ಪ್ರಧಾನಿ ಮೋದಿಯನ್ನು ಫಾಲೋ ಮಾಡಲು ಆರಂಭಿಸಿದ ಎಲಾನ್ ಮಸ್ಕ್ – ಜಗತ್ತಿನ ಶ್ರೀಮಂತ ವ್ಯಕ್ತಿ ಮೋದಿ ಹಿಂದೆ ಬಿದ್ದಿರೋದು ಯಾಕೆ ಗೊತ್ತಾ?

ಪ್ರಧಾನಿ ಮೋದಿಯನ್ನು ಫಾಲೋ ಮಾಡಲು ಆರಂಭಿಸಿದ ಎಲಾನ್ ಮಸ್ಕ್ – ಜಗತ್ತಿನ ಶ್ರೀಮಂತ ವ್ಯಕ್ತಿ ಮೋದಿ ಹಿಂದೆ ಬಿದ್ದಿರೋದು ಯಾಕೆ ಗೊತ್ತಾ?

ನ್ಯೂಸ್ ಆ್ಯರೋ : ಜಗತ್ತಿನ ಶ್ರೀಮಂತ ವ್ಯಕ್ತಿ, ಜಾಗತಿಕ ಮಟ್ಟದಲ್ಲಿ ಸದಾ ಸುದ್ದಿಯಲ್ಲಿರುವ ಬಿಲಿಯನೆರ್ ಎಲಾನ್ ಮಸ್ಕ್ ಸದ್ಯ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಮೈಕ್ರೋ ಬ್ಲಾಗಿಂಗ್ ಸೈಟ್ ನಲ್ಲಿ ಕೇವಲ 195 ಜನರನ್ನು ಫಾಲೋ ಮಾಡುತ್ತಿರುವ ಟ್ವಿಟ್ಟರ್ ಒಡೆಯ ಒಟ್ಟಾರೆ 134.4 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.

ಟ್ವಿಟ್ಟರ್ ನಲ್ಲಿ ಇಷ್ಟೊಂದು ಹಿಂಬಾಲಕರನ್ನು ಹೊಂದಿರುವ ಎಲಾನ್ ಮಸ್ಕ್ ಇತ್ತೀಚೆಗಷ್ಟೇ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಹಿಂದಿಕ್ಕಿ, ಟ್ವಿಟರ್ ನಲ್ಲಿ ಅತೀ ಹೆಚ್ಚು ಹಿಂಬಾಲಕರಿರುವ ವ್ಯಕ್ತಿ ಎನಿಸಿಕೊಂಡರು. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವ ವಿಶ್ವದ ಪ್ರಮುಖ ಜಾಗತಿಕ ನಾಯಕ ಎನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್ ನಲ್ಲಿ 87.7 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.

ಎಲಾನ್ ಮಸ್ಕ್ ಯಾರನ್ನೆಲ್ಲ ಫಾಲೋ ಮಾಡ್ತಾರೆ?

ಜಾಗತಿಕ ಸಿರಿವಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕುಬೇರ ಪುತ್ರ, ಟ್ವಿಟರ್ ನ ಒಡೆಯ ಎಲನ್ ಮಸ್ಕ್ ಸದ್ಯ, ನರೇಂದ್ರ ಮೋದಿಯವರನ್ನು ಫಾಲೋ ಮಾಡುತ್ತಿದ್ದು, ಇನ್ನುಳಿದಂತೆ ಭಾರತೀಯ ಮೂಲದ ಲಂಡನ್ ಪ್ರಧಾನಿ ರಿಷಿ ಸುನಾಕ್, ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹಾಗೂ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಫಾಲೋ ಮಾಡುತ್ತಿದ್ದಾರೆ.

ಟೆಸ್ಲಾ ಮುಖ್ಯಸ್ಥರ ಖಾತೆಯ ಪ್ರತಿಯೊಂದು ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲು ಟ್ವಿಟ್ಟರ್ ಖಾತೆ ‘ಎಲೋನ್ ಅಲರ್ಟ್ಸ್’ ಮಸ್ಕ್ ಹಿಂಬಾಲಕರ ನವೀಕರಣದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಎಲಾನ್ ಮಸ್ಕ್ ಅನುಸರಿಸುವ 195 ಜನರಲ್ಲಿ ಇದೀಗ ನರೇಂದ್ರ ಮೋದಿಯವರೂ ಸೇರಿಕೊಂಡಿದ್ದು, ಈ ಬೆಳವಣಿಗೆ ಜಾಗತಿಕ ಮಟ್ಟದಲ್ಲಿ ಯಾವ ಬದಲಾವಣೆಗೆ ಕಾರಣವಾಗಲಿದೆ ಎಂಬುದನ್ನು‌ ಇನ್ನಷ್ಟೇ ಕಾದು ನೋಡಬೇಕಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *