ರಾಜ್ಯದ 5,8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ – ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗೆ ಜಯ

ರಾಜ್ಯದ 5,8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ – ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗೆ ಜಯ

ನ್ಯೂಸ್ ಆ್ಯರೋ : ರಾಜ್ಯಾದ್ಯಂತ ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದ್ದು, ಸದ್ಯ ಆ ಪರೀಕ್ಷೆಗಳನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ.

ಈ ಮೊದಲೇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಆದರೆ ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಬೋರ್ಡ್ ಪರೀಕ್ಷೆ ಮತ್ತೆ ರದ್ದುಗೊಂಡಂತಾಗಿದೆ.

ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.

ಆದರೆ ಈ ವಿಚಾರವಾಗಿ ಖಾಸಗಿ ಅನುದಾನ ರಹಿತ ಶಾಲೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಇಂದು ವಿಚಾರಣೆ ನಡೆಸಿತು. ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ.

ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ ತರಗತಿ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮುಂದುವರೆಸಿ ಆದೇಶಿಸಿದೆ. ಆದರೆ 11ನೇ ತರಗತಿ ಪರೀಕ್ಷೆಗಳು ಪೂರ್ಣಗೊಂಡಿರುವುದರಿಂದ ನ್ಯಾಯಪೀಠವು ಯಾವುದೇ ಆದೇಶ ಮಾಡಿಲ್ಲ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *