ಬೆಂಗಳೂರು : ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಉಡುಪಿ ಮೂಲದ ತಾಯಿ, ಇಬ್ಬರು ಗಂಡು ಮಕ್ಕಳು – ಸಾಲದ ಶೂಲಕ್ಕೆ ಉಸಿರು ಚೆಲ್ಲಿದ ಸಂಪೂರ್ಣ ಕುಟುಂಬ

ಬೆಂಗಳೂರು : ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಉಡುಪಿ ಮೂಲದ ತಾಯಿ, ಇಬ್ಬರು ಗಂಡು ಮಕ್ಕಳು – ಸಾಲದ ಶೂಲಕ್ಕೆ ಉಸಿರು ಚೆಲ್ಲಿದ ಸಂಪೂರ್ಣ ಕುಟುಂಬ

ನ್ಯೂಸ್ ಆ್ಯರೋ : ಉಡುಪಿ ಮೂಲದ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ಮೃತರನ್ನು ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್‌ ಮತ್ತು ನಿಶ್ಚಿತ್‌ ಎಂದು ಗುರುತಿಸಲಾಗಿದೆ.

ಸುಕನ್ಯಾ ಪತಿ ಜಯಾನಂದ್‌ ಫ್ಯಾಕ್ಟರಿ ನಡೆಸುತ್ತಿದ್ದರು. ಕೊರೊನಾ ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್‌ ಫ್ಯಾಕ್ಟರಿ ಬಂದ್‌ ಮಾಡಿದ್ದರು. ಜಯಾನಂದ್‌ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್‌ ಹೇಳಿಕೊಡುತ್ತಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.

ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು.

ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಹೀಗಾಗಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *