ಮಾರುಕಟ್ಟೆಗೆ ಲಗ್ಗೆ ಇಟ್ಟ ರಿಯಲ್ 10 ಪ್ರೋ 5ಜಿ ಸರಣಿ ಸ್ಮಾರ್ಟ್‌ಫೋನ್ – ಫೀಚರ್ಸ್ ಏನು? ಬೆಲೆ ಎಷ್ಟು ಇಲ್ಲಿದೆ ಮಾಹಿತಿ…

ಮಾರುಕಟ್ಟೆಗೆ ಲಗ್ಗೆ ಇಟ್ಟ ರಿಯಲ್ 10 ಪ್ರೋ 5ಜಿ ಸರಣಿ ಸ್ಮಾರ್ಟ್‌ಫೋನ್ – ಫೀಚರ್ಸ್ ಏನು? ಬೆಲೆ ಎಷ್ಟು ಇಲ್ಲಿದೆ ಮಾಹಿತಿ…

ನ್ಯೂಸ್ ಆ್ಯರೋ : ಬಹು ನಿರೀಕ್ಷೆಯ ರಿಯಲ್ 10 ಪ್ರೋ 5ಜಿ ಸರಣಿ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ಕಂಪನಿಯು ರಿಯಲ್‌ಮಿ 10 ಪ್ರೋ ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಚೀನಾ ಮಾರುಕಟ್ಟೆಗೆ ಲಾಂಚ್ ಮಾಡಿತ್ತು. ಈಗ ಭಾರತೀಯ ಮಾರುಕಟ್ಟೆಗೆ ರಿಯಲ್‌ಮಿ 10 ಪ್ರೋ ಮತ್ತು ರಿಯಲ್‌ಮಿ 10 ಪ್ರೋ ಪ್ಲಸ್ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಮಾಡಲು ಮುಂದಾಗಿದ್ದು, ಈ ಫೋನುಗಳ ಬೆಲೆ 25 ಸಾವಿರ ರೂ.ನಿಂದ ಆರಂಭವಾಗಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ರಿಯಲ್‌ಮಿ 10 ಪ್ರೋ ಸ್ಮಾರ್ಟ್‌ಫೋನ್‌ನಲ್ಲಿ ಮೀಡಿಯಾಟೆಕ್ ಡಿಮೆನ್ಸಿಟಿ 1080 ಚಿಪ್‌ಸೆಟ್‌ ಇದ್ದರೆ, ಜಾಗತಿಕ ಮಾರುಕಟ್ಟೆಯಲ್ಲಿ ಲಭ್ಯವಿರುವ ಫೋನುಗಳಲ್ಲಿ ಮೀಡಿಯಾಟೆಕ್ ಡಿಮೆನ್ಸಿಟಿ 920 ಚಿಪ್‌ಸೆಟ್ ಇರಲಿದೆ ಎಂದು ತಿಳಿದು ಬಂದಿದೆ. ಮೀಡಿಯಾಟೆಕ್ ಡಿಮೆನ್ಸಿಟಿ 920 ಚಿಪ್‌ಸೆಟ್ ಅನ್ನು ಕಂಪನಿಯು ಕಳೆದ ವರ್ಷವಷ್ಟೇ ಲಾಂಚ್ ಮಾಡಿತ್ತು.

ರಿಯಲ್‌ಮಿ 10 ಪ್ರೋ ಪ್ಲಸ್ ಸ್ಮಾರ್ಟ್‌ಫೋನ್ ಸಾಕಷ್ಟು ವಿಶಿಷ್ಟ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಈ ಸ್ಮಾರ್ಟ್‌ಫೋನ್‌ನಲ್ಲಿ 6.7 ಇಂಚ್ ಫುಲ್ ಎಚ್‌ಡಿ ಪ್ಲಸ್ ಡಿಸ್‌ಪ್ಲೇ ಇರಲಿದೆ. ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್ ಆಧರಿತ ರಿಯಲ್‌ಮಿ ಯುಐ ಇರಲಿದ್ದು, ಈ ಫೋನ್ 5ಜಿ ಸೇವೆಗೆ ಸಪೋರ್ಟ್ ಮಾಡುತ್ತದೆ. 12 ಜಿಬಿ RAM ಮತ್ತು 128 ಜಿಬಿ ಸ್ಟೋರೇಜ್ ಸಾಮರ್ಥ್ಯವಿರಲಿದ್ದು, ಮತ್ತೊಂದು ವೆರಿಯೆಂಟ್ 256 ಜಿಬಿ ಸೋರೇಜ್ ಹೊಂದಿರಲಿದೆ.

ಫೋನ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾಗಳು ಇರಲಿವೆ. 108 ಮೆಗಾ ಪಿಕ್ಸೆಲ್ ಮುಖ್ಯ ಕ್ಯಾಮೆರಾ ಆಗಿರಲಿದೆ. ಅದೇ ರೀತಿ, ಫೋನ್ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಕಂಪನಿ ನೀಡಿದೆ. 500mAh ಬ್ಯಾಟರಿ ಇದ್ದು, ಇದು 67 ವ್ಯಾಟ್ ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್ ಮಾಡುತ್ತದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *