ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ : ರಾಹುಲ್ ವಿರುದ್ಧ ಕರ್ನಾಟಕದಲ್ಲಿ FIR.!
ಪ್ರಸ್ತುತ ಅಮೇರಿಕಾ ಪ್ರವಾಸದ ವೇಳೆ ತಮ್ಮ ಹೇಳಿಕೆ ಮೂಲಕ ಸಿಖ್ ಸಮುದಾಯಗಳ ಧಾರ್ಮಿಕ ಭಾವನೆಗೆ ಧಕ್ಕೆ ಮತ್ತು ಮೀಸಲಾತಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕದ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ಬಿಜೆಪಿಯ ಐ.ಟಿ. ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರು ‘ಎಕ್ಸ್’ನಲ್ಲಿ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ
ಇನ್ನು ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಹುಲ್ ಅವರು ಸಿಖ್ ಸಮುದಾಯವನ್ನು ನಿಂದಿಸಿದ್ದಕ್ಕಾಗಿ ಮತ್ತು ದೇಶದಲ್ಲಿ ಮುಂಬರುವ ದಿನಗಳಲ್ಲಿ ನಾವು ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಎಂದು ಹೇಳುವ ಮೂಲಕ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಸಿಖ್ ಸಮುದಾಯಗಳನ್ನು ವಿಭಜಿಸುವಂತಹ ಹೇಳಿಕೆಗಳನ್ನು ನೀಡಿರುವುದು ಸೂಕ್ತವಲ್ಲ’ ಎಂದು ಅಮಿತ್ ಮಾಳವೀಯ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಿಖ್ಖರ ಕುರಿತು ರಾಹುಲ್ ಮಾತಾಡಿದ್ದೇನು..?
ಸಿಖ್ಖರು ಗುರುದ್ವಾರಕ್ಕೆ ತೆರಳುವಾಗ ಟರ್ಬನ್ ಧರಿಸಲು ಅವಕಾಶ ನೀಡಲಾಗುತ್ತದೆಯೇ ಎಂದು ರಾಹುಲ್ ಪ್ರಶ್ನಿಸಿದ್ದರು. ರಾಹುಲ್ ಹೇಳಿಕೆಯು ಭಾರತದ ಸಿಖ್ಖರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ನಾಯಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಛತ್ತೀಸಗಢದಲ್ಲಿ ರಾಹುಲ್ ವಿರುದ್ಧ 3 ಎಫ್‌ಐಆರ್ ದಾಖಲಾಗಿವೆ.
‘ಇಡೀ ಜಗತ್ತಿನಲ್ಲಿ, ಭಾರತದಲ್ಲೂ ಸಿಖ್ಖರು ಗುರುದ್ವಾರಕ್ಕೆ ತೆರಳುವಾಗ ಟರ್ಬನ್ ಧರಿಸಿರುತ್ತಾರೆ. ಅವರಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಪ್ರಧಾನಿ ಸಹ ಗುರುದ್ವಾರಕ್ಕೆ ತೆರಳುವಾಗ ಟರ್ಬನ್ ಧರಿಸುತ್ತಾರೆ. ರಾಹುಲ್ ಗಾಂಧಿಯವರ ಈ ಹೇಳಿಕೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ದುರುದ್ದೇಶದಿಂದ ಕೂಡಿದೆ’ ಎಂದು ಬಿಜೆಪಿ ವಕ್ತಾರ ಅಮರಜಿತ್ ಸಿಂಗ್ ಸಹ ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ರಾಹುಲ್‌ಗಾಂಧಿ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳಿಗೆ ಗುರಿಯಾಗುತ್ತಿದ್ದಾರೆ..
Leave a Comment