ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಬಳಕೆದಾರರ ಭದ್ರತೆ ಹೆಚ್ಚಳ – ಬರಲಿದೆ ಸ್ಕ್ರೀನ್ ಲಾಕ್, ಮಿಸ್ ಕಾಲ್ ಅಲರ್ಟ್ ಫೀಚರ್

ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಬಳಕೆದಾರರ ಭದ್ರತೆ ಹೆಚ್ಚಳ – ಬರಲಿದೆ ಸ್ಕ್ರೀನ್ ಲಾಕ್, ಮಿಸ್ ಕಾಲ್ ಅಲರ್ಟ್ ಫೀಚರ್

ನ್ಯೂಸ್ ಆ್ಯರೋ : ವಾಟ್ಸಾಪ್‌ ಹಿಂದಿನಿಂದಲೂ ಬಳಕೆದಾರರ ಪ್ರೈವಸಿಗೆ ಪ್ರಾಮುಖ್ಯತೆಯನ್ನು ನೀಡುತಿತ್ತು. ಇದೀಗ ಭದ್ರತೆಯನ್ನು ಮತ್ತಷ್ಟು ಗಟ್ಟಿ ಮಾಡುವ ನಿಟ್ಟಿನಲ್ಲಿ ಒಂದು ಹೆಜ್ಜೆಯನ್ನು ಮುಂದಿಟ್ಟಿದೆ. ಕಂಪ್ಯೂಟರ್‌ನಲ್ಲಿ ವಾಟ್ಸಾಪ್ ಬಳಸಲು ಭಯಪಡುವವರಿಗೆ ಸದ್ಯದಲ್ಲೇ ಸ್ಕ್ರೀನ್‌ ಲಾಕ್‌ ಎಂಬ ಹೊಸ ಆಯ್ಕೆಯನ್ನು ನೀಡುವುದಾಗಿ ವಾಟ್ಸಾಪ್ ಘೋಷಣೆಯನ್ನು ಮಾಡಿದೆ. ಇನ್ಮುಂದೆ ಕಂಪ್ಯೂಟರ್‌ನಲ್ಲಿ ವಾಟ್ಸಾಪ್ ಬಳಸುವವರು ನಿಶ್ಚಿಂತೆಯಾಗಿ ಉಪಯೋಗಿಸಬಹುದು.

ಅನಧಿಕೃತವಾಗಿ ಬಳಸದಂತೆ ರಕ್ಷಣೆ ನೀಡಲಿದೆ:

ಹೆಚ್ಚಾಗಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿದ್ದ ವಾಟ್ಸಾಪ್ ಇದೀಗ ತನ್ನ ವೆಬ್ ಬಳಕೆದಾರರಿಗೆ ಉಪಯುಕ್ತವಾದ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ. ವಾಟ್ಸಾಪ್ ವೆಬ್​ನಲ್ಲಿ ಬರುವ ಸ್ಕ್ರೀನ್‌ ಲಾಕ್‌ ಎಂಬ ಹೊಸ ಫೀಚರ್​ನಲ್ಲಿ ವಾಟ್ಸಾಪ್ ಓಪನ್‌ ಮಾಡಿದ ಪ್ರತಿ ಬಾರಿ ಬಳಕೆದಾರರು ಪಾಸ್‌ವರ್ಡ್‌ ಹಾಕಬೇಕಾಗುತ್ತದೆ. ಬಳಕೆದಾರರು ತಮ್ಮ ಡೆಸ್ಕ್​​ಟಾಪ್‌ನಲ್ಲಿ ವಾಟ್ಸಾಪ್ ಬಳಸದೇ ಇದ್ದಾಗ ಬೇರೆಯವರು ಅನಧಿಕೃತವಾಗಿ ಬಳಸದಂತೆ ಇದು ರಕ್ಷಣೆ ನೀಡಲಿದೆ ಎಂದು ಕಂಪನಿ ತಿಳಿಸಿದೆ. ಹಾಗಂತ ಇದು ಕಡ್ಡಾಯವಲ್ಲ. ಬಳಕೆದಾರರು ಈ ಸ್ಕ್ರೀನ್‌ ಲಾಕ್‌ ಫೀಚರ್‌ ಅನ್ನು ಬೇಕಾದಾಗ ಮಾತ್ರ ಉಪಯೋಗಿಸಬಹುದು.

ಸದ್ಯದಲ್ಲೇ ಬರಲಿದೆ ಮಿಸ್ಡ್ ಕಾಲ್ ಅಲರ್ಟ್‌ ಫೀಚರ್:

ವಾಟ್ಸಾಪ್ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಮಿಸ್ಡ್ ಕಾಲ್ ಅಲರ್ಟ್‌’ ಎಂಬ ಹೊಸ ಫೀಚರ್ಸ್‌ ಬಿಡುಗಡೆ ಮಾಡುವ ಕುರಿತು ಮಾಹಿತಿ ಹಂಚಿಕೊಂಡಿದೆ. ಈ ಆಯ್ಕೆಯ ಮೂಲಕ ನಿಮ್ಮ ಸ್ಮಾರ್ಟ್​ಫೋನ್‌ ಎಲ್ಲಾದರು ‘ಡೋಂಟ್ ಡಿಸ್ಟರ್ಬ್‌ ಮೋಡ್‌’ನಲ್ಲಿ ಇರಿಸಿದ್ದಾಗ ಯಾರಾದರು ನಿಮ್ಮ ವಾಟ್ಸಾಪ್‌​ಗೆ ಕರೆ ಮಾಡಿದರೆ ಇದು ಸಹಾಯ ಮಾಡಲಿದೆ. ಅಂದರೆ ನೀವು ಯಾವುದೇ ಕರೆಯನ್ನು ಮಿಸ್‌ ಮಾಡಿಕೊಂಡಿದ್ದರೆ ಅದರ ಮಾಹಿತಿ ಲಭ್ಯವಾಗಲಿದೆ.

ವಾಟ್ಸಾಪ್ ಇದೀಗ ಈ ಫೀಚರ್ಸ್‌ ಹೊರತರಲು ಬಹುತೇಕ ಸಿದ್ಧವಾಗಿದೆ. ಹಾಗೆಯೇ ಇತ್ತೀಚಿನ ಬೀಟಾ ಆವೃತ್ತಿ 2.22.24.7 ಯಲ್ಲಿ ಈ ಫೀಚರ್ಸ್‌ ಲಭ್ಯವಾಗಲಿದೆ. ಜೊತೆಗೆ ಕೆಲವು ಬೀಟಾ ವಾಟ್ಸ್​ಆಯಪ್ ಬಳಕೆದಾರರಿಗೆ ಈ ಫೀಚರ್ಸ್‌ ಅನ್ನು ಈಗಾಗಲೇ ಪರಿಚಯಿಸಲಾಗಿದೆ ಎಂದು ತಿಳಿದುಬಂದಿದೆ.

ಏಕಕಾಲದಲ್ಲಿ ಎರಡು ಮೊಬೈಲ್‌ನಲ್ಲಿ ವಾಟ್ಸಾಪ್‌ ಬಳಕೆಗೆ ಅವಕಾಶ:

ಕಂಪ್ಯಾನಿಯನ್ ಮೋಡ್ ಎಂಬ ಫೀಚರ್ಸ್‌ ಮೂಲಕ ಬಳಕೆದಾರರು ಏಕಕಾಲದಲ್ಲಿ ಎರಡು ಅಥವಾ ಹೆಚ್ಚಿನ ಡಿವೈಸ್‌ಗಳಲ್ಲಿ ವಾಟ್ಸಾಪನ್ನು ಬಳಸಬಹುದು. ಅಂದರೆ ವಾಟ್ಸಾಪ್‌ ಅಕೌಂಟನ್ನು ಎರಡು ಮೊಬೈಲ್‌ಗಳಲ್ಲಿ ಬಳಸಬಹುದು. ಇದು ಬಾರ್‌ಕೋಡ್‌ ಸ್ಕ್ಯಾನ್‌ ಮೂಲಕ ಕಾರ್ಯನಿರ್ವಹಿಸಲಿದೆ. ಒಂದೇ ಸಮಯದಲ್ಲಿ ನಾಲ್ಕು ಡಿವೈಸ್‌ಗಳಲ್ಲಿ ಅಕೌಂಟ್‌ ಲಿಂಕ್‌ ಮಾಡಿದರೆ ಲಿಂಕ್ ಮಾಡಲಾದ ಎಲ್ಲಾ ಫೋನ್‌ಗಳಲ್ಲಿಯೂ ಚಾಟ್‌ಗಳು ಮತ್ತು ಡೇಟಾವನ್ನು ಬಳಕೆದಾರ ಸ್ವೀಕರಿಸುತ್ತಾನೆ. ಕಂಪ್ಯಾನಿಯನ್ ಮೋಡ್ ಅನ್ನು ಆಂಡ್ರಾಯ್ಡ್‌ ಡಿವೈಸ್‌ಗಳಲ್ಲಿ v2.22.23.18 ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗುತ್ತಿದೆ.

2022ರಲ್ಲಿ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಸಾಕಷ್ಟು ಬೆಳವಣಿಗೆ ಆಗಿದ್ದು, ಬಳಕೆದಾರರಿಗೆ ಹಲವಾರು ಪ್ರಯೋಜನಗಳನ್ನು ನೀಡುತ್ತಾ ಬಂದಿದೆ. ಈ ವರ್ಷ ಅತೀ ಹೆಚ್ಚು ಫೀಚರ್‌ಗಳನ್ನು ಬಿಡುಗಡೆ ಮಾಡಿದೆ. ಇದೀಗ ವಿಶ್ವದಲ್ಲಿ ವಾಟ್ಸಾಪ್ ಬಳಕೆದಾರರ ಸಂಖ್ಯೆ 2 ಬಿಲಿಯನ್​ಗೂ ಅಧಿಕವಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ಇನ್ನಷ್ಟು ಅನೇಕ ಅಪ್ಡೇಟ್​ಗಳು ವಾಟ್ಸ್​ಆ್ಯಪ್​ನಲ್ಲಿ ಬರಲಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *