ಸಿಮ್ ಪೋರ್ಟ್ ಮಾಡುವುದು ಹೇಗೆ..? – ಎಷ್ಟು ಬಾರಿ ಒಂದು ಸಿಮ್ ಅನ್ನು ಪೋರ್ಟ್ ಮಾಡಬಹುದು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..

ಸಿಮ್ ಪೋರ್ಟ್ ಮಾಡುವುದು ಹೇಗೆ..? – ಎಷ್ಟು ಬಾರಿ ಒಂದು ಸಿಮ್ ಅನ್ನು ಪೋರ್ಟ್ ಮಾಡಬಹುದು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..

ನ್ಯೂಸ್ ಆ್ಯರೋ‌ : ಇಂದಿನ ಡಿಜಿಟಲ್ ಯುಗದಲ್ಲಿ ಬಹುತೇಕ ಕೆಲಸಗಳು ಫೋನ್ ಮೂಲಕವೇ ನಡೆಯುವುದರಿಂದ ಮೊಬೈಲ್​ನಲ್ಲಿ ಸಿಮ್ ನೆಟ್​ವರ್ಕ್, ಡೇಟಾ ಬಹುಮುಖ್ಯ. ಆದರೆ, ಕೆಲವು ಸಿಮ್​ಗಳಲ್ಲಿ ನಿಧಾನಗತಿಯ ವೇಗ, ಕೆಲವೊಂದು ಪ್ರದೇಶದಲ್ಲಿ ಅಸಮರ್ಪಕ ನೆಟ್‌ವರ್ಕ್ ಕವರೇಜ್ ಅಥವಾ ಇತರೆ ಕಾರಣಗಳಿಗಾಗಿ ಬಳಕೆದಾರರು ಮೊಬೈಲ್‌ ನಂಬರ್ ಪೋರ್ಟ್‌ ಮಾಡಲು ಮುಂದಾಗುತ್ತಾರೆ. ಅಂದರೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸದೆ ಒಂದು ನೆಟವರ್ಕ್‌ನಿಂದ ಇನ್ನೊಂದು ನೆಟವರ್ಕ್‌ಗೆ ಸೇವೆಯನ್ನು ಬದಲಾಯಿಸುವ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ ಸೌಲಭ್ಯ.

ಅನೇಕರಿಗೆ ಒಂದು ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು? ಟ್ರಾಯ್ ಹೊಸ ನಿಯಮ ಏನು? ಪೋರ್ಟ್ ಮಾಡಲು ಸುಲಭ ದಾರಿ ಯಾವುದು? ಎಂಬ ಬಗ್ಗೆ ತಿಳಿದಿರುವುದಿಲ್ಲ. ಹಾಗಾಗಿ ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಒಂದು ನೆಟ್‌ವರ್ಕ್‌ನಿಂದ ಮತ್ತೊಂದು ನೆಟ್‌ವರ್ಕ್‌ಗೆ ಮೊಬೈಲ್ ನಂಬರ್ ಅನ್ನು ನೀವು ಪೋರ್ಟ್ ಮಾಡಬೇಕಾದರೆ ಕೆಲವೊಂದು ನಿಯಮಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ. ದೇಶದಲ್ಲಿ ಕಳೆದ ವರ್ಷದ ಅಂತ್ಯದಲ್ಲಿ ಹೊಸ ಎಂಎನ್‌ಪಿ, ಅಂದರೆ ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳನ್ನು ಜಾರಿಗೆ ತರಲಾಗಿತ್ತು. ಇದರಿಂದಾಗಿ ಗ್ರಾಹಕರು ಯಾವುದೇ ಸಮಸ್ಯೆಯಿಲ್ಲದೆ ಸುಲಭದಲ್ಲಿ ಮೊಬೈಲ್ ನಂಬರ್ ಪೋರ್ಟ್ ಮಾಡಿಕೊಳ್ಳಬಹುದು.

ಅಲ್ಲದೆ ಒಂದು ಮೊಬೈಲ್ ಸಂಖ್ಯೆಯನ್ನು ನೀವು ಎಷ್ಟು ಬಾರಿ ಬೇಕಾದರೂ ಪೋರ್ಟ್ ಮಾಡಬಹುದು. ಇದಕ್ಕೆ ಯಾವುದೇ ನಿರ್ದಿಷ್ಟ ತಡೆಯಿಲ್ಲ.

ಆದರೆ, ನಿಮ್ಮ ಮೊಬೈಲ್ ನಂಬರ್ ಪೋರ್ಟ್ ಆಗಬೇಕು ಎಂದರೆ ಕೆಲವು ವಿಚಾರಗಳನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು. ನೀವು ಮೊಬೈಲ್ ನಂಬರ್ ಮತ್ತೊಂದು ನೆಟ್‌ವರ್ಕ್‌ಗೆ ಪೋರ್ಟ್ ಮಾಡಿಕೊಳ್ಳಲು ಬಯಸಿದ್ದರೆ, ಅದಕ್ಕೂ ಮುಂಚೆ ಹಳೆಯ ಕಂಪನಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲ ಬಿಲ್ ಮೊತ್ತವನ್ನು ಪಾವತಿಸಿರಬೇಕು. ಅಂದರೆ ವಿಶೇಷವಾಗಿ, ಪೋಸ್ಟ್ ಪೋಯ್ಡ್ ಗ್ರಾಹಕರು, ತಿಂಗಳ ಬಿಲ್ ಮೊತ್ತ ಬಾಕಿ ಉಳಿಸಿಕೊಂಡಿದ್ದರೆ, ಅದನ್ನು ಟೆಲಿಕಾಂ ಸೇವಾದಾರ ಕಂಪನಿಗೆ ಪಾಲಿಸುವುದು ಕಡ್ಡಾಯ. ಬಾಕಿ ಉಳಿಸಿಕೊಂಡಿದ್ದರೆ, ಪೋರ್ಟಿಂಗ್ ಸಾಧ್ಯವಾಗುವುದಿಲ್ಲ.

ಯಾವುದೇ ನೆಟ್‌ವರ್ಕ್‌ಗೆ ಪೋರ್ಟ್ ಆಗಬೇಕಾದರೂ, ಪ್ರಸ್ತುತ ಇರುವ ನೆಟ್‌ವರ್ಕ್‌ನಲ್ಲಿ ಕನಿಷ್ಟ 90 ದಿನ ಪೂರೈಸಬೇಕು. ಅದಕ್ಕೂ ಮುಂಚೆ ಮತ್ತೊಂದು ನೆಟ್‌ವರ್ಕ್‌ಗೆ ಪೋರ್ಟ್ ಸಾಧ್ಯವಿಲ್ಲ. ಅಲ್ಲದೆ, ಸಿಮ್ ಕಾರ್ಡ್ ಹೊಂದಿರುವ ವ್ಯಕ್ತಿ ಮತ್ತೋರ್ವ ವ್ಯಕ್ತಿಗೆ ಮಾಲಿಕತ್ವ ಹಸ್ತಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದ್ದರೆ, ಅಂತಹ ಸಂದರ್ಭದಲ್ಲಿ ಎಂಎನ್‌ಪಿ ಸಾಧ್ಯವಾಗುವುದಿಲ್ಲ.

ಮೊಬೈಲ್‌ ನಂಬರ್ ಪೋರ್ಟ್ ಮಾಡಲು ಈ ಕ್ರಮಗಳನ್ನು ಅನುಸರಿಸಿ:

  • ಸಿಮ್ ಪೋರ್ಟ್‌ ಮಾಡಲು UPC (ಯೂನಿಕ್ ಪೋರ್ಟಿಂಗ್ ಕೋಡ್) ಅಗತ್ಯ.
  • ಅದಕ್ಕಾಗಿ ಮೊದಲು UPC (ಯೂನಿಕ್ ಪೋರ್ಟಿಂಗ್ ಕೋಡ್) ಜನರೇಟ್ ಮಾಡಬೇಕು.
  • ಕ್ಯಾಪಿಟಲ್ ಅಕ್ಷರಗಳಲ್ಲಿ PORT-ಸ್ಪೇಸ್‌-ನಿಮ್ಮ ನೊಬೈಲ್ ಸಂಖ್ಯೆ ನಮೂದಿಸಿ. 1900 ನಂಬರ್‌ಗೆ ಎಸ್‌ಎಮ್‌ಎಸ್‌ ಮಾಡಿ.
  • ಆ ಬಳಿಕ UPC ಎಸ್‌ಎಮ್‌ಎಸ್‌ ಲಭ್ಯವಾಗುತ್ತದೆ.
  • ಪೋರ್ಟ್ ಆಗ ಬಯಸುವ ಟೆಲಿಕಾಂ ಸಂಸ್ಥೆಯ ಸರ್ವೀಸ್ ಸೆಂಟರ್‌ಗೆ ಭೇಟಿ ನೀಡಿ.
  • Customer Acquisition Form (CAF) ತುಂಬುವುದು ಮತ್ತು ಕೆವೈಸಿ ದಾಖಲಾತಿ ನೀಡಬೇಕು.
  • ಟೆಲಿಕಾಂ ವಲಯದಲ್ಲಿ ಎಮ್‌ಎನ್‌ಪಿ ಸೌಲಭ್ಯವು ಚಂದಾದಾರರಿಗೆ ಉಪಯುಕ್ತವಾಗಿದ್ದು, ಒಂದು ಆಪರೇಟರ್‌ನಿಂದ ಇನ್ನೊಂದು ಟೆಲಿಕಾಂ ಆಪರೇಟರ್‌ಗೆ ಬದಲಾಯಿಸಬಹುದಾಗಿದೆ.

ಈ ಎಮ್‌ಎನ್‌ಪಿ ಬದಲಾವಣೆಯು ಯಶಸ್ವಿಯಾಗಲು ಸುಮಾರು ಒಂದು ವಾರ ಆಗುತ್ತಿತ್ತು. ಆದ್ರೆ ಟ್ರಾಯ್‌ನ ಹೊಸ ಎಮ್‌ಎನ್‌ಪಿ ನಿಯಮ ಜಾರಿಯಿಂದ ಈಗ ಐದು ದಿನಗಳ ಬಳಗಾಗಿ ಸಿಮ್‌ ಫೋರ್ಟ್ ಆಗಲಿದೆ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *