ಭಾರತದ ಪ್ರತೀ ಹಳ್ಳಿಯಲ್ಲೂ ಇನ್ನು ಅಮೆಜಾನ್ ಇಂಟರ್ನೆಟ್ – ಜಿಯೋ, ಏರ್ಟೆಲ್ ಗಳಿಗೆ ನಡುಕ ಹುಟ್ಟಿಸಿದ ಟೆಕ್ ದೈತ್ಯ

ಭಾರತದ ಪ್ರತೀ ಹಳ್ಳಿಯಲ್ಲೂ ಇನ್ನು ಅಮೆಜಾನ್ ಇಂಟರ್ನೆಟ್ – ಜಿಯೋ, ಏರ್ಟೆಲ್ ಗಳಿಗೆ ನಡುಕ ಹುಟ್ಟಿಸಿದ ಟೆಕ್ ದೈತ್ಯ

ನ್ಯೂಸ್‌ ಆ್ಯರೋ : ಇ ಕಾಮರ್ಸ್ ಕ್ಷೇತ್ರದಲ್ಲಿ ಉತ್ತುಂಗದಲ್ಲಿರುವ ಅಮೆಜಾನ್ ಈಗ ಭಾರತದಲ್ಲಿ ಇಂಟರ್‌ನೆಟ್‌ ಸೇವೆ ಆರಂಭಿಸಲು ಚಿಂತಿಸಿದೆ. ಇದು ಭಾರತದ ಟೆಲಿಕಾಂ ಇಂಡಸ್ಟ್ರಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರನ್ನು ಹೊಂದಿರುವಂತಹ ಜಿಯೋ ಹಾಗೂ ಏರ್‌ಟೆಲ್ ಸಂಸ್ಥೆಗಳಿಗೆ ಸ್ವಲ್ಪಮಟ್ಟಿಗೆ ನಡುಕ ಹುಟ್ಟಿಸಿದೆ ಎಂಬುದರಲ್ಲಿ ಸಂಶಯವಿಲ್ಲ.

Project Kuiper ಎನ್ನುವ ಹೆಸರಿನಲ್ಲಿ ಭಾರತದಲ್ಲಿ ಸ್ಯಾಟಲೈಟ್ ಇಂಟರ್‌ನೆಟ್ ಅನ್ನು ನೀಡುವ ಕಾರ್ಯಾಚರಣೆಯಲ್ಲಿ ತೊಡಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಅಮೆಜಾನ್ ಸಂಸ್ಥೆ ಮುಂಬರುವ ವರ್ಷಗಳಲ್ಲಿ Low Earth Orbit Satellite ಗಳನ್ನು ಸಾಕಷ್ಟು ಲಾಂಚ್ ಮಾಡುವ ಮೂಲಕ ಪ್ರತಿಯೊಂದು ಹಳ್ಳಿಗಳಿಗೆ ಕೂಡ ಇಂಟರ್ನೆಟ್ ಕನೆಕ್ಷನ್ ಅನ್ನು ನೀಡುವಂತಹ ಪ್ರಯತ್ನವನ್ನು ಮಾಡಲಿದೆ.

ಅಮೆಜಾನ್ ಸಂಸ್ಥೆಯ ಈ ಪ್ರಯತ್ನದಿಂದ ವಿಶ್ವದ ಪ್ರತಿಯೊಂದು ಮೂಲೆಯಲ್ಲೂ ಇಂಟರ್‌ನೆಟ್‌ ಸಿಗಲಿದೆ ಎನ್ನಲಾಗಿದೆ. ಭಾರತದಲ್ಲಿ ಕೂಡ ಮುಂಬರುವ ವರ್ಷಗಳಲ್ಲಿ ಈ ರೀತಿಯ ಇಂಟರ್ನೆಟ್ ಸರ್ವಿಸ್ ಅನ್ನು ಜಾರಿಗೆ ತರುವುದಕ್ಕಾಗಿ ಅಮೆಜಾನ್ ಸಂಸ್ಥೆ ಅರ್ಜಿಯನ್ನು ಸಲ್ಲಿಸಿದ್ದು ಒಂದು ವೇಳೆ ಎಲ್ಲಾ ಅಂದುಕೊಂಡಂತೆ ಖಂಡಿತವಾಗಿ ಭಾರತ ದೇಶದ ಪ್ರತಿಯೊಂದು ಮೂಲೆಗಳಲ್ಲಿ ಕೂಡ ಉತ್ತಮ ಕ್ವಾಲಿಟಿಯ ಇಂಟರ್ನೆಟ್ ಸೇವೆಯನ್ನು ನಾವು ಈ ಮೂಲಕ ಪಡೆದುಕೊಳ್ಳಬಹುದಾಗಿದೆ.

ಡಿಒಟಿ ಸಂಸ್ಥೆಯ ಮೂಲಕ ಗ್ಲೋಬಲ್ ಮೊಬೈಲ್ ಪರ್ಸನಲ್ ಕಮ್ಯುನಿಕೇಷನ್ ಲೈಸೆನ್ಸ್ ಅನ್ನು ಕೂಡ ಅಮೆಜಾನ್ ಸಂಸ್ಥೆ ಅಪ್ರುವಲ್ ರೂಪದಲ್ಲಿ ಪಡೆದುಕೊಳ್ಳಬೇಕಾಗಿರುವುದನ್ನು ಕೂಡ ನಾವು ಇಲ್ಲಿ ಪ್ರಮುಖವಾಗಿ ಪರಿಗಣಿಸಬೇಕಾಗುತ್ತದೆ. ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಅಮೆಜಾನ್ 1ಜಿಬಿ/ಪಿಎಸ್‌ ಸ್ಪೀಡ್ ಇಂಟರ್ನೆಟ್ ಸೇವೆಯನ್ನು ಪ್ರತಿಯೊಬ್ಬರಿಗೂ ಕೂಡ ಅತ್ಯಂತ ಕಡಿಮೆ ದರದಲ್ಲಿ ಭಾರತದಲ್ಲಿ ನೀಡುವುದಕ್ಕೆ ಹೊರಟಿದೆ ಎಂಬುದಾಗಿ ತಿಳಿದುಬಂದಿದೆ. ಈಗ ಭಾರತ ದೇಶದಲ್ಲಿ ಯಾವೆಲ್ಲ ಸ್ಥಳದಲ್ಲಿ ಇಂಟರ್ನೆಟ್ ಸೇವೆ ಇಲ್ಲವೋ ಅಲ್ಲಿ ಕೂಡ ತಲುಪುವಂತಹ ಸಾಧ್ಯತೆ ಇದೆ.

3236 ಸ್ಯಾಟಲೈಟ್ ಗಳ ಮೂಲಕ ಪ್ರತಿಯೊಬ್ಬರಿಗೂ ಕೂಡ ಇಂಟರ್ನೆಟ್ ಸೇವೆಯನ್ನು ತಲುಪಿಸುವುದೇ ಅಮೆಜಾನ್ ಸಂಸ್ಥೆಯ ಗುರಿಯಾಗಿದೆ ಎಂದು ಹೇಳಬಹುದು. 2026ರ ಒಳಗೆ ಅಮೆಜಾನ್ ಸಂಸ್ಥಾನ ಈ ಗುರಿಯನ್ನು ಪೂರ್ತಿಗೊಳಿಸಲಿದೆ ಎಂಬುದಾಗಿ ತಿಳಿದು ಬಂದಿದ್ದು ತನ್ನ ಬ್ರಾಡ್ ಬ್ಯಾಂಡ್ ಸೇವೆಯ ಮೂಲಕ ಪ್ರತಿಯೊಬ್ಬರನ್ನು ಕೂಡ ತಲುಪುವಂತಹ ಗುರಿಯನ್ನು ಅಮೆಜಾನ್ ಹೊಂದಿದೆ. ಮುಂದಿನ ದಿನಗಳಲ್ಲಿ ಬಳಕೆದಾರರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *