25 ಬಾಕ್ಸ್ ನಲ್ಲಿ 500 ಮುಖಬೆಲೆಯ ಕಂತೆ ಕಂತೆ ಹಣ ಸೀಝ್ – ಫ್ಲ್ಯಾಟ್ ನಲ್ಲಿ ಸಿಕ್ಕ 42 ಕೋಟಿ ದುಡ್ಡು ಕಂಡು ಐಟಿ ಅಧಿಕಾರಿಗಳೇ ಶಾಕ್…!!

25 ಬಾಕ್ಸ್ ನಲ್ಲಿ 500 ಮುಖಬೆಲೆಯ ಕಂತೆ ಕಂತೆ ಹಣ ಸೀಝ್ – ಫ್ಲ್ಯಾಟ್ ನಲ್ಲಿ ಸಿಕ್ಕ 42 ಕೋಟಿ ದುಡ್ಡು ಕಂಡು ಐಟಿ ಅಧಿಕಾರಿಗಳೇ ಶಾಕ್…!!

ನ್ಯೂಸ್ ಆ್ಯರೋ : ಬೆಂಗಳೂರಿನ ಖ್ಯಾತ ಬಿಲ್ಡರ್, ಕಾಂಟ್ರ್ಯಾಕ್ಟರ್ ಅಂಬಿಕಾಪತಿ ಹಾಗೂ ಅವರ ಪತ್ನಿ ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ನಿವಾಸದ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಇವರಿಗೆ ಸಂಬಂಧಿಸಿದಂತೆ ನಗರದ ಐದಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಶೋಧಕಾರ್ಯ ಮುಂದುವರಿಸಿದ್ದಾರೆ.

ಅಲ್ಲದೇ ಇವರ ಸಂಬಂಧಿ ಪ್ರದೀಪ್​ ಅನ್ನೋರಿಗೆ ಸೇರಿದ್ದ ಫ್ಲ್ಯಾಟ್ ಒಂದರಲ್ಲಿ ಕಂತೆ ಕಂತೆ ನೋಟುಗಳಲ್ಲಿ ಇಡಲಾಗಿದ್ದ 42 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪತ್ತೆಯಾದ ಒಟ್ಟು ಮೊತ್ತವನ್ನು ಅಧಿಕಾರಿಗಳು ಎಣಿಕೆ ಮಾಡಿದ್ದಾರೆ.
ಅಂಬಿಕಾಪತಿಗೆ ಸಂಬಂಧ ಪಟ್ಟ ಬ್ಯಾಂಕ್ ಅಕೌಂಟ್​ಗಳು ಮತ್ತು ಬ್ಯಾಂಕ್ ಲಾಕರ್​ಗಳ ಬಗ್ಗೆ ಮಾಹಿತಿ ಸಂಗ್ರಹ‌ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ದಾಳಿ ವೇಳೆ ಫ್ಲ್ಯಾಟ್‌ವೊಂದರಲ್ಲಿ ಒಂದಲ್ಲಾ.. ಎರಡಲ್ಲಾ.. ಬರೋಬ್ಬರಿ 25 ಬಾಕ್ಸ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಐನೂರು ಮುಖಬೆಲೆಯ ಕಂತೆ ಕಂತೆ ಹಣ ಪತ್ತೆಯಾಗಿದೆ

ಭ್ರಷ್ಟರು ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಿ ನಡೆಸಿದ್ದರು ಎಂದು ತಿಳಿದು ಬಂದಿದೆ. ವಿಷಯ ಅರಿತ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ (ಗುರುವಾರ) ಸಂಜೆ 6ಗಂಟೆಗೆ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಆರ್ ಟಿ ನಗರದ ಎರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಆತ್ಮಾನಂದ ಕಾಲೋನಿಯ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಲಾಗಿದೆ. ಫ್ಯಾಟ್‌ನಲ್ಲಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಪತ್ತೆಯಾದ ಹಣದ ಒಟ್ಟಾರೆ ಮೊತ್ತವನ್ನ ಐಟಿ ಅಧಿಕಾರಿಗಳು ಎಣಿಕೆ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ಎಷ್ಟು ಹಣ ಪತ್ತೆಯಾಗಿವೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. ಇದೇ ವೇಳೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ನಿವಾಸದ ಮೇಲೂ ಐಟಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *