Extra Data Recharge ಮಾಡೋ ಸಮಸ್ಯೆ ‌ನಿಮಗಿದ್ಯಾ? – ಈ ರಿಚಾರ್ಜ್ ಮಾಡಿದ್ರೆ ಡೇಟಾ ಸಮಸ್ಯೆ ಬರಲ್ಲ: ಯಾವ ಪ್ಲಾನ್ ಗೊತ್ತಾ.‌.!?

Extra Data Recharge ಮಾಡೋ ಸಮಸ್ಯೆ ‌ನಿಮಗಿದ್ಯಾ? – ಈ ರಿಚಾರ್ಜ್ ಮಾಡಿದ್ರೆ ಡೇಟಾ ಸಮಸ್ಯೆ ಬರಲ್ಲ: ಯಾವ ಪ್ಲಾನ್ ಗೊತ್ತಾ.‌.!?

ನ್ಯೂಸ್ ಆ್ಯರೋ : ದೇಶದ ಟೆಲಿಕಾಂ ಲೋಕದಲ್ಲಿ ಮುಂಚೂಣಿಯಲ್ಲಿರುವ ರಿಲಯನ್ಸ್ ಜಿಯೋ, ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯಲ್ಲಿ ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲಾನ್‌ಗಳನ್ನು ಪಡೆದಿದೆ. ಆ ಪೈಕಿ ಕೆಲವು ಪ್ಲಾನ್‌ ರೀಚಾರ್ಜ್ ಮಾಡಿದ್ರೆ, ಡೇಟಾ ಸಮಸ್ಯೆ ಇರಲ್ಲ.

1.ಜಿಯೋ ಟೆಲಿಕಾಂ ₹2999 ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು:

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2.5 ಜಿಬಿ ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್‌ಎಂಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

2.ಜಿಯೋದ ₹2545 ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್‌ಎಂಎಸ್ ಪ್ರಯೋಜನ ಸಹ ದೊರೆಯುತ್ತದೆ.

3. ಜಿಯೋದ ₹2879 ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು:

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತದೆ.

4. ಜಿಯೋದ ₹1199 ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು:

ಜಿಯೋ ಟೆಲಿಕಾಂನ 1199 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಜಿಯೋ ಆಪ್ಸ್‌ ಸಹ ಲಭ್ಯ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *