ರೂ,ಗೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅದರಲ್ಲೂ ಸದ್ಯ ಚಳಿಗಾಲ ಶುರುವಾಗ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಗೆ ಭಾರೀ ಬೇಡಿಕೆ ಬಂದಿದ್ದು, ನವೆಂಬರ್ ನಲ್ಲಿ ಬರೋಬ್ಬರಿ 6 ಲಕ್ಷ ಬಿಯರ್ ಬಾಕ್ಸ್ ಗಳು ಸೇಲ್ ಆಗಿದೆ ಎಂದು ಮೂಲಗಳು ತಿಳಿಸಿದೆ. ಕಳೆದ ವರ್ಷ ನವೆಂಬರ್ ತಿಂಗಳಲ್ಲಿ 29.95 ಲಕ್ಷ ಬಾಕ್ಸ್ ಸೇಲ್ ಆಗಿದ್ರೆ , ಈ ವರ್ಷ ನವೆಂಬರ್ ನಲ್ಲಿ 35.05 ಲಕ್ಷ ಬಾಕ್ಸ್ ಮಾರಾಟವಾಗಿದೆ. 2023 ನವೆಂಬರ್ ನಲ್ಲಿ 2,855 ಕೋಟಿ ರೂ. ಆದಾಯ ಬಂದಿದೆ ಎನ್ನಲಾಗಿದೆ.