ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ – ಹೊಸ ನಾಯಕನಿಗೆ ಟಿ20 ಪಟ್ಟಾಭಿಷೇಕ
ನ್ಯೂಸ್ ಆ್ಯರೋ : ಇದೇ ತಿಂಗಳ 27ರಿಂದ ಆರಂಭವಾಗಲಿರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಪರವಾಗಿ ಆಯ್ಕೆ ಸಮಿತಿ ಪ್ರಕಟಿಸಿದ್ದು, ಅಚ್ಚರಿಯ ಹೆಸರು ನಾಯಕನ ರೂಪದಲ್ಲಿ ಕಂಡುಬಂದಿದೆ..
ಈ ಪ್ರವಾಸದಲ್ಲಿ ಮೂರು ಪಂದ್ಯಗಳ ಟಿ 20 ಸರಣಿ ನಂತರ ಮೂರು ಪಂದ್ಯಗಳ ಏಕದಿನ ಸರಣಿ ಇರಲಿದೆ.
ಅಚ್ಚರಿಯೆಂಬಂತೆ ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕರಾಗಿ ಆಯ್ಕೆಯಾಗಿದ್ದು, ನಿರೀಕ್ಷಿತ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ಗೆ ಪಟ್ಟಕಟ್ಟಿದ್ದಾರೆ. ಇದೇ ವೇಳೆ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆದಿದ್ದಾರೆ.
ಟಿ20 ತಂಡಕ್ಕೆ ಶುಭ್ಮನ್ ಗಿಲ್ ಉಪನಾಯಕರಾಗಿದ್ದು, ಹಾರ್ದಿಕ್ ಪಾಂಡ್ಯ ಕೂಡ ಸರಣಿಗೆ ಲಭ್ಯರಾಗಿದ್ದಾರೆ. ವಾಷಿಂಗ್ಟನ್ ಸುಂದರ್, ಖಲೀಲ್ ಅಹಮದ್ ಅವಕಾಶ ಪಡೆದಿದ್ದಾರೆ. ರಿಷಭ್ ಪಂತ್ ಜತೆ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಆಗಿ ಅವಕಾಶ ಪಡೆದಿದ್ದಾರೆ. ರಿಯಾನ್ ಪರಾಗ್ ಜೊತೆ ರಿಂಕು ಸಿಂಗ್ ತಂಡದಲ್ಲಿದ್ದಾರೆ.
ಏಕದಿನ ತಂಡದಲ್ಲಿ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಇದ್ದರೆ, ಕೆ. ಎಲ್ ರಾಹುಲ್ ಇಲ್ಲಿ ವಿಕೆಟ್ ಕೀಪರ್ ಕೋಟಾದಲ್ಲಿ ಅವಕಾಶ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್, ಖಲೀಲ್ ಅಹಮದ್ , ಹರ್ಷಿತ್ ರಾಣಾ ಬೌಲಿಂಗ್ನಲ್ಲಿ ಅವಕಾಶ ಪಡೆದಿದ್ದಾರೆ. ರಿಯಾನ್ ಪರಾಗ್, ಶಿವಂ ದುಬೆ ಏಕದಿನ ಮಾದರಿಯಲ್ಲೂ ತಂಡ ಸೇರಿದ್ದಾರೆ. ಆದರೆ ಎರಡೂ ತಂಡಗಳಿಗೆ ಜಸ್ಪ್ರಿತ್ ಬುಮ್ರಾ ಅಲಭ್ಯರಾಗಿದ್ದು, ವಿಶ್ರಾಂತಿ ನೀಡಲಾಗಿದೆ.
ಟಿ20 ತಂಡ ಹೀಗಿದೆ :
ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ. ಸಿರಾಜ್
ಏಕದಿನ ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
Leave a Comment