Capt. Pranjal : ದೇಶದ ಹೆಮ್ಮೆಯ ಪುತ್ರನಿಗೆ ಕಣ್ಣೀರಿನ ವಿದಾಯ – ಪಂಚಭೂತಗಳಲ್ಲಿ ಲೀನವಾದ ಕ್ಯಾಪ್ಟನ್ ಪ್ರಾಂಜಲ್

Capt. Pranjal : ದೇಶದ ಹೆಮ್ಮೆಯ ಪುತ್ರನಿಗೆ ಕಣ್ಣೀರಿನ ವಿದಾಯ – ಪಂಚಭೂತಗಳಲ್ಲಿ ಲೀನವಾದ ಕ್ಯಾಪ್ಟನ್ ಪ್ರಾಂಜಲ್

ನ್ಯೂಸ್ ಆ್ಯರೋ : ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರಪಾಳ್ಯ ಚಿತಾಗಾರದಲ್ಲಿ ನಡೆಯಿತು.

ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಿದ್ದು, ಪ್ರಾಂಜಲ್ ಅವರ ತಂದೆ ಅಂತಿಮ ವಿಧಿವಿಧಾನಗಳನ್ನ ನೆರವೇರಿಸಿದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸಂಬಂಧಿಕರು, ಸೇನಾಧಿಕಾರಿಗಳು ಸೇರಿ ನೆರದಿದ್ದ ಜನರು ವೀರ ಯೋಧನಿಗೆ ಕಣ್ಣೀರಿನ ವಿದಾಯ ನೀಡಿದರು.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​​ನ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು.

ಕಲ್ಲುಬಾಳು ರಸ್ತೆ ಜಿಗಣಿಯ ಒಡಿಸಿ ಸರ್ಕಲ್​, ಜಿಗಣಿ ರಸ್ತೆ ಮೂಲಕ ಹರಪನ್ನಹಳ್ಳಿ – ಕೊಪ್ಪ ಗೇಟ್ – ಬೇಗಿಹಳ್ಳಿ – ಬನ್ನೇರುಘಟ್ಟ ರಸ್ತೆ – ನೈಸ್​ ರೋಡ್ – ಕೂಡ್ಲುಗೇಟ್​ ಮೂಲಕ ಹಾದು ಬಂದ ಮೆರವಣಿಗೆ ಸೋಮಸುಂದರಪಾಳ್ಯ ಚಿತಾಗಾರದ ಆವರಣದಲ್ಲಿ ಕೊನೆಗೊಂಡಿತು.

ಇನ್ನು ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *