ಕೋಟ್ಯಾಂತರ Gmail ಖಾತೆ ಡಿಲೀಟ್ ಮಾಡೋಕೆ ಮುಂದಾದ ಗೂಗಲ್ – ನೀವೂ ಇಂತಹ ಮಿಸ್ಟೇಕ್ ಮಾಡಿದ್ದೀರಾ?

ಕೋಟ್ಯಾಂತರ Gmail ಖಾತೆ ಡಿಲೀಟ್ ಮಾಡೋಕೆ ಮುಂದಾದ ಗೂಗಲ್ – ನೀವೂ ಇಂತಹ ಮಿಸ್ಟೇಕ್ ಮಾಡಿದ್ದೀರಾ?

ನ್ಯೂಸ್ ಆ್ಯರೋ‌ : ಕೆಲವು ಜಿಮೇಲ್ ಅಕೌಂಟ್ ಗಳನ್ನು ಡಿಲೀಟ್ ಮಾಡಲು ಗೂಗಲ್ ಮುಂದಾಗಿದೆ. ಹಾಗಂತ ಗಾಬರಿ ಬೇಡ. ಡಿಲೀಟ್ ಆಗುವುದು ಸಕ್ರಿಯ ಖಾತೆ ಅಲ್ಲ. ಬದಲಾಗಿ 2 ವರ್ಷಗಳಿಂದ ಬಳಸದೆ ಇರುವ ಜಿಮೇಲ್ ಖಾತೆ ನಿಷ್ಕ್ರಿಯವಾಗಲಿದೆ.

ಗೂಗಲ್ ತನ್ನ ಬಳಕೆದಾರರ ನಿಷ್ಕ್ರಿಯ ಖಾತೆಗಳ ನೀತಿಯಲ್ಲಿ ಹೊಸ ಬದಲಾವಣೆ ತಂದಿದೆ. ಬಳಕೆದಾರರು ಹಳೆಯ ಗೂಗಲ್ ಖಾತೆಗಳನ್ನು ಲಾಗ್‌ಇನ್ ಮಾಡಲು ಹಾಗೂ ಪರಿಶೀಲಿಸಲು ಹೇಳಿದೆ. ಈ ಹಿಂದೆ 2 ವರ್ಷಗಳಿಂದ ಕಾರ್ಯನಿರ್ವಹಿಸದ ಖಾತೆಗಳಲ್ಲಿ ಸಂಗ್ರಹವಾಗಿರುವ ಡೇಟಾಗಳನ್ನು ಅಳಿಸಿ ಹಾಕುವುದಾಗಿ ಗೂಗಲ್ ಹೇಳಿತ್ತು. ಆದರೀಗ ಇಡೀ ಖಾತೆಯನ್ನೇ ಅಳಿಸಿ ಹಾಕುವುದಾಗಿ ಗೂಗಲ್ ಎಚ್ಚರಿಸಿದೆ.

ಈ ವರ್ಷದ ನಂತರ ಗೂಗಲ್ ಖಾತೆಯನ್ನು ಕನಿಷ್ಠ 2 ವರ್ಷಗಳವರೆಗೆ ಬಳಸದಿದ್ದರೆ ಅಥವಾ ಸೈನ್ ಇನ್ ಮಾಡದಿದ್ದರೆ ನಾವು ಖಾತೆಯನ್ನು ಹಾಗೂ ಅದರಲ್ಲಿರುವ ಡೇಟಾಗಳನ್ನು ಅಳಿಸಬಹುದು. ಅವುಗಳಲ್ಲಿ ಗೂಗಲ್ ವರ್ಕ್‌ಸ್ಪೇಸ್ (ಜಿಮೇಲ್, ಡಾಕ್ಸ್, ಡ್ರೈವ್, ಕ್ಯಾಲೆಂಡರ್), ಯೂಟ್ಯೂಬ್ ಹಾಗೂ ಗೂಗಲ್ ಫೋಟೋಸ್ ಸೇರಿರುತ್ತವೆ ಎಂದು ಗೂಗಲ್ ತಿಳಿಸಿದೆ.

ಈ ಹೊಸ ನೀತಿ ಈ ವರ್ಷದ ಡಿಸೆಂಬರ್ ನಲ್ಲಿ ಜಾರಿಗೆ ಬರಲಿದೆ. ಜಿಮೇಲ್‌ನಲ್ಲಿ ಸಕ್ರಿಯವಾಗಿಲ್ಲದ ಬಳಕೆದಾರರು ತಮ್ಮ ಹಳೆಯ ಖಾತೆಯನ್ನು ಹಿಂಪಡೆಯಲು ಇನ್ನೂ ಸಮಯವಿದೆ. ಆದರೆ ಒಂದು ಬಾರಿ ಡಿಲೀಟ್ ಆದ ಖಾತೆಯನ್ನು ಮರುಬಳಕೆ ಮಾಡಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ. ಬಳಕೆದಾರರು ತಮ್ಮ ಗೂಗಲ್ ಖಾತೆಗಳನ್ನು ಅಳಿಸದಂತೆ ತಡೆಯಲು ಕ್ರಮ ಕೈಗೊಳ್ಳುವುದು ಅತ್ಯಗತ್ಯ. ಇದಕ್ಕಾಗಿ ತಮ್ಮ ಹಳೆಯ ಖಾತೆಗಳನ್ನು ಪರಿಶೀಲಿಸುವುದು ಹಾಗೂ ವಿವಿಧ ಚಟುವಟಿಕೆಯನ್ನು ನಿರ್ವಹಿಸಬಹುದು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *