ವಿವೋ ಕಂಪನಿಯ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ – ಯಾವುದು ಆ ಫೋನ್..? ಫೀಚರ್ಸ್ ಏನು?

ವಿವೋ ಕಂಪನಿಯ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ – ಯಾವುದು ಆ ಫೋನ್..? ಫೀಚರ್ಸ್ ಏನು?

ನ್ಯೂಸ್ ಆ್ಯರೋ : ಭಾರತೀಯ ಜಾಗತಿಕ ಮಾರುಕಟ್ಟೆಯಲ್ಲಿ ಬಹಳಷ್ಟು ಬೇಡಿಕೆಯಲ್ಲಿರುವ ಸಾಧನಗಳೆಂದರೆ ಸ್ಮಾರ್ಟ್​ಫೋನ್​ಗಳು. 2022ರಲ್ಲಿ ತಿಂಗಳಿಗೆ ಎರಡರಿಂದ ಮೂರು ಸ್ಮಾರ್ಟ್​ಫೋನ್​ಗಳನ್ನು ಕಂಪನಿಗಳು ಮಾರುಕಟ್ಟೆಗೆ ಪರಿಚಯಿಸುತ್ತಿತ್ತು. ಇದೀಗ ಹೊಸ ವರ್ಷ ಬಂದಾಯ್ತು. ಹೊಸವರ್ಷದಲ್ಲಿ ಹಲವಾರು ಸ್ಮಾರ್ಟ್​ಫೋನ್​ಗಳು, ಗ್ಯಾಜೆಟ್​​ಗಳು ಬಿಡುಗಡೆಯಾಗುತ್ತಿದೆ. ಆದರೆ ಇವೆಲ್ಲವೂ ಅವಗಳದ್ದೇ ಆದ ಫೀಚರ್ಸ್​ಗಳೊಂದಿಗೆ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ.

ಇದೀಗ ಜನಪ್ರಿಯ ಮೊಬೈಲ್ ಕಂಪನಿಯಾಗಿರುವ ವಿವೋ ಮಾರುಕಟ್ಟೆಗೆ ಹೊಸ ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು 2023ರಲ್ಲಿ ವಿವೋ ಕಂಪನಿಯಿಂದ ಬಿಡುಗಡೆಯಾದ ಮೊದಲ ಸ್ಮಾರ್ಟ್​ಫೋನ್ ಅಂತಾನೇ ಹೇಳ್ಬಹುದು. ವಿವೋ ಕಂಪನಿಯ ಸ್ಮಾರ್ಟ್​ಫೋನ್​​ಗಳು ಹೆಚ್ಚಾಗಿ ಅವುಗಳ ಕ್ಯಾಮೆರಾ ಫೀಚರ್ಸ್​​ ಮೂಲಕ ಗುರುತಿಸಿಕೊಂಡಿದೆ.

ಇದೀಗ ವಿವೋ ಕಂಪನಿ ಹೊಸ ವಿವೋ ವೈ35ಎಮ್​ ಎಂಬ ಸ್ಮಾರ್ಟ್​ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದರ ಫೀಚರ್ಸ್​, ಬೆಲೆ ಹೇಗಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಡ್ಯುಯಲ್‌ ರಿಯರ್‌ ಕ್ಯಾಮೆರಾ

ವಿವೋ ವೈ35ಎಮ್​ ಸ್ಮಾರ್ಟ್‌ಫೋನ್‌ 6.51 ಇಂಚಿನ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ವಿನ್ಯಾಸದೊಂದಿಗೆ ಬರಲಿದೆ. ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ಹೆಚ್​​ಡಿ+ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೇ ಸ್ಮಾರ್ಟ್‌ಫೊನ್‌ನ 4 ಜಿಬಿ ರ್‍ಯಾಮ್ ಮತ್ತು 128 ಜಿಬಿ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಜೊತೆಗೆ ಈ ಡಿಸ್​ಪ್ಲೇ 60Hz ರಿಫ್ರೆಶ್ ರೇಟ್‌ ಬೆಂಬಲವನ್ನು ಪಡೆದಿದ್ದು, ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್​ಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಅಳವಡಿಸಿದ್ದಾರೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಹಿಂಭಾಗದಲ್ಲಿ ಎಲ್ಇಡಿ ಫ್ಲ್ಯಾಷ್ ಲೈಟ್​ ಅನ್ನು ಸಹ ಅಳವಡಿಸಲಾಗಿದೆ.

15W ವೇಗದ ಚಾರ್ಜಿಂಗ್ ಕೆಪಾಸಿಟಿ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಇದ್ದು, ಇದು 15W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು?

ಸದ್ಯ ಚೀನಾದಲ್ಲಿ ಈ ಫೋನ್ ಬಿಡುಗಡೆಯಾಗಿದ್ದು, ಅಲ್ಲಿ ಈ ಈ ಸ್ಮಾರ್ಟ್​ಫೋನ್​ನ ಬೆಲೆ 1,399 ಯುವಾನ್ ಅಂದರೆ ಭಾರತದಲ್ಲಿ ಸುಮಾರ 16,753 ರೂ. ಆಗುತ್ತದೆ.

ಇನ್ನೂ ವಿವೋ ವೈ35ಎಮ್​ ಸ್ಮಾರ್ಟ್​ಫೋನ್ ಡಾನ್ ಗೋಲ್ಡ್, ಐಸ್ ಕ್ಲೌಡ್ ಬ್ಲೂ ಮತ್ತು ಅಬ್ಸಿಡಿಯನ್ ಬ್ಲ್ಯಾಕ್, ಸ್ಟಾರ್ ಆರೆಂಜ್ ಮತ್ತು ಸ್ಟಾರಿ ನೈಟ್ ಬ್ಲ್ಯಾಕ್‌ ಶ್ಯಾಡೋ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *