ಇಲ್ಲಿವೆ ನೋಡಿ 15 ಸಾವಿರ ರೂ. ಒಳಗಿನ ಬೆಸ್ಟ್ ಸ್ಮಾರ್ಟ್​ಫೋನ್​ಗಳು – ಫೀಚರ್ಸ್ ಹೀಗಿವೆ ನೋಡಿ…

ಇಲ್ಲಿವೆ ನೋಡಿ 15 ಸಾವಿರ ರೂ. ಒಳಗಿನ ಬೆಸ್ಟ್ ಸ್ಮಾರ್ಟ್​ಫೋನ್​ಗಳು – ಫೀಚರ್ಸ್ ಹೀಗಿವೆ ನೋಡಿ…

ನ್ಯೂಸ್ ಆ್ಯರೋ : ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಈಗ ಅಗ್ಗದ ಬೆಲೆಗೆ ಆಕರ್ಷಕ ಮೊಬೈಲ್ಗಳಿಗೆ ಭಾರೀ ಬೇಡಿಕೆ. ಹೀಗಾಗಿಯೇ ಅನೇಕ ಕಂಪೆನಿಗಳು ಬಜೆಟ್ ಬೆಲೆಯ ಸ್ಮಾರ್ಟ್ ಫೋನ್ ತಯಾರಿಸುತ್ತಿದೆ. ಅದರಲ್ಲಿ 15,000 ರೂ. ಒಳಗಿನ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ ಮಾರುಕಟ್ಟೆಯಲ್ಲಿ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಆಯ್ಕೆ ನಿಮಗೆ ದೊರೆಯಲಿದೆ.

ಈಗಾಗಲೇ ಹಲವು ಕಂಪೆನಿಗಳು ಬಜೆಟ್‌ ಬೆಲೆಯ ಸ್ಮಾರ್ಟ್‌ ಫೋನ್‌ಗಳನ್ನು ಪರಿಚಯಿಸಿದ್ದು ಗ್ರಾಹಕರ ಗಮನ ಸೆಳೆದಿವೆ. ಈ ಸ್ಮಾರ್ಟ್‌ಫೋನ್‌ಗಳು ಉನ್ನತ ಮಟ್ಟದ ಪ್ರಮುಖ ಸ್ಮಾರ್ಟ್‌ಫೋನ್‌ಗಳೊಂದಿಗೆ ಪೈಪೋಟಿ ನೀಡುವಂತಹ ಆಕರ್ಷಕ ಫೀಚರ್ಸ್ಗಳನ್ನು ಸಹ ಒಳಗೊಂಡಿವೆ. ಹಾಗಾದ್ರೆ ಏಪ್ರಿಲ್‌ ತಿಂಗಳಲ್ಲಿ 15,000 ರೂ ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ರೆಡ್ಮಿ ನೋಟ್ 10ಎಸ್

ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಈ ತಿಂಗಳಲ್ಲಿ 15,000 ರೂ.ಗಳ ಒಳಗೆ ಖರೀದಿಸಬಹುದಾದ ಅತ್ಯುತ್ತಮ ಆಯ್ಕೆಯಾಗಿದೆ. ರೆಡ್ಮಿ ನೋಟ್ 10ಎಸ್ ಸ್ಮಾರ್ಟ್ಫೋನ್ 6.43 ಇಂಚಿನ ಫುಲ್ ಹೆಚ್ಡಿ+ ಅಮೋಲ್ಡ್ ಡಿಸ್ಪ್ಲೇ ಹೊಂದಿದೆ. ಈ ಸ್ಮಾರ್ಟ್ಫೋನ್ ಆಕ್ಟಾಕೋರ್ ಮೀಡಿಯಾ ಟೆಕ್ ಹೀಲಿಯೊ ಜಿ96 12nm ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 11 ಮೂಲಕ ಕಾರ್ಯನಿರ್ವಹಿಸುತ್ತದೆ. ರೆಡ್ಮಿ ನೋಟ್ 10ಎಸ್ ಸ್ಮಾರ್ಟ್ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದ್ದು, ಈ ಸ್ಮಾರ್ಟ್​​​ಫೋನ್​​ನ ಕ್ಯಾಮೆರಾ ಫೀಚರ್ಸ್​ ಅನ್ನು ನೋಡುವುದಾದರೆ, ಇದು 108 ಮೆಗಾಪಿಕ್ಸೆಲ್​​​ನ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಜೊತೆಗೆ 8 ಮೆಗಾಪಿಕ್ಸೆಲ್​​ ಮತ್ತು 2+2 ಮೆಗಾಪಿಕ್ಸೆಲ್​​​​ನ 3 ಕ್ಯಾಮೆರಾಗಳು ಕೂಡ ಇದೆ. ಸೆಲ್ಫಿಗಾಗಿ ಇದರಲ್ಲಿ 16 ಮೆಗಾಪಿಕ್ಸೆಲ್​​ ಸೆನ್ಸಾರ್​​ ಸಾಮರ್ಥ್ಯದ ಕ್ಯಾಮೆರಾವನ್ನು ನೀಡಲಾಗಿದ್ದು, ಈ ಫೋನ್ ನ ಬೆಲೆ 12,499 ರೂ. ಇದೆ.

ಮೋಟೋ G72

ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ ಕೇವಲ 14,999 ರೂ. ಆಗಿದ್ದು, ಇದು 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ.

ಇದು 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.6 ಇಂಚಿನ ಫುಲ್​ ಹೆಚ್​ಡಿ+ pOLED ಡಿಸ್‌ಪ್ಲೇ ಹೊಂದಿದೆ. 120Hz ರಿಫ್ರೆಶ್ ರೇಟ್​ನಿಂದ ಕೂಡಿದ್ದು, ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್‌ ವೇಗದ ಜೊತೆ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಇದ್ದು, ಮೋಟೋ G72 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ.

ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾಫಿಕ್ಸೆಲ್​ನ ಆಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಮೂರನೇ ಕ್ಯಾಮೆರಾ 2 ಮೆಗಾಫಿಕ್ಸೆಲ್​ನ ಮೈಕ್ರೋ ಶೂಟರ್ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ. ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ನೀಡಲಾಗಿದ್ದು, 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಕೂಡ ಇದೆ.

ಐಕ್ಯೂ ನಿಯೋ 6 ಸ್ಮಾರ್ಟ್​​​ಫೋನ್​​

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಇ4 ಅಮೋಲ್ಡ್​ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು, 360Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ.

ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್‌ GW1P ಸೆನ್ಸಾರ್‌ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆ್ಯಂಗಲ್​ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್​ಗಳಿಗಾಗಿ 16 ಮೆಗಾಪಿಕ್ಸೆಲ್​ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌

4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ. ಈ ಬ್ಯಾಟರಿಯು 80W ಫ್ಲ್ಯಾಶ್‌ ವೇಗದ ಚಾರ್ಜಿಂಗ್​ ಸಾಮರ್ಥ್ಯವನ್ನು ಹೊಂದಿದೆ.

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 ಎಸ್​ಓಸಿ ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಈ ಪ್ರೊಸೆಸರ್​ ಆಂಡ್ರಾಯ್ಡ್ 12 ಆಪರೇಟಿಂಗ್​ ಸಿಸ್ಟಮ್​ನೊಂದಿಗೆ ಕಾರ್ಯನಿರ್ವಹಿಸುತ್ತದೆ.

ಇನ್ನು ಈ ಸ್ಮಾರ್ಟ್​​ಫೋನ್​ ಸ್ಟೋರೇಜ್​ ಸಾಮರ್ಥ್ಯದ ಬಗ್ಗೆ ಮಾತನಾಡುವುದಾದರೆ, ಇದು 12ಜಿಬಿ ರ್‍ಯಾಮ್ ಮತ್ತು 256 ಜಿಬಿ ಇಂಟರ್ನಲ್​ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದ್ದು, ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ ಕೇವಲ 14,999 ರೂ. ಆಗಿದೆ.

ರಿಯಲ್​ಮಿ 10 ಸ್ಮಾರ್ಟ್​ಫೋನ್

ರಿಯಲ್​ಮಿ 10 4ಜಿ ಸ್ಮಾರ್ಟ್‌ಫೋನ್‌ನ ಡಿಸ್​ಪ್ಲೇ 6.4 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇ ಫ್ಲಾಟ್ ಸ್ಕ್ರೀನ್ ವಿನ್ಯಾಸವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, ಅಮೋಲೆಡ್‌ ಡಿಸ್‌ಪ್ಲೇ ಇದಾಗಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದಿದೆ.

ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್​ ಅನ್ನು ಹೊಂದಿದೆ. ಈ ಫೋನ್‌ನ ಹಿಂಭಾಗದ ಕ್ಯಾಮೆರಾ ಮೂಲಕ 1080p ಕ್ವಾಲಿಟಿಯಲ್ಲಿ ವಿಡಿಯೋ ಶೂಟ್ ಅನ್ನು ಸಹ ಮಾಡಬಹುದು. ಇದಲ್ಲದೆ ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್​ಗಾಗಿ 16 ಮೆಗಾಪಿಕ್ಸೆಲ್​ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಿದ್ದಾರೆ.

ಜೊತೆಗೆ 33W ಸೂಪರ್ವೂಕ್ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಚಾರ್ಜ್ ಆಗಲು ಯುಎಸ್ಬಿ ಟೈಪ್ ಸಿ ಪೋರ್ಟ್ ಇದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ ಕೇವಲ 13,999 ರೂ. ಆಗಿದೆ.

ಪೋಕೋ ಎಮ್​4 ಪ್ರೋ ಸ್ಮಾರ್ಟ್‌ಫೋನ್

ಪೋಕೋ ಎಮ್​4 ಪ್ರೋ ಸ್ಮಾರ್ಟ್​​​ಫೋನ್​ ಅನ್ನು 13,999 ರೂ.ಗಳಿಗೆ ಮಾರುಕಟ್ಟೆಯಲ್ಲಿ ಖರೀದಿ ಮಾಡಬಹುದಾಗಿದೆ. ಈ ಫೋನ್ 6.6 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್‌ ರೇಟ್‌ ನೀಡಲಿದೆ. ಹಾಗೆಯೇ ಮೀಡಿಯಾ ಟೆಕ್ ಹಿಲಿಯೋ ಜಿ96 ನಲ್ಲಿ ಕಾರ್ಯನಿರ್ವವಹಿಸುತ್ತದೆ. ಹಾಗೆಯೇ ಇದು ಎರಡು ಸ್ಟೋರೇಜ್ ವೇರಿಯಂಟ್‌ನಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್​ಫೋನ್​ ಟ್ರಿಪಲ್​ ರಿಯರ್​

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *