ಇದ್ದಕ್ಕಿದ್ದಂತೆ ಎಎನ್ಐ ಸುದ್ದಿಸಂಸ್ಥೆಯ ಟ್ವಿಟರ್ ಖಾತೆ ಬ್ಲಾಕ್ – ಎಲಾನ್ ಮಸ್ಕ್ ಕೊಟ್ಟ ಕಾರಣ ಕೇಳಿದ್ರೆ ದಂಗಾಗ್ತಿರಾ..!!

ಇದ್ದಕ್ಕಿದ್ದಂತೆ ಎಎನ್ಐ ಸುದ್ದಿಸಂಸ್ಥೆಯ ಟ್ವಿಟರ್ ಖಾತೆ ಬ್ಲಾಕ್ – ಎಲಾನ್ ಮಸ್ಕ್ ಕೊಟ್ಟ ಕಾರಣ ಕೇಳಿದ್ರೆ ದಂಗಾಗ್ತಿರಾ..!!

ನ್ಯೂಸ್ ಆ್ಯರೋ : ಇತ್ತೀಚೆಗಷ್ಟೇ ಟ್ವಿಟರ್ ಮೇಲೆ ಅಧಿಪತ್ಯ ಸಾಧಿಸಿರುವ ಕುಬೇರ ಪುತ್ರ ಎಲಾನ್ ಮಸ್ಕ್ ಮೈಕ್ರೋ ಬ್ಲಾಗಿಂಗ್ ವೆಬ್ಸೈಟ್ ನಲ್ಲಿ ದಿನಕ್ಕೊಂದು ಬದಲಾವಣೆ, ನಿಯಮಗಳನ್ನು ತರುತ್ತಿದ್ದಾರೆ. ಇದೀಗ ದೇಶದ ಪ್ರಮುಖ ಸುದ್ದಿ ಸಂಸ್ಥೆಯಾದ ಎಎನ್ಐ (ANI) ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿದ್ದು, ಇದಕ್ಕೆ ಕಂಪೆನಿ ಕೊಟ್ಟ ಉತ್ತರ ಕೇಳಿದ್ರೆ ನೀವು ಶಾಕ್ ಆಗ್ತೀರಾ..!!

ದೇಶದ ಪ್ರಮುಖ ಸುದ್ದಿ ಸಂಸ್ಥೆ ಎನಿಸಿಕೊಂಡಿರುವ ಎಎನ್ಐ ಟ್ವಿಟರ್ ಖಾತೆಯನ್ನು ಮೈಕ್ರೋ ಬ್ಲಾಗಿಂಗ್ ವೆಬ್ಸೈಟ್ ಇದ್ದಕ್ಕಿದ್ದಂತೆ ಬ್ಲಾಕ್ ಮಾಡಿದೆ‌. ಅನೇಕರು ಈ ಖಾತೆಯನ್ನು ಹುಡುಕಿದಾಗ ಲಭ್ಯವಿರಲಿಲ್ಲ. ಈ ಬಗ್ಗೆ ಎಎನ್ಐ ಎಡಿಟರ್ ಸ್ಮಿತಾ ಪ್ರಕಾಶ್ ವೈಯಕ್ತಿಕ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ್ದು, ‘ಎಎನ್ಐ ಅಧಿಕೃತ ಖಾತೆಯನ್ನು ಬ್ಲಾಕ್ ಮಾಡಲಾಗಿದ್ದು, ಖಾತೆ ರಚನೆಯಾಗಿ ಕನಿಷ್ಠ 13 ವರ್ಷವಾಗಿರಬೇಕು ಎಂದು ತಿಳಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಇದರ ಸ್ಕ್ರೀನ್‌ ಶಾಟ್ ಕೂಡ ಸ್ಮಿತಾ ಪ್ರಕಾಶ್ ತಮ್ಮ ವೈಯಕ್ತಿಕ ಖಾತೆಯಲ್ಲಿ ಹಂಚಿಕೊಂಡಿದ್ದು, ಎಲಾನ್ ಮಸ್ಕ್ ಅವರನ್ನು ಟ್ಯಾಗ್ ಮಾಡಿ ‘ನಾವು 13ವರ್ಷಗಳಿಂದ ಅಲ್ಲ, ಅದಕ್ಕಿಂತ ಹೆಚ್ಚಿನ ವರ್ಷದಿಂದ ಖಾತೆಯನ್ನು ಬಳಸುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಎಎನ್ಐ ಟ್ವಿಟ್ಟರ್ ನಲ್ಲಿ ‘ಎಎನ್ಐ ಭಾರತದ ನಂ.1 ಮಲ್ಟಿಮೀಡಿಯಾ ಸುದ್ದಿ ಸಂಸ್ಥೆ. ನಮ್ಮ ಸಂಸ್ಥೆಯು ANI-ಹಿಂದಿ, ANI-MP, ANI-ರಾಜಸ್ಥಾನ್, ANI UP, ಉತ್ತರಖಾಂಡ ಸೇರಿದಂತೆ ಇತರೆ ಟ್ವಿಟರ್ ಖಾತೆಗಳನ್ನು ನಿರ್ವಹಿಸುತ್ತಿದೆ’ ಎಂದು ಹೇಳಿಕೊಂಡಿದೆ.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *