ಖ್ಯಾತ ನಥಿಂಗ್ ಫೋನ್ 1 ಸ್ಮಾರ್ಟ್‌ಫೋನ್‌ನ ಬೆಲೆಯಲ್ಲಿ ಭರ್ಜರಿ ಇಳಿಕೆ – ಶೇಕಡಾ 27ರಷ್ಟು‌ದರ ಕಡಿತ, ಈ ಮೊಬೈಲ್ ನ ಫೀಚರ್ಸ್ ಹೇಗಿದೆ ಗೊತ್ತಾ…!?

ಖ್ಯಾತ ನಥಿಂಗ್ ಫೋನ್ 1 ಸ್ಮಾರ್ಟ್‌ಫೋನ್‌ನ ಬೆಲೆಯಲ್ಲಿ ಭರ್ಜರಿ ಇಳಿಕೆ – ಶೇಕಡಾ 27ರಷ್ಟು‌ದರ ಕಡಿತ, ಈ ಮೊಬೈಲ್ ನ ಫೀಚರ್ಸ್ ಹೇಗಿದೆ ಗೊತ್ತಾ…!?

ನ್ಯೂಸ್ ಆ್ಯರೋ : ಮೊಬೈಲ್ ಜಗತ್ತಿನಲ್ಲಿ ಇದೀಗ ಸ್ಪರ್ಧಾತ್ಮಕವಾಗಿ ವಿವಿಧ ಕಂಪನಿಗಳು ಹೊಸ ಹೊಸ ಫೀಚರ್ಸ್‌ನೊಂದಿಗೆ ಮೊಬೈಲ್‌ನ್ನು ಬಿಡುಗಡೆ ಮಾಡುತ್ತಿದೆ. ಅದಲ್ಲದೆ ಸ್ಮಾರ್ಟ್ ಫೋನ್ ಗಳ ಸಂಖ್ಯೆಗಳು ಗಗನಕ್ಕೇರುತ್ತಿದೆ. ಈಗ ನಥಿಂಗ್ ಫೋನ್ 1 ಎನ್ನುವ ಸ್ಮಾಟ್ ಫೋನ್ ತನ್ನ ಹವಾವನ್ನು ಪ್ರರ್ದಶಿಸುತ್ತಿದೆ. ಈಗಾಗಲೇ ಗಮನಸೆಳೆದಿರುವ ನಥಿಂಗ್ ಫೋನ್ 1 ಸ್ಮಾರ್ಟ್‌ಫೋನ್‌ ಇದೀಗ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಫ್ಲಿಪ್‌ಕಾರ್ಟ್‌ ಆಪ್‌ನಲ್ಲಿ ಲಭ್ಯ:

ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ನಥಿಂಗ್ (1) ಸ್ಮಾರ್ಟ್‌ಫೋನ್‌ (128GB ವೇರಿಯಂಟ್‌) ಈಗ ಶೇ. 27 ರಿಯಾಯಿತಿ ಪಡೆದಿದ್ದು, ₹27,499 ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಅದಲ್ಲದೆ ಸುಮಾರು ₹17,500ಗಳ ವರೆಗೆ ಎಕ್ಸ್‌ಚೇಂಜ್ ಆಫರ್‌ನ ಆಯ್ಕೆಯನ್ನು ಇದು ಪಡೆದಿದೆ. ಹಾಗೆಯೇ ನೋ ಕಾಸ್ಟ್‌ ಇಎಮ್‌ಐ ಆಯ್ಕೆಗಳು ಲಭ್ಯವಿವೆ.

ಇಲ್ಲಿದೆ ಈ ಫೋನಿನ ಸಂಪೂರ್ಣ ಮಾಹಿತಿ.

ನಥಿಂಗ್ ಫೋನ್ (1) 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, 1,200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಬೆಂಬಲ, 402 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಹ್ಯಾಪ್ಟಿಕ್ ಟಚ್ ಮೋಟರ್‌ಗಳನ್ನು ಕೂಡ ಒಳಗೊಂಡಿದೆ.

ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 128GB, 8GB RAM + 256 GB ಮತ್ತು 12GB RAM + 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಯಾವುದೇ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯವನ್ನು ಬೆಂಬಲಿಸುವುದಿಲ್ಲ ಎಂದು ನಥಿಂಗ್‌ ಕಂಪೆನಿ ಹೇಳಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್

ನಥಿಂಗ್ ಫೋನ್ (1) ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ನೊಂದಿಗೆ ಬರುತ್ತದೆ. ಇನ್ನು ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ JN1 ಸೆನ್ಸಾರ್‌ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮ್ಯಾಕ್ರೋ ಮೋಡ್‌ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ನೈಟ್ ಮೋಡ್, ಪೋರ್ಟ್ರೇಟ್ ಮೋಡ್, ಸೀನ್ ಡಿಟೆಕ್ಷನ್, ಎಕ್ಸ್‌ಟ್ರೀಮ್ ನೈಟ್ ಮೋಡ್ ಮತ್ತು ಎಕ್ಸ್‌ಪರ್ಟ್ ಮೋಡ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್‌ ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಫೇಸ್ ಅನ್‌ಲಾಕ್ ಬೆಂಬಲವನ್ನು ಕೂಡ ಹೊಂದಿದೆ.

ವಿಶೇಷ ಫೀಚರ್ಸ್‌ ಹೊಂದಿರುವ ನಥಿಂಗ್ ಫೋನ್ ಮೊಬೈಲ್ ಖರೀದಿಸುವ ಫ್ಲಾನ್‌ನಲ್ಲಿರುವವರಿಗೆ ಒಂದು ಉತ್ತಮ ಆಯ್ಕೆಯಾಗಿದೆ. ಇದೀಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಬಂದಿದ್ದು, ಸುಲಭವಾಗಿ ಮೊಬೈಲ್ ಅಂಗಡಿಗಳಲ್ಲಿ ಅಥವಾ ಆನ್‌ಲೈನ್‌ನಲ್ಲಿ ಖರೀದಿಸಬಹುದು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *