ಮೊಬೈಲ್ ಖರೀದಿಸುವವರಿಗೆ ಸಿಹಿ ಸುದ್ದಿ – ದಿಢೀರ್ ಬೆಲೆ ಇಳಿಕೆ ಮಾಡಿಕೊಂಡ ಒನ್‌ಪ್ಲಸ್ ಫೋನ್

ಮೊಬೈಲ್ ಖರೀದಿಸುವವರಿಗೆ ಸಿಹಿ ಸುದ್ದಿ – ದಿಢೀರ್ ಬೆಲೆ ಇಳಿಕೆ ಮಾಡಿಕೊಂಡ ಒನ್‌ಪ್ಲಸ್ ಫೋನ್

ನ್ಯೂಸ್ ಆ್ಯರೋ : ನೀವು ಏನಾದರೂ ಹೊಸ ಮೊಬೈಲ್ ತೆಗೆದುಕೊಳ್ಳುವ ಯೋಚನೆಯಲ್ಲಿದ್ದೀರಾ? ಹಾಗಾದರೆ ಮಾರುಕಟ್ಟೆಗೆ ಬಂದಿದೆ ವಿಶೇಷ ಪೀಚರ್ಸ್‌ನೊಂದಿಗೆ, ಅತ್ಯಾಕರ್ಷಕ ಕಡಿಮೆ ಬೆಲೆಯಲ್ಲಿ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್. ಈ ಮೂಲಕ ಮೊಬೈಲ್ ಖರೀದಿಸುವವರಿಗೆ ಸಿಹಿ ಸುದ್ದಿಯನ್ನು ನೀಡಿದೆ.

ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 10 ಪ್ರೊ ಫೋನ್‌ ಬೆಲೆಯಲ್ಲಿ ₹ 5 ಸಾವಿರವನ್ನು ಕಡಿತ ಮಾಡಿ ಮಾರುಕಟ್ಟೆಗೆ ಬಿಟ್ಟಿದ್ದಾರೆ. ಈ ಮೊಬೈಲ್‌ನ ವಿಶೇಷತೆಯೇನೆಂದರೆ 8GB + 128GB ಮತ್ತು 12GB + 256GB ಸ್ಟೋರೇಜ್‌ ವೇರಿಯಂಟನ್ನು ಹೊಂದಿದೆ.

ಇನ್ನು ಬೆಲೆ ಇಳಿಕೆ ಬಳಿಕ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 8GB + 128GB ವೇರಿಯಂಟ್‌ ₹61,999 ಆಗಿದ್ದು, ಅದೇ ರೀತಿ 12GB + 256GB ವೇರಿಯಂಟ್‌ ಬೆಲೆಯು ₹66,999 ಆಗಿದೆ.

ಇನ್ನೂ ಮೊಬೈಲ್‌ನ ಫೀಚರ್ಸ್‌ ಬಗ್ಗೆ ತಿಳಿದುಕೊಳ್ಳುವುದಾದರೆ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 1,440 x 3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹಾಗೂ ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್‌ ಪಾಲಿಕ್ರಿಸ್ಟಲಿನ್ ಆಕ್ಸೈಡ್ ತಂತ್ರಜ್ಞಾನವನ್ನು ಹೊಂದಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್‌ ನೀಡಲಿದೆ. ಡಿಸ್‌ಪ್ಲೇಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನನ್ನು ಹೊಂದಿದೆ.

8GB + 128GB ಮತ್ತು 12GB + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಆಕ್ಸಿಜನ್‌ OS 12.1 ಬೆಂಬಲದೊಂದಿಗೆ ಕಾರ್ಯಾಚರಿಸಲಿದೆ.

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪನ್ನು ಹೊಂದಿದ್ದು ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX789 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಇದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಬಗ್ಗೆ ಮಾಹಿತಿ:

5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 80W ಸೂಪರ್‌ವೂಕ್‌ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್‌ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *