ರಾಯಚೂರು ಸೇರಿದಂತೆ 19 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭ – ಹೈಸ್ಪೀಡ್‌ ಇಂಟರ್ನೆಟ್‌ ಸೌಲಭ್ಯ ಹೊಂದಿರುವ ನಗರಗಳ ಸಂಖ್ಯೆ 277ಕ್ಕೆ ಏರಿಕೆ

ರಾಯಚೂರು ಸೇರಿದಂತೆ 19 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭ – ಹೈಸ್ಪೀಡ್‌ ಇಂಟರ್ನೆಟ್‌ ಸೌಲಭ್ಯ ಹೊಂದಿರುವ ನಗರಗಳ ಸಂಖ್ಯೆ 277ಕ್ಕೆ ಏರಿಕೆ

ನ್ಯೂಸ್‌ ಆ್ಯರೋ : ಭಾರತದ ನಂ.1 ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಕರ್ನಾಟಕದ ರಾಯಚೂರಿನಲ್ಲಿ ಟ್ರೂ 5ಜಿ ಸೇವೆಗಳನ್ನು ಮಂಗಳವಾರ ಆರಂಭಿಸಿದೆ.

ಇದರ ಜೊತೆಗೆ ದೇಶದ ಬೊಂಗೈಗಾಂವ್, ಉತ್ತರ ಲಖಿಂಪುರ, ಶಿವಸಾಗರ್, ತಿನ್ಸುಕಿಯಾ (ಅಸ್ಸಾಂ), ಭಾಗಲ್ಪುರ್, ಕತಿಹಾರ್ (ಬಿಹಾರ), ಮರ್ಮಗೋವಾ (ಗೋವಾ) ಸೇರಿದಂತೆ 20 ನಗರಗಳಲ್ಲಿ ಪ್ರಾರಂಭಿಸುವುದಾಗಿ ಘೋಷಣೆ ಮಾಡಿತ್ತು, ಅದರಂತೆ 5ಜಿ ಸೇವೆಗೆ ಚಾಲನೆ ನೀಡಲಾಗಿದೆ.

ಡಿಯು (ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು), ಗಾಂಧಿಧಾಮ್ (ಗುಜರಾತ್), ಬೊಕಾರೊ ಸ್ಟೀಲ್ ಸಿಟಿ, ದಿಯೋಘರ್, ಹಜಾರಿಬಾಗ್ (ಜಾರ್ಖಂಡ್), ಸತ್ನಾ (ಮಧ್ಯಪ್ರದೇಶ), ಚಂದ್ರಾಪುರ್, ಇಚಲಕರಂಜಿ (ಮಹಾರಾಷ್ಟ್ರ), ತೌಬಲ್ (ಮಣಿಪುರ), ಫೈಜಾಬಾದ್, ಫಿರೋಜಾಬಾದ್ , ಮುಜಾಫರ್‌ನಗರ (ಉತ್ತರ ಪ್ರದೇಶ) ಸೇರಿ ಇದೀಗ ಜಿಯೋ ಟ್ರೂ 5ಜಿ ಅನ್ನು ಪಡೆಯುತ್ತಿರುವ ನಗರಗಳ ಒಟ್ಟು ಸಂಖ್ಯೆಯನ್ನು 277ಕ್ಕೆ ಹೆಚ್ಚಿಸಿದೆ.

ರಾಯಚೂರಿನಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಜಿಯೋ ಆಗಿದೆ. ಮಂಗಳವಾರ ಪ್ರಾರಂಭವಾದ ಸೇವೆಯನ್ನು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ, 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಈ ನಗರಗಳಲ್ಲಿನ ಜಿಯೋ ಬಳಕೆದಾರರಿಗೆ ಅವಕಾಶ ಕಲ್ಪಿಸಲಾಗಿದೆ.

ಜಿಯೋ ವಕ್ತಾರ ಮಾತನಾಡಿ, ‘ರಾಯಚೂರು ಮತ್ತು 11 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಲ್ಲಿನ 19 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸಲು ನಾವು ಹೆಮ್ಮೆಪಡುತ್ತೇವೆ. ಇದರೊಂದಿಗೆ 277 ನಗರಗಳಾದ್ಯಂತ ಜಿಯೋ ಬಳಕೆದಾರರು ಹೊಸ ವರ್ಷ 2023ರಲ್ಲಿ ಜಿಯೋ ಟ್ರೂ 5ಜಿ ರೂಪಾಂತರದ ಪ್ರಯೋಜನಗಳನ್ನು ಆನಂದಿಸಬಹುದು’ ಎಂದು ಹೇಳಿದ್ದಾರೆ.

‘ಹೊಸದಾಗಿ ಪ್ರಾರಂಭಿಸಲಾದ ಈ ಟ್ರೂ 5ಜಿ ನಗರಗಳು ಪ್ರಮುಖ ಪ್ರವಾಸೋದ್ಯಮ ಮತ್ತು ವಾಣಿಜ್ಯ ತಾಣಗಳು ಹಾಗೂ ನಮ್ಮ ದೇಶದ ಪ್ರಮುಖ ಶಿಕ್ಷಣ ಕೇಂದ್ರಗಳಾಗಿವೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ, ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಮಾತ್ರವಲ್ಲದೇ, ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಎಸ್ ಎಂಇಗಳು ಅನಂತ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ’ ಎಂದು ಜಿಯೋ ಹೇಳಿಕೊಂಡಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *