ಇಂದಿನಿಂದ ಗ್ರಾಮ ಪಂಚಾಯತ್ ಗಳಲ್ಲೇ ಜನನ ಮರಣ ನೋಂದಣಿ ಆರಂಭ – ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಉಪನೋಂದಣಾಧಿಕಾರಿ ಹೊಣೆ

IMG 20240701 WA0053
Spread the love

ನ್ಯೂಸ್ ಆ್ಯರೋ : ಇಂದಿನಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೇ ಜನನ ಮತ್ತು ಮರಣ ಪ್ರಕ್ರಿಯೆಯನ್ನು ಗ್ರಾಮ ಪಂಚಾಯಿತಿಯಲ್ಲೇ ನೋಂದಣಿ ಮಾಡುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ

ಗ್ರಾಮ ಪಂಚಾಯತಿ ಕಾರ್ಯದರ್ಶಿ ಅವರು ಜನನ ಮರಣ ನೋಂದಣಿ ಮಾಡಲಿದ್ದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವುದರ ಬದಲಾಗಿ “ಗ್ರಾಮ ಪಂಚಾಯತಿ ಕಾರ್ಯದರ್ಶಿ ಇವರನ್ನು ಉಪನೋಂದಣಾಧಿಕಾರಿಯನ್ನಾಗಿ ನೇಮಿಸಿ ತಿದ್ದುಪಡಿಗೊಳಿಸಲಾಗಿದೆ.

ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧ ಪಟ್ಟ ಗ್ರಾಮ ಪಂಚಾಯತಿ ಕಾರ್ಯದರ್ಶಿ ಇವರನ್ನು ಸಂಪರ್ಕಿಸ ಬಹುದಾಗಿದೆ. ಈ ಕುರಿತಂತೆ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದೇಶಾದ್ಯಂತ ಜನನ, ಮರಣ ನೋಂದಣಿ ಅಧಿನಿಯಮ, 1969 ಜಾರಿಯಲ್ಲಿರುತ್ತದೆ. ಕರ್ನಾಟಕ ಜನನ, ಮರಣಗಳ ನೋಂದಣಿ ನಿಯಮಗಳು, 1999ರ ಮೂಲಕ ಪುನರ್ ರಚಿತ ನಾಗರಿಕ ನೋಂದಣಿ ಪದ್ಮತಿಯನ್ನು ದಿನಾಂಕ: 01-01-2000 ರಿಂದ ರಾಜ್ಯಾದ್ಯಂತ ಏಕೀಕರಿಸಿ ಜನನ, ಮರಣ ನೋಂದಣಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೋಂದಣಿ ಅಧಿನಿಯಮ 1969ರ ಪ್ರಕರಣ 7(5) ರನ್ವಯ ಜನನ, ಮರಣ ಘಟನೆಗಳು ಘಟಿಸಿದ ಮೂವತ್ತು ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ಹಾಗೂ ಪ್ರಕರಣ 7(1) ರನ್ವಯ ಜನನ, ಮರಣ ಘಟನೆಗಳು ಸಂಭವಿಸಿದ ಮೂವತ್ತು ದಿನಗಳ ನಂತರದ ವಿಳಂಬ ನೋಂದಣಿಯನ್ನು ನೋಂದಾಯಿಸಲು ಗ್ರಾಮ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಉಲ್ಲೇಖಿತ (3) ರಲ್ಲಿ ಸರ್ಕಾರದ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸದರಿ ಆದೇಶದನ್ವಯ ಜನನ, ಮರಣ ನೋಂದಣಿಗೆ ಸಂಬಂಧಿಸಿದಂತೆ, ನೋಂದಣಾಧಿಕಾರಿಗಳು ಮತ್ತು ಉಪ ನೋಂದಣಾಧಿಕಾರಿಗಳ ಪಾತ್ರ ಜವಾಬ್ದಾರಿ ಹಾಗೂ ನಿರ್ವಹಿಸಬೇಕಾದ ಕಾರ್ಯಗಳ ಕುರಿತ ಮಾರ್ಗಸೂಚಿಯನ್ನು ಒಳಗೊಂಡ ಪ್ರಮಾಣಿತ ಕಾರ್ಯಚರಣೆಯ ವಿಧಾನಗಳನ್ನು ಉಲ್ಲೇಖ(4) ರಲ್ಲಿ ಹೊರಡಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

N6201003831719826136294a0e6e9930f180beb4ecc6755ad92bc4a4bdf1abd2ba2acb60b25f5a4814c38f08336601036975652123
N6201003831719826141250fff3612ec617d63382371ccd772bc5a000f5ef2b8b2c1ff06e5c91e89d15d4527165294384746892065
N6201003831719826144548d9b6a3dd8529d09537349a0b962c83d47de7bec04361a6fa65279a61dedb35066302602462452285882

ದಿನಾಂಕ. 01.07.2024 ರಿಂದ ಜಾರಿಗೆ ಬರುವಂತೆ ಉಲ್ಲೇಖ (3)ರ ಸರ್ಕಾರದ ಆದೇಶವನ್ನು ಗ್ರಾಮೀಣ ಪುದೇಶಕ್ಕೆ ಅನ್ವಯವಾಗುವಂತೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕೆಳಕಂಡ ಅಂಶಗಳನ್ನು ಪಾಲಿಸಲು ತಿಳಿಸಿದೆ.

  1. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳೊಳಗೆ ಜನನ, ಮರಣ ಉಪ ನೋಂದಣಾಧಿಕಾರಿಗಳಾದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ನಿಯಮಾನುಸಾರ ನೋಂದಣಿ ಮಾಡತಕ್ಕದ್ದು.
    a. ಘಟನೆ ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿ ಉಚಿತವಾಗಿ ಒಂದು ಪುಮಾಣ ಪತ್ರವನ್ನು ವಿತರಿಸುವುದು.
    b. ಕರ್ನಾಟಕ ಜನನ, ಮರಣ ನೋಂದಣಿ ನಿಯಮ 5ರಲ್ಲಿ ನಿಗದಿಪಡಿಸಿದ 21 ದಿನಗಳ ತರುವಾಯ ಮತ್ತು 30 ದಿನಗಳೊಳಗಾಗಿ ವರದಿಯಾಗುವ ಘಟನೆಗಳನ್ನು ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ 9(1) ರ ಪುಕಾರ ರೂ.2/- ತಡ ಶುಲ್ಕ ಪಡೆದು ನೋಂದಾಯಿಸುವುದು.
    c. ಘಟನೆ ಸಂಭವಿಸಿದ 30 ದಿನಗಳ ತರುವಾಯ ವರದಿಯಾಗುವ ಘಟನೆಗಳ ನೋಂದಣಿಯನ್ನು ಮಾಡತಕ್ಕದ್ದಲ್ಲ. ಸದರಿ ಘಟನೆಗಳ ನೋಂದಣಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಬೇಕಾಗಿರುವ ಹಿನ್ನೆಲೆಯಲ್ಲಿ ಕುರಿತಂತೆ ಸಾರ್ವಜನಿಕರಿಗೆ/
    ಅರ್ಜಿದಾರರಿಗೆ ಮಾಹಿತಿಯನ್ನು ನೀಡುವುದು.
  2. ಜನನ, ಮರಣ ಘಟನೆ ಸಂಭವಿಸಿದ 30 ದಿನಗಳ ನಂತರ ವರದಿಯಾಗುವ ಘಟನೆಗಳನ್ನು ಜನನ, ಮರಣ ನೋಂದಣಾಧಿಕಾರಿಗಳಾದ ಗ್ರಾಮ ಆಡಳಿತ ಅಧಿಕಾರಿಗಳು ನಿಯಮಾನುಸಾರ ಈ ಕೆಳಕಂಡಂತೆ ನೋಂದಣಿ ಮಾಡತಕ್ಕದ್ದು.
    a. ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ ನಿಯಮ 9(2) ರ ಪ್ರಕಾರ 30 ದಿನಗಳ ತರುವಾಯ ಒಂದು ವರ್ಷದ ಒಳಗೆ ವರದಿಯಾಗುವ ಜನನ,ಮರಣ ಹಾಗೂ ನಿರ್ಜೀವ ಜನನಗಳನ್ನು ತಹಶೀಲ್ದಾರರ ಲಿಖಿತ ಅನುಮತಿಯೊಂದಿಗೆ ರೂ.5/- ತಡೆ ಶುಲ್ಕ ಪಡೆದು ನೋಂದಾಯಿಸುವುದು
    b. ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ ನಿಯಮ 9(3) ರ ಪ್ರಕಾರ ಒಂದು ವರ್ಷದ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾ ಪ್ರಾಂತ ದಂಡಾಧಿಕಾರಿ (Presidency Magistrate) ರವರ ಆದೇಶದೊಂದಿಗೆ ರೂ.10/- ತಡೆ ಶುಲ್ಕ ಪಡೆದು ನೋಂದಾಯಿಸುವುದು.
    ಜನನ, ಮರಣ ನೋಂದಣಿ ಸಂಬಂಧ ಯಾವುದಾದರೂ ಸಂದೇಹ/ಸೃಷ್ಟಿಕರಣ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು.

ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಮಾಡುವ ಸಂದರ್ಭದಲ್ಲಿ ಇ-ಜನ್ಮ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿ ಅಥವಾ ಇ-ಜನ್ಮ ಸಹಾಯವಾಣಿ ಹಾಗೂ ಇ-ಮೇಲ್ crbdkar@gmail.com / ejanmahelpdesk@gmail.com ಮತ್ತು ದೂರವಾಣಿ 1800-425-6578 ಕ್ಕೆ ಸಂಪರ್ಕಿಸುವುದು.
ಜನನ, ಮರಣ ನೋಂದಣಿ ಸಂಬಂಧ ಭಾರತದ ಮಹಾ ನೋಂದಣಾಧಿಕಾರಿಗಳು / ರಾಜ್ಯದ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಕಾಲಕಾಲಕ್ಕೆ ಹೊರಡಿಸುವ ಸುತ್ತೋಲೆ / ಆದೇಶ / ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!