ತಿರುಪತಿ ಲಾಡು ವಿವಾದ: ವಿಚಾರಣೆ ಮುಂದೂಡಿದ ಸುಪ್ರೀಂ
ನವದೆಹಲಿ: ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪ ಕುರಿತ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿದೆ.
ತಿರುಪತಿ ದೇವಾಲಯದ ಲಾಡು ತಯಾರಿಕೆಗೆ ಬಳಸುವ ತುಪ್ಪದಲ್ಲಿನ ಕಲಬೆರಕೆ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಸೆ.30ರಂದು ಹೇಳಿಕೆ ನೀಡಿದ್ದರು.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ಲಾಡು ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ದೂರಿದ್ದರು. ಅದಾದ ಬಳಿಕ ಈ ವಿಚಾರ ರಾಷ್ಟ್ರದಾದ್ಯಂತ ಸುದ್ದಿಯಾಗಿದೆ. ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್‌ಮೋಹನ್ ರೆಡ್ಡಿ ಅವರು ತಮ್ಮ ಆಡಳಿತದ ವಿರುದ್ಧದ ಆರೋಪವನ್ನು ಅಲ್ಲಗಳೆದಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ದೇವರನ್ನು ರಾಜಕೀಯಕ್ಕೆ ಬಳಸಿಕೊಳ್ಳದಂತೆ ಹೇಳಿದೆ. ಹಾಗೆಯೇ, ಮುಂದಿನ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
Leave a Comment