ತಪ್ಪಾಗಿ ಬೇರೆ ಮೊಬೈಲ್ ನಂಬರ್ ಗೆ ರೀಚಾರ್ಜ್ ಮಾಡಿದ್ದೀರಾ? – ಚಿಂತೆ ಬಿಡಿ,  ಹಣ ವಾಪಸ್ ಪಡೆಯಲು ಹೀಗೆ ಮಾಡಿ…

ತಪ್ಪಾಗಿ ಬೇರೆ ಮೊಬೈಲ್ ನಂಬರ್ ಗೆ ರೀಚಾರ್ಜ್ ಮಾಡಿದ್ದೀರಾ? – ಚಿಂತೆ ಬಿಡಿ, ಹಣ ವಾಪಸ್ ಪಡೆಯಲು ಹೀಗೆ ಮಾಡಿ…

ನ್ಯೂಸ್ ಆ್ಯರೋ‌ : ಇದು ಡಿಜಿಟಲ್ ಯುಗ. ಹಿಂದಿನಂತೆ ಮೊಬೈಲ್ ರೀಚಾರ್ಜ್ ಮಾಡಲು ಕಷ್ಟಪಡಬೇಕಾಗಿಲ್ಲ. ಆ್ಯಪ್ ಸಹಾಯದಿಂದ ನಾವೇ ಆನ್‍ಲೈನ್ ಮೂಲಕ ರೀಚಾರ್ಜ್ ಮಾಡಬಹುದು. ಆದರೆ ಕೆಲವೊಮ್ಮೆ ಗಡಿಬಿಡಿಯಲ್ಲಿ ತಪ್ಪಾದ ನಂಬರ್ ನಮೂದಾಗಿ ಬೇರೆಯವರಿಗೆ ರೀಚಾರ್ಜ್ ಆಗಿರುತ್ತದೆ. ಅಂತಹ ಸಂದರ್ಭದಲ್ಲಿ ಆ ಮೊತ್ತವನ್ನು ಮರಳಿ ಪಡೆಯಬಹುದು.

ನೀವು ಸಿಮ್ ಕಾರ್ಡ್ ಬಳಸುತ್ತಿರುವ ಟೆಲಿಕಾಂ ಆಪರೇಟರ್‌ನ ಕಸ್ಟಮರ್ ಕೇರ್‌ಗೆ ತಕ್ಷಣ ಕರೆ ಮಾಡಿ ಮತ್ತು ಅವರಿಗೆ ಎಲ್ಲಾ ಮಾಹಿತಿಯನ್ನು ನೀಡಿ. ನೀವು ಎಷ್ಟು ಮೊತ್ತ ರೀಚಾರ್ಜ್ ಮಾಡಿದ್ದೀರಿ, ಯಾವ ಕಂಪನಿಯ ನಂಬರ್ ರೀಚಾರ್ಜ್ ಮಾಡಲಾಗಿದೆ ಹಾಗೂ ಯಾವ ಆ್ಯಪ್ ಅನ್ನು ಬಳಸಿದ್ದೀರಿ, ಮತ್ತಿತರ ಮಾಹಿತಿಯನ್ನು ತಕ್ಷಣ ಒದಗಿಸಿ.

ಮಾತ್ರವಲ್ಲ ನೀವು ತಪ್ಪಾಗಿ ರೀಚಾರ್ಜ್ ಮಾಡಿದ ಬಗ್ಗೆ ಸಂಪೂರ್ಣ ವಿವರಗಳನ್ನು ಇಮೇಲ್ ಮೂಲಕವೂ ಕಳುಹಿಸಬಹುದು. ಗೂಗಲ್ ನಲ್ಲಿ ಸರ್ಚ್ ಮಾಡಿ ಟೆಲಿಕಾಂ ಕಂಪನಿಯ ಇಮೇಲ್ ಐಡಿಯನ್ನು ಸುಲಭವಾಗಿ ಪಡೆಯಬಹುದು. ಮೇಲ್ ಮೂಲಕವೂ ಸ್ಪಷ್ಟ ಮಾಹಿತಿಯನ್ನು ಒದಗಿಸಬೇಕು.

ಕ್ರಮ ಕೈಗೊಳ್ಳದಿದ್ದರೆ ಹೀಗೆ ಮಾಡಿ…

ಟೆಲಿಕಾಂ ಕಂಪನಿಯು ನಿಮ್ಮ ದೂರಿನ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಳ್ಳದಿದ್ದರೆ ಕಸ್ಟಮರ್ ಕೇರ್ ಪೋರ್ಟಲ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಬಹುದು ಅಥವಾ ನಿಮ್ಮ ದೂರನ್ನು ವಾಟ್ಸ್ಆ್ಯಪ್ ಮೂಲಕವೂ ದಾಖಲಿಸಬಹುದು. ಜೊತೆಗೆ ಗ್ರಾಹಕ ಸೇವಾ ಪೋರ್ಟಲ್ ಅಪ್ಲಿಕೇಶನ್ ನಲ್ಲಿಯೂ ದೂರು ಸಲ್ಲಿಸಬಹುದು.

ಇದನ್ನು ಗಮನಿಸಿ

ನೀವು ಸಮಯಕ್ಕೆ ಸರಿಯಾಗಿ ದೂರು ಸಲ್ಲಿಸುವುದು ಬಹಳ ಮುಖ್ಯ. ಅಲ್ಲದೆ ನಿಮ್ಮ ಮೊಬೈಲ್ ಸಂಖ್ಯೆಯು ರೀಚಾರ್ಜ್ ಮಾಡಿದ ಸಂಖ್ಯೆಯೊಂದಿಗೆ ಹೊಂದಾಣಿಕೆಯಾಗಬೇಕು. ಅಂದರೆ ಒಂದು ಅಥವಾ ಎರಡು ಸಂಖ್ಯೆಗಳಿಂದಾಗಿ ರೀಚಾರ್ಜ್ ತಪ್ಪು ಸಂಖ್ಯೆಗೆ ಹೋದರೆ ಹಣವನ್ನು ಮರಳಿ ಪಡೆಯುವ ಅವಕಾಶವಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *