ವಿಶ್ವ ವಿಖ್ಯಾತ ನಾಡಹಬ್ಬ 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ

Mysore dasara utsava
Spread the love

ಮೈಸೂರು:ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಉತ್ಸವಕ್ಕೆ ಮೈಸೂರು ಸಜ್ಜಾಗಿದ್ದು ಎಲ್ಲೆಡೆ ನವರಾತ್ರಿಯ ಸಂಭ್ರಮ, ಸಡಗರ ಕಳೆಕಟ್ಟಿದೆ. ಚಾಮುಂಡಿಬೆಟ್ಟದಲ್ಲಿ ಗುರುವಾರ 414ನೇ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ.

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗ್ಗೆ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಹಿರಿಯ ಸಾಹಿತಿ ನಾಡೋಜ ಡಾ| ಹಂಪ ನಾಗರಾಜಯ್ಯ ಅವರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ.

ಈ ಮೂಲಕ 10 ದಿನ ನಡೆಯುವ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್‌.ಸಿ.ಮಹದೇವಪ್ಪ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಲಾಗುತ್ತದೆ. ಮೈಸೂರಿನಲ್ಲಿ ದಸರಾ ಮಹೋತ್ಸವ ಸಂಭ್ರಮ ಮನೆ ಮಾಡಿದರೆ, ಅರಮನೆಯಲ್ಲಿ ಶರನ್ನವರಾತ್ರಿ ಆಚರಣೆಯ ಸಡಗರ ಶುರುವಾಗಲಿದೆ. ರಾಜವಂಶಸ್ಥ ಯದುವೀರ ಒಡೆಯರ್‌ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ. ಬೆಳಗ್ಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ ಅವರಿಗೆ ಕಂಕಣಧಾರಣೆ ಮಾಡಲಾಗುತ್ತದೆ. ಬೆಳಗ್ಗೆ 10.30ಕ್ಕೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಕುದುರೆ, ಹಸುಗಳು ಆಗಮಿಸಲಿವೆ. ಬೆಳಗ್ಗೆ 11ಕ್ಕೆ ಕಳಸ ಪೂಜೆ ಮತ್ತು ಸಿಂಹಾಸನ ಪೂಜೆ ನೆರವೇರಲಿದೆ. ಬೆ. 11.35 ರಿಂದ 12.05ರ ಒಳಗೆ ಯದುವೀರ ಅವರ ಸಿಂಹಾಸನಾರೋಹಣದ ಮೂಲಕ ಖಾಸಗಿ ದರ್ಬಾರ್‌ ಆರಂಭವಾಗಲಿದೆ.

Leave a Comment

Leave a Reply

Your email address will not be published. Required fields are marked *