
Weather Report : ಕರಾವಳಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ – ಮುಂದಿನ ನಾಲ್ಕೈದು ದಿನ ವರುಣಾರ್ಭಟ
- ಕರ್ನಾಟಕ
- March 16, 2023
- No Comment
- 515
ನ್ಯೂಸ್ ಆ್ಯರೋ : ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 18 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮಾರ್ಚ್ 16 ರಿಂದ ಮಾರ್ಚ್ 18 ರವರೆಗೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ 16 ರಿಂದ 18 ರವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಯ ಕೆಲವಡೆ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 17 ರಿಂದ 18 ರವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣವಿರಲಿದೆ ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದೆಹಲಿಯಲ್ಲಿ ತಾಪಮಾನ ಹೆಚ್ಚಾಗುತ್ತಿದೆ, ಹಾಗೆಯೇ ಜಾರ್ಖಂಡ್ನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.