ದೇಶದ ಮೊದಲ ನೆಲದಡಿ ವಿದ್ಯುತ್ ಪರಿವರ್ತಕ ಕಾರ್ಯಾರಂಭ – ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಶಾಸಕರು ಭಾಗಿ

ದೇಶದ ಮೊದಲ ನೆಲದಡಿ ವಿದ್ಯುತ್ ಪರಿವರ್ತಕ ಕಾರ್ಯಾರಂಭ – ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಶಾಸಕರು ಭಾಗಿ

ನ್ಯೂಸ್‌ ಆ್ಯರೋ : ದೇಶದಲ್ಲೇ ಪ್ರಥಮ ಬಾರಿಗೆ ನೆಲದಡಿಯಲ್ಲಿ ನಿರ್ಮಿಸಿರುವ 500 ಕೆವಿಎ ಸಾಮರ್ಥ್ಯದ ವಿದ್ಯುತ್‌ ಪರಿವರ್ತಕ ಕೇಂದ್ರವನ್ನು ಮಲ್ಲೇಶ್ವರದ 15ನೇ ಅಡ್ಡರಸ್ತೆಯಲ್ಲಿ ನಿರ್ಮಿಸಿದ್ದು ಇದನ್ನುಇಂಧನ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಉದ್ಘಾಟಿಸಿದರು.

ಬಿಬಿಎಂಪಿ ಸಹಭಾಗಿತ್ವದಲ್ಲಿ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಈ ಕೇಂದ್ರವನ್ನು ನಿರ್ಮಿಸಿದ್ದು, ವಿಶೇಷವಾಗಿ ನೆಲದಡಿಯಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬೆಸ್ಕಾಂ ಅಧಿಕಾರಿ, ನೆಲದಡಿಯಲ್ಲಿ ಕೇಬಲ್‌ ಹಾಗೂ ವಿದ್ಯುತ್‌ ಪರಿವರ್ತಕ ವ್ಯವಸ್ಥೆಯು ಸುರಕ್ಷತೆ ಹಾಗೂ ಗುಣಮಟ್ಟದ ವಿದ್ಯುತ್‌ ಪೂರೈಕೆಗೆ ಸಹಕಾರಿಯಾಗಲಿದೆ. ಈ ಯೋಜನೆಯಡಿ ವಿತರಣಾ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್‌ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ನೆಲದಡಿಯಲ್ಲಿ ಅಳವಡಿಸಲಾಗಿದೆ. ಇದರಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸುವ ಜತೆಗೆ ವಿದ್ಯುತ್‌ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ. ಗುಣಮಟ್ಟದ ವಿದ್ಯುತ್ ಪೂರೈಸಲು ಕೂಡ ಈ ಯೋಜನೆ ಸಹಕಾರಿಯಾಗಲಿದೆ ಎಂದರು.

ಒಟ್ಟು ₹1.97 ಕೋಟಿ ವೆಚ್ಚದಲ್ಲಿ ಈ ಪರಿವರ್ತಕ ಕೇಂದ್ರವನ್ನು (ಟಿ.ಸಿ) ನಿರ್ಮಿಸಲಾಗಿದೆ. ಈ ಪೈಕಿ ಸಿವಿಲ್‌ ಕಾಮಗಾರಿಗೆ ₹64 ಲಕ್ಷ ಮತ್ತು ಎಲೆಕ್ಟ್ರಿಕಲ್‌ ಕಾಮಗಾರಿಗೆ ₹1.33 ಕೋಟಿ ವೆಚ್ಚವಾಗಿದೆ. ಸಿವಿಲ್‌ ಕಾಮಗಾರಿಗೆ ಬಿಬಿಎಂಪಿ ಅನುದಾನ ಒದಗಿಸಿತ್ತು. ಕೇಂದ್ರದ ನಿರ್ಮಾಣ ಕಾಮಗಾರಿ 2022ರ ಮೇ 20ರಿಂದ ಆರಂಭಗೊಂಡಿತ್ತು. ಇದು 14 ಮೀಟರ್‌ ಉದ್ದ, 5 ಮೀಟರ್‌ ಅಗಲ ಮತ್ತು 4 ಮೀಟರ್‌ ಆಳ ಇದೆ ಎಂದರು.

ಕಡಿಮೆ ಜಾಗದಲ್ಲಿ ಹೆಚ್ಚಿನ ಸುರಕ್ಷತೆ ನೀಡಲಿದೆ

ಪಾದಚಾರಿ ಮಾರ್ಗದ ನಾಲ್ಕು ಮೀಟರ್‌ ಅಡಿ ಆಳದಲ್ಲಿ ವಿದ್ಯುತ್‌ ಪರಿವರ್ತಕ ಅಳವಡಿಸಲಾಗಿದೆ. ಈ ವ್ಯವಸ್ಥೆಗೆ ಹೆಚ್ಚಿನ ಜಾಗದ ಅಗತ್ಯವಿಲ್ಲ. ಕಡಿಮೆ ಜಾಗದಲ್ಲಿ ಸುರಕ್ಷಿತವಾಗಿರುವ ವ್ಯವಸ್ಥೆ ಇದಾಗಿದೆ. ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜತೆಗೆ, ಗಾಳಿಯ ವ್ಯವಸ್ಥೆಯೂ ಇದೆ. ನೀರಿನ ಸಂಪು ಮಾದರಿಯಲ್ಲಿ ದಪ್ಪನೆಯ ಕಾಂಕ್ರೀಟ್‌ನ ನಾಲ್ಕು ಗೋಡೆಗಳನ್ನು ನಿರ್ಮಿಸಿ ವಿದ್ಯುತ್‌ ಪರಿವರ್ತಕ ಸ್ಥಾಪಿಸಲಾಗಿದೆ. ಇಲ್ಲಿ ಸ್ಲ್ಯಾಬ್‌ ಹಾಕಿರುವುದರಿಂದ ನಾಗರಿಕರು ಯಾವುದೇ ರೀತಿಯ ತೊಂದರೆ ಇಲ್ಲದೆಯೇ ಈ ಸ್ಥಳದ ಮೇಲೆಯೇ ನಡೆದಾಡಬಹುದಾಗಿದೆ.

ಮಲ್ಲೇಶ್ವರದ 15ನೇ ಅಡ್ಡರಸ್ತೆಯಲ್ಲಿ ನಿರ್ಮಿಸಿರುವ ಈ ವಿದ್ಯುತ್‌ ಪರಿವರ್ತಕ ಕೇಂದ್ರವನ್ನು ಇಂಧನ ಸಚಿವ ಕೆ. ಜೆ. ಜಾರ್ಜ್‌ ಅವರು ಉದ್ಘಾಟಿಸಿದ್ದು, ಶಾಸಕ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಇದ್ದರು.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *