ಟೀಮ್ ಇಂಡಿಯಾಗೆ ಬಿಗ್ ಶಾಕ್; ಅಶ್ವಿನ್ ಬೆನ್ನಲ್ಲೇ ದಿಢೀರ್ ನಿವೃತ್ತಿ ಘೋಷಿಸಿದ ಸ್ಟಾರ್ ಕ್ರಿಕೆಟರ್
ನ್ಯೂಸ್ ಆ್ಯರೋ: ಸದ್ಯ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡೆಯುತ್ತಿದೆ. ಸಿಡ್ನಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಕೊನೆಯ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕಿದೆ. ಇದರ ಮಧ್ಯೆ ಟೀಮ್ ಇಂಡಿಯಾಗೆ ಆಘಾತದ ಸುದ್ದಿ ಒಂದಿದೆ.
ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿ ಶಾಕ್ ಕೊಟ್ಟಿದ್ದರು. ಈ ಬೆನ್ನಲ್ಲೇ ಭಾರತೀಯ ಕ್ರಿಕೆಟಿಗ ಶೆಲ್ಡನ್ ಜಾಕ್ಸನ್ ಸೀಮಿತ ಓವರ್ಗಳ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಶೆಲ್ಡನ್ ಜಾಕ್ಸನ್ ಸೌರಾಷ್ಟ್ರ ಪರ ದೇಶೀಯ ಕ್ರಿಕೆಟ್ ಆಡುತ್ತಿದ್ದರು. ಇವರು ವಿಕೆಟ್ ಕೀಪರ್ ಬ್ಯಾಟರ್ ಆಗಿದ್ದಾರೆ. ಶೆಲ್ಡನ್ ಜಾಕ್ಸನ್ 86 ಲಿಸ್ಟ್ ಎ ಪಂದ್ಯಗಳಲ್ಲಿ 2792 ರನ್ ಗಳಿಸಿದ್ದಾರೆ.
ಈ ಪೈಕಿ 9 ಶತಕಗಳು ಮತ್ತು 14 ಅರ್ಧ ಶತಕಗಳು ಸೇರಿವೆ. ಇವರ ಹೈಎಸ್ಟ್ ಸ್ಕೋರ್ 150 ಆಗಿದೆ. 84 ಟಿ20 ಪಂದ್ಯಗಳನ್ನು ಆಡಿದ್ದು, 1 ಶತಕ ಮತ್ತು 11 ಅರ್ಧಶತಕಗಳೊಂದಿಗೆ 1812 ರನ್ ಗಳಿಸಿದ್ದಾರೆ. ಶೆಲ್ಡನ್ ಜಾಕ್ಸನ್ ಐಪಿಎಲ್ನಲ್ಲಿ ಕೆಕೆಆರ್ ತಂಡದ ಭಾಗವಾಗಿದ್ದರು. ತಾನು ಆಡಿರೋ 9 ಐಪಿಎಲ್ ಪಂದ್ಯಗಳಲ್ಲಿ ಕೇವಲ 61 ರನ್ ಗಳಿಸಿದ್ದಾರೆ.
Leave a Comment