ಟೊಮ್ಯಾಟೋ ಬೆಲೆ‌ ಗಗನಕ್ಕೇರಿದ್ರೂ‌ ನೋ ಯೂಸ್ – ರೈತರೊಬ್ಬರ ಜಮೀನಿನ ಒಂದೂವರೆ ಲಕ್ಷ ಮೌಲ್ಯದ ಟೊಮ್ಯಾಟೊ ಕಳವು

ಟೊಮ್ಯಾಟೋ ಬೆಲೆ‌ ಗಗನಕ್ಕೇರಿದ್ರೂ‌ ನೋ ಯೂಸ್ – ರೈತರೊಬ್ಬರ ಜಮೀನಿನ ಒಂದೂವರೆ ಲಕ್ಷ ಮೌಲ್ಯದ ಟೊಮ್ಯಾಟೊ ಕಳವು

ನ್ಯೂಸ್ ಆ್ಯರೋ‌ : ಹವಾಮಾನ ವೈಪರೀತ್ಯದಿಂದಾಗಿ ಟೊಮ್ಯಾಟೋ ಬೆಳೆಗೆ ಹಾನಿಯಾಗಿದ್ದು ಹೆಚ್ಚಿನ ಬೇಡಿಕೆ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಿದೆ. ದೇಶದೆಲ್ಲೆಡೆ ಈ ತರಕಾರಿ ದರ ಶತಕ ದಾಟಿದೆ. ಈ ಮಧ್ಯೆ ಹಾಸನದಲ್ಲಿ ಲಕ್ಷಾಂತರ ರೂ. ಮೌಲ್ಯದ ಟೊಮ್ಯಾಟೋ ಕಳವು ಮಾಡಲಾಗಿದೆ.

ಎಲ್ಲಿ ಕಳವು?

ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಧರಣಿ ಎನ್ನುವವರು ಬೆಳೆದಿದ್ದ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಟೊಮ್ಯಾಟೋವನ್ನು ಕಳ್ಳರು ಎಗರಿಸಿದ್ದಾರೆ.

ಜಮೀನಿಗೆ ನುಗ್ಗಿದ ಕಳ್ಳರು

ಸುಮಾರು 50ರಿಂದ 60 ಬ್ಯಾಗ್ ನಷ್ಟು ಟೊಮ್ಯಾಟೊ ವನ್ನು ಕಳ್ಳರು ಕದ್ದಿದ್ದಾರೆ. ಧರಣಿ ಇಂದು ಮುಂಜಾನೆ ಜಮೀನಿಗೆ ತೆರಳಿದಾಗ ಈ ಸಂಗತಿ ಬೆಳಕಿಗೆ ಬಂದಿದೆ.

ಧರಣಿ ಹಳೇಬೀಡು ಪೊಲೀಸರಿಗೆ ದೂರು ನೀಡಲಾಗಿದ್ದು, ಸದ್ಯ ಅವರು ತನಿಖೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದ ಧರಣಿಗೆ ಶಾಕ್ ಎದುರಾಗಿದ್ದು ಸುಳ್ಳಲ್ಲ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *