ತುರ್ತು ಸಂದರ್ಭದಲ್ಲಿ ಸಾರ್ವಜನಿಕರನ್ನು ಎಚ್ಚರಿಸಲು ಮೊಬೈಲ್ ಗೆ ಸಂದೇಶ ರವಾನೆ – ಪ್ರಾಯೋಗಿಕ ಕಾರ್ಯಾಚರಣೆ ಆರಂಭ

ತುರ್ತು ಸಂದರ್ಭದಲ್ಲಿ ಸಾರ್ವಜನಿಕರನ್ನು ಎಚ್ಚರಿಸಲು ಮೊಬೈಲ್ ಗೆ ಸಂದೇಶ ರವಾನೆ – ಪ್ರಾಯೋಗಿಕ ಕಾರ್ಯಾಚರಣೆ ಆರಂಭ

ನ್ಯೂಸ್ ಆ್ಯರೋ‌ : ದೂರಸಂಪರ್ಕ ಇಲಾಖೆ ಗ್ರಾಹಕರನ್ನು ಎಚ್ಚರಿಸುವ ಇನ್ನೊಂದು ರಾಷ್ಟ್ರೀಯ ಸಂದೇಶವನ್ನು ಅಳವಡಿಸಲು ಮುಂದಾಗಿದೆ. ಈ ಬಾರಿ ಸಾರ್ವಜನಿಕರ ಸುರಕ್ಷತೆ ಮತ್ತು ತುರ್ತು ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಶುಕ್ರವಾರ ಈ ಕುರಿತು ಎಮರ್ಜೆನ್ಸಿ ಅಲರ್ಟ್ ಪರೀಕ್ಷೆ ನಡೆಸಲಾಯಿತು.

ಸಂದೇಶ ರವಾನೆ

ಎಮರ್ಜೆನ್ಸಿ ಅಲರ್ಟ್ ಸಂದೇಶವನ್ನು ವೋಡಾಫೋನ್ ಐಡಿಯಾ, ಜಿಯೋ, ಏರ್ ಟೆಲ್ ಮತ್ತು ಬಿಸೆನ್ನೆಲ್ ಗ್ರಾಹಕರಿಗೆ ಕಳುಹಿಸಲಾಗಿದೆ. ಈ ಸಂದೇಶವನ್ನು ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಗ್ರಾಹಕರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯಾಷನಲ್ ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಅಥಾರಿಟಿ (NDMA ) ಸೂಚನೆ ಮೇರೆಗೆ ಈ ತುರ್ತು ಪರಿಸ್ಥಿತಿ ಎಚ್ಚರಿಕೆಯ ಸಂದೇಶವನ್ನು ಗ್ರಾಹಕರಿಗೆ ಕಳುಹಿಸಲಾಗಿದೆ.

ಈ ಸಂದೇಶ ಬಂದರೆ ನೀವು ಯಾವುದೇ ಕ್ರಮ ಕೈಗೊಳ್ಳಬೇಕಾಗಿಲ್ಲ. ಪ್ರಾಯೋಗಿಕವಾಗಿ ಇದನ್ನು ಕಳುಹಿಸಲಾಗಿದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ತುರ್ತು ಪರಿಸ್ಥಿತಿಯಲ್ಲಿ ಎಚ್ಚರಿಕೆ ಮೂಡಿಸುವುದು ಈ ಕಾರ್ಯಾಚರಣೆಯ ಉದ್ದೇಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮೊಬೈಲ್ ಗೆ ಈ ಸಂದೇಶ ರವಾನೆಯಾಗಿದೆ. ಸಂದೇಶ ಸ್ವೀಕರಿಸಿದಾಗ ಫೋನ್ ವೈಬ್ರೇಶನ್ ಆಗುವ ಜೊತೆಗೆ ಎಚ್ಚರಿಸುವ ರೀತಿಯ ಶಬ್ದ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *