ಪುತ್ತೂರು : ಅತ್ಯಾಚಾರ ಪ್ರಕರಣದಲ್ಲಿ ಅರುಣ್ ಕುಮಾರ್ ಪುತ್ತಿಲಗೆ ಬಿಗ್ ರಿಲೀಫ್ – ಪ್ರಕರಣದ ತನಿಖೆಗೆ ತಡೆಯಾಜ್ಞೆ ವಿಧಿಸಿದ ಹೈಕೋರ್ಟ್
ನ್ಯೂಸ್ ಆ್ಯರೋ : ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬೆಂಗಳೂರಿನ ವಿಸ್ಟಾ ಪೈ ಹೊಟೇಲ್ ನಲ್ಲಿ ಕಳೆದ ವರ್ಷ ತನ್ನ ಮೇಲೆ ಅತ್ಯಾಚಾರ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಸಾಮೆತ್ತಡ್ಕ ನಿವಾಸಿ 47 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಅ.ಕ್ರ.45/2024 ರಂತೆ IPC 1860 (U/s-417,354(a), 506 ಸೆಕ್ಷನ್ ನ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ನಲ್ಲಿ ಅರುಣ್ ಕುಮಾರ್ ಪುತ್ತಿಲ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪಿ. ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಮಹಿಳೆಯೊಂದಿಗಿನ ಆಡಿಯೋ ವೈರಲ್ ಆದ ಬಳಿಕ ಅವಮಾನಕಾರಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಬಳಿಕ ಈ ಪ್ರಕರಣ ದಾಖಲಾಗಿದೆ. ಇದು ಸುಳ್ಳು ಆರೋಪವಾಗಿದ್ದು ಈ ಬಗ್ಗೆ ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ನ್ಯಾಯಪೀಠದ ಗಮನ ಸೆಳೆದಿದ್ದರು.
ವಾದ ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ದಾಖಲಾಗಿದ್ದ ಎಫ್.ಐ.ಆರ್. ಮತ್ತು ಮುಂದಿನ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.
Leave a Comment