ಪೋಕೋ F5 ಪ್ರೊ 5G ಸ್ಮಾರ್ಟ್‌ಫೋನ್‌ ಮೇ‌ 9ಕ್ಕೆ ಬಿಡುಗಡೆ – ಇದರ ಫೀಚರ್ಸ್ ಹೇಗಿದೆ? ಇದರ ವಿಶೇಷತೆಗಳೇನು?

ಪೋಕೋ F5 ಪ್ರೊ 5G ಸ್ಮಾರ್ಟ್‌ಫೋನ್‌ ಮೇ‌ 9ಕ್ಕೆ ಬಿಡುಗಡೆ – ಇದರ ಫೀಚರ್ಸ್ ಹೇಗಿದೆ? ಇದರ ವಿಶೇಷತೆಗಳೇನು?

ನ್ಯೂಸ್ ಆ್ಯರೋ‌ : ಭಾರತದಲ್ಲಿ ಪೋಕೋ ಸಂಸ್ಥೆಯ ಸ್ಮಾರ್ಟ್​ಫೋನ್​ಗಳು ಜನಪ್ರಿಯ. ಇದರಲ್ಲಿ ಫೋಟೋ ಕ್ವಾಲಿಟಿ ಉತ್ತಮವಾಗಿರುತ್ತದೆ ಎನ್ನುವುದು ಬಳಕೆದಾರರ ಅಭಿಮತ. ಇದೀಗ ತುಂಬಾ ಸಮಯದ‌ ಬಳಿಕ ಆಕರ್ಷಕ ಹೊಸ ಸ್ಮಾರ್ಟ್​​ಫೋನೊಂದನ್ನು ಅನಾವರಣ ಮಾಡಲು ಪೋಕೋ ಕಂಪನಿ ಮುಂದಾಗಿದೆ. ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ ಫೋನ್ ಮೇ 9ರಂದು ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.

ಪೋಕೋ ಸಂಸ್ಥೆ ಈ ಫೋನಿನ ಫೀಚರ್ಸ್ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ಹೊರಹಾಕಿಲ್ಲ. ಆದರೆ ಕೆಲ ವಿಚಾರಗಳು ಸೋರಿಕೆಯಾಗಿವೆ. ಅದರಂತೆ, ಪೋಕೋ F5 ಪ್ರೊ 5G ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ಬಿಳಿ ಬಣ್ಣಗಳಲ್ಲಿ ಬಿಡುಗಡೆ ಆಗಲಿದೆ. ಇದು 3200*1400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಎಚ್‌ಡಿ ಪ್ಲಸ್‌ ಅಮುಲೋಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್‌ 13ನಲ್ಲಿ ರನ್‌ ಆಗಲಿದೆ ಎನ್ನಲಾಗುತ್ತಿದೆ.

ಕ್ಯಾಮರಾ ಹೇಗಿರಲಿದೆ?

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಮುಖ್ಯ ಕ್ಯಾಮೆರಾದ ಸಾಮರ್ಥ್ಯ 64 ಮೆಗಾಫಿಕ್ಸೆಲ್ ಸೆನ್ಸಾರ್‌. ಹಾಗೆಯೆ ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಮುಂಭಾಗ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಬ್ಯಾಟರಿ ಸಾಮರ್ಥ್ಯ

ದೀರ್ಘ ಸಮಯ ಬಾಳಿಕೆ ಬರುವ 5,160 mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ತಕ್ಕಂತೆ 67W ವೇಗದ ಚಾರ್ಜಿಂಗ್ ಬೆಂಬಲ ಕೂಡ ಹೊಂದಿರಲಿದೆ. ಇದು 5ಜಿ ಫೋನ್ ಆಗಿದ್ದು, ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಹೆಡ್‌ಫೋನ್‌ ಜ್ಯಾಕ್‌ ಇರಲಿದೆ. ಮೂಲಗಳ ಪ್ರಕಾರ ಇದರ ಬೆಲೆ 25,000 ರೂ. ಇರಬಹುದು ಎಂದು ಅಂದಾಜಿಸಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *