ಮೈಕ್ರೋಸಾಫ್ಟ್ ಸರ್ವರ್ ಡೌನ್ ಆಗಿದ್ದಕ್ಕೆ ಕುಣಿದಾಡಿದ ಸಿಬ್ಬಂದಿಗೆ ಬಿಗ್ ಶಾಕ್ – ಕೆಲ ಸಿಬ್ಬಂದಿಯನ್ನು ಮನೆಗೆ ಕಳುಹಿಸಿದ ಕಂಪೆನಿ..!!

ಮೈಕ್ರೋಸಾಫ್ಟ್ ಸರ್ವರ್ ಡೌನ್ ಆಗಿದ್ದಕ್ಕೆ ಕುಣಿದಾಡಿದ ಸಿಬ್ಬಂದಿಗೆ ಬಿಗ್ ಶಾಕ್ – ಕೆಲ ಸಿಬ್ಬಂದಿಯನ್ನು ಮನೆಗೆ ಕಳುಹಿಸಿದ ಕಂಪೆನಿ..!!

ನ್ಯೂಸ್ ಆ್ಯರೋ‌ : ಭಾರತದಲ್ಲಿ ಕೆಲಕಾಲ ಮೈಕ್ರೋಸಾಫ್ಟ್ ಸೇವೆಗಳಾದ ಎಂಎಸ್ ಟೀಮ್ಸ್, ಔಟ್​​ಲುಕ್, ಅಜೂರ್ ಹಾಗೂ ಮೈಕ್ರೋಸಾಫ್ಟ್ 365 ಸರ್ವರ್​ ಡೌನ್ ಆಗಿತ್ತು. ಈ ಬಗ್ಗೆ ಡೌನ್​ಡಿಟೆಕ್ಟರ್ ಸುಮಾರು 3,500ರಷ್ಟು ಮಂದಿ ವರದಿ ಮಾಡಿದ್ದರು.

ಈ ವಿಷಯವನ್ನು ತಿಳಿದು ಮೈಕ್ರೋಸಾಫ್ಟ್ ಉದ್ಯೋಗಿಗಳು ಭಾರೀ ಖುಷಿಯಲ್ಲಿರುವ ಹಾಗೂ ಒಬ್ಬರನೊಬ್ಬರು ತಬ್ಬಿಕೊಂಡು ಖುಷಿ ವ್ಯಕ್ತಪಡಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದೀಗ ಉದ್ಯೋಗಿಗಳ ಈ ನಡೆ ಬಗ್ಗೆ ಕಂಪೆನಿ ಸ್ಪಷ್ಟನೆಯನ್ನು ಕೇಳಿದ್ದು, ಕಂಪೆನಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅದಲ್ಲದೆ ಕೆಲ ಸಿಬ್ಬಂದಿಯನ್ನು ವಜಾ ಮಾಡಲಾಗಿದ್ದು, ಇನ್ನುಳಿದವರಿಗೆ ಆತಂಕ ಹೆಚ್ಚಾಗಿದೆ. ಈ ಆನಂದದ ಕ್ಷಣಗಳು ವಿವಿಧ ರೀತಿಯ ಮೀಮ್ಸ್​ಗಳೊಂದಿಗೆ ವೈರಲ್​ ಆಗುತ್ತಿದೆ.

ವಾಸ್ತವವಾಗಿ, ಭಾರತ ಸೇರಿದಂತೆ ಜಾಗತಿಕವಾಗಿ 2023 ರಲ್ಲಿ ದಿನಕ್ಕೆ ಸರಾಸರಿ 1,600 ಕ್ಕೂ ಹೆಚ್ಚು ಟೆಕ್ ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ. ಶೇರ್‌ಚಾಟ್, ಓಲಾ, ಸ್ಕಿಟ್.ಐ, ಡಂಜೊ ಸೇರಿದಂತೆ ಹಲವು ಕಂಪೆನಿಗಳು ಇವುಗಳಲ್ಲಿ ಸೇರಿದೆ. ಭಾರತದಲ್ಲಿ ಸುಮಾರು 1,000 ಸೇರಿದಂತೆ ಜಾಗತಿಕವಾಗಿ 18,000 ಉದ್ಯೋಗಿಗಳನ್ನು ವಜಾಗೊಳಿಸಲು ಅಮೆಜಾನ್ ಘೋಷಿಸಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *