ವಾಟ್ಸ್​ಆ್ಯಪ್‌ನಲ್ಲಿ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾದ ಮೆಟಾ – ಬಳಕೆದಾರರ ಕೈಯಲ್ಲೇ ಸ್ಟೇಟಸ್ ಅವಧಿ ವಿಸ್ತರಿಸುವ ಆಯ್ಕೆ

ವಾಟ್ಸ್​ಆ್ಯಪ್‌ನಲ್ಲಿ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾದ ಮೆಟಾ – ಬಳಕೆದಾರರ ಕೈಯಲ್ಲೇ ಸ್ಟೇಟಸ್ ಅವಧಿ ವಿಸ್ತರಿಸುವ ಆಯ್ಕೆ

ನ್ಯೂಸ್‌ ಆ್ಯರೋ : ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ದಿನಕ್ಕೊಂದು ನೂತನ ಫೀಚರ್​ಗಳನ್ನು ತರುತ್ತಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕ ಹಾಗೇ ಅಪ್ಡೇಟ್‌ಗಳನ್ನು ಮಾಡುತ್ತಿರುವ ವಾಟ್ಸಾಪ್ ಇದೀಗ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾಗಿದೆ.

ವಾಟ್ಸ್​ಆ್ಯಪ್​ನಲ್ಲಿ ಪ್ರಸ್ತುತ ಬಳಕೆದಾರರು ತಮ್ಮ ಸ್ಟೇಟಸ್ ಅನ್ನು 24 ಗಂಟೆಗಳವರೆಗೆ ಗೋಚರಿಸುವ ವಧಿಯನ್ನು ಇನ್ನಷ್ಟು ವಿಸ್ತರಿಸಲಿದೆಯಂತೆ. ಇದು ನಾಲ್ಕು ಅವಧಿಯ ಆಯ್ಕೆಯನ್ನು ನೀಡಲಿದೆ. ಇಲ್ಲಿದೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ವಾಟ್ಸ್​ಆ್ಯಪ್ ಅಪ್‌ಡೇಟ್‌ಗಳ ಬಗ್ಗೆ ಸದಾ ಮಾಹಿತಿಯನ್ನು ತಿಳಿಸುವ WABetaInfo ನ ವರದಿಯ ಪ್ರಕಾರ, ಕಂಪನಿಯು ಬಳಕೆದಾರರು ತಮ್ಮ ಸ್ಟೇಟಸ್ ಅನ್ನು ಎರಡು ವಾರಗಳವರೆಗೆ ಲೈವ್ ಆಗಿ ಇರಿಸಲು ಅನುಮತಿಸುವ ವೈಶಿಷ್ಟ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಬಳಕೆದಾರರು ತಮ್ಮ ಸ್ಟೇಟಸ್ ಗೋಚರಿಸುವ ಅವಧಿಯನ್ನು ನಿಗದಿ ಪಡಿಸುವ ಆಯ್ಕೆಯನ್ನು ಸಹ ಹೊಂದಿರುತ್ತಾರೆ ಎನ್ನಲಾಗಿದೆ.

ಮುಂಬರುವ ಅಪ್‌ಡೇಟ್‌ನಲ್ಲಿ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಸ್ಟೇಟಸ್ ವಿಭಾಗದಲ್ಲಿ ನಾಲ್ಕು ಅವಧಿಯ ಆಯ್ಕೆಗಳನ್ನು ಒದಗಿಸುವ ನಿರೀಕ್ಷೆಯಿದೆ. 24 ಗಂಟೆಗಳು, 3 ದಿನಗಳು, 1 ವಾರ ಮತ್ತು 2 ವಾರಗಳು. ಇದು ಬಳಕೆದಾರರು ತಮ್ಮ ಸ್ಟೇಟಸ್ ಅನ್ನು ಎಷ್ಟು ಸಮಯದವರೆಗೆ ವೀಕ್ಷಿಸಲು ಲಭ್ಯವಾಗಬೇಕೆಂದು ಬಯಸುತ್ತಾರೆ ಎಂಬುದರ ಕುರಿತು ಆಗಿದೆ.

ಇನ್ನಷ್ಟು ಬದಲಾವಣೆ ಸಾಧ್ಯತೆ

ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ. ವಾಟ್ಸ್​ಆ್ಯಪ್ ಬೀಟಾ 2.23.14.17 ಅಪ್ಡೇಟ್​ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

ಫಿಲ್ಟರ್​ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್​ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್​ಆ್ಯಪ್​ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.

ಪ್ರಸ್ತುತ ವಾಟ್ಸಾಪ್‌ ಫೀಚರ್‌ನಲ್ಲಿ ಚಾನೆಲ್‌ ಅನ್ನು ಸೇರಿಸಿದ್ದು ಇದು ಸೆಲೆಬ್ರಿಟಿಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗಿದೆ. ಅದಲ್ಲದೆ ಈಗಾಗಲೇ ನೋಡಿದ ಸ್ಟೇಟಸ್‌ ಅನ್ನು ವಿವೇಡ್‌ ಸ್ಟೇಟಸ್ ಅಡಿಯಲ್ಲಿ ಹಾಕಲಾಗಿದೆ. ಈ ರೀತಿ ಅನೇಕ ಬದಲಾವಣೆಗಳನ್ನು ವಾಟ್ಸಾಪ್‌ನಲ್ಲಿ ತರಲಾಗುತ್ತಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *