ಭಾರತೀಯ ಮಾರುಕಟ್ಟೆಗೆ ಕಾಲಿಡಲಿದೆ ಒಪ್ಪೋ ಫೈಂಡ್‌ ಎನ್​2 ಫ್ಲಿಪ್ – ಇದರ ಬೆಲೆ ಎಷ್ಟು? ಫೀಚರ್ಸ್ ಹೇಗಿದೆ ಗೊತ್ತಾ‌..!?

ಭಾರತೀಯ ಮಾರುಕಟ್ಟೆಗೆ ಕಾಲಿಡಲಿದೆ ಒಪ್ಪೋ ಫೈಂಡ್‌ ಎನ್​2 ಫ್ಲಿಪ್ – ಇದರ ಬೆಲೆ ಎಷ್ಟು? ಫೀಚರ್ಸ್ ಹೇಗಿದೆ ಗೊತ್ತಾ‌..!?

ನ್ಯೂಸ್ ಆ್ಯರೋ : ಜನಪ್ರಿಯ ಸ್ಮಾರ್ಟ್​ಫೋನ್​ ಕಂಪೆನಿಗಳಲ್ಲಿ ಒಂದಾಗಿರುವ ಒಪ್ಪೋ ಕಂಪೆನಿ ತನ್ನ ಬ್ರಾಂಡ್​ನ ಅಡಿಯಲ್ಲಿ ಇದುವರೆಗೆ ಹಲವಾರು ಸ್ಮಾರ್ಟ್​​ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಮಧ್ಯೆ ಕಂಪೆನಿ ಸಹ ಇತ್ತೀಚಿನ ತಂತ್ರಜ್ಞಾನಕ್ಕೆ ಒಗ್ಗಿಕೊಂಡು ಹೊಸ ಮಾದರಿ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ ಒಪ್ಪೋ ಕಂಪೆನಿಯಿಂದ ಒಂದು ಮಹತ್ತರವಾದ ಘೋಷಣೆಯಾಗಿತ್ತು.

ಫೋಲ್ಡೆಬಲ್​ ಸ್ಮಾರ್ಟ್​​ಫೋನ್ ​ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು, ಅದೇ ರೀತಿ ಈ ಸ್ಮಾರ್ಟ್​​ಫೋನ್​ ಕೆಲವು ದಿನಗಳ ಹಿಂದೆ ಜಾಗತಿಕ ಮಾರುಕಟ್ಟೆಯಲ್ಲಿ ಲಾಂಚ್ ಆಗಿತ್ತು. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಿರಲಿಲ್ಲ. ಇದೀಗ ಭಾರತೀಯ ಗ್ರಾಹಕರಿಗೆ ಕಂಪೆನಿ ಗುಡ್​ ನ್ಯೂಸ್ ನೀಡಿದೆ.

ಹೌದು, ಒಪ್ಪೋ ಕಂಪೆನಿಯಿಂದ ಇತ್ತೀಚೆಗ ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಮೂಡಿಸಿದ್ದ ಒಪ್ಪೋ ಫೈಂಡ್​ ಎನ್​2 ಫ್ಲಿಪ್​ ಸ್ಮಾರ್ಟ್​​ಫೋನ್ ಕೆಲವೇ ದಿನಗಳಲ್ಲಿ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಸದ್ಯ ಈ ಸ್ಮಾರ್ಟ್​​ಫೋನ್​ನ ಬೆಲೆ ಮತ್ತು ಫೀಚರ್ಸ್ ಮಾಹಿತಿ ಬಹಿರಂಗವಾಗಿದೆ.

ಬೆಲೆ ಮತ್ತು ಲಭ್ಯತೆ

ಒಪ್ಪೋ ಫೈಂಡ್‌ ಎನ್​2 ಫ್ಲಿಪ್ ಬೆಲೆ ಯುರೋಪ್‌ನಲ್ಲಿ EUR 849 ಆಗಿದೆ. ಇನ್ನು ಭಾರತದಲ್ಲಿ ಈ ಫೋನಿನ ಆರಂಭಿಕ ವೇರಿಯಂಟ್‌ ಬೆಲೆ 80,000 ರೂಪಾಯಿಗಳ ಆಸುಪಾಸಿನಲ್ಲಿ ಇರಬಹುದು ಎಂದು ನಿರೀಕ್ಷಿಸಲಾಗಿದೆ.

ಒಪ್ಪೋ ಫೈಂಡ್‌ ಎನ್​2 ಫ್ಲಿಪ್ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪ್ರೈಮೆರಿ ಡಿಸ್‌ಪ್ಲೇ ಹೊಂದಿದೆ. ಇದು 1,080 x 2,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ HDR10+ ಬೆಂಬಲಿಸಲಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಫೋನ್‌ 3.26 ಇಂಚಿನ ಕವರ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 900 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಸಹ ಬೆಂಬಲಿಸಲಿದೆ.

ಕ್ಯಾಮೆರಾ ಸೆಟಪ್​

ಒಪ್ಪೋ ಫೈಂಡ್‌ ಎನ್​2 ಫ್ಲಿಪ್ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್​ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್​ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಶೂಟರ್ ಅನ್ನು ಹೊಂದಿದೆ. ಇದಲ್ಲದೆ ಫೋಲ್ಡಿಂಗ್ ಡಿಸ್‌ಪ್ಲೇಯ ಮೇಲ್ಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಪ್ರೊಸೆಸರ್ ಸಾಮರ್ಥ್ಯ

ಒಪ್ಪೋ ಫೈಂಡ್‌ ಎನ್​2 ಫ್ಲಿಪ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9000+ ಎಸ್​ಓಸಿ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ಕಲರ್‌ ಒಎಸ್‌ 13.0 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8ಜಿಬಿ ರ್‍ಯಾಮ್ ಮತ್ತು 256ಜಿಬಿ ಹಾಗೂ 16ಜಿಬಿ ರ್‍ಯಾಮ್ ಮತ್ತು 512ಜಿಬಿ ಇಂಟರ್ನಲ್​​ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಬ್ಯಾಟರಿ ಬ್ಯಾಕಪ್​

ಒಪ್ಪೋ ಫೈಂಡ್‌ ಎನ್​2 ಫ್ಲಿಪ್ ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 44W ಸೂಪರ್‌ವೂಕ್‌ ಚಾರ್ಜಿಂಗ್‌ ಬೆಂಬಲಿಸಲಿದೆ.

ಇತರೆ ಫೀಚರ್ಸ್

ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS ಮತ್ತು USB ಟೈಪ್-C ಪೋರ್ಟ್‌ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಗೈರೋಸ್ಕೋಪ್‌ ಅನ್ನು ಒಳಗೊಂಡಿದೆ.

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *