ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಜುಲೈ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆಯ ಮಾಹಿತಿ:
ಡೈರೆಕ್ಟರ್-2
ಅಸಿಸ್ಟೆಂಟ್ ಡೈರೆಕ್ಟರ್- 1

ಶೈಕ್ಷಣಿಕ ಅರ್ಹತೆ:
ಡೈರೆಕ್ಟರ್- ತಿಳಿಸಿಲ್ಲ.
ಅಸಿಸ್ಟೆಂಟ್ ಡೈರೆಕ್ಟರ್- ಎಂಜಿನಿಯರಿಂಗ್​ ಪದವಿ, ಕಂಪ್ಯೂಟರ್ ಅಪ್ಲಿಕೇಶನ್​ನಲ್ಲಿ ಸ್ನಾತಕೋತ್ತರ ಪದವಿ

ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 6, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಡೈರೆಕ್ಟರ್- 1,23,100-2,15,900
ಅಸಿಸ್ಟೆಂಟ್ ಡೈರೆಕ್ಟರ್- ಮಾಸಿಕ ₹ 78,800-2,09,200

ಉದ್ಯೋಗದ ಸ್ಥಳ:
ಲಕ್ನೋ
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
4 ನೇ ಮಹಡಿ
ಬಾಂಗ್ಲಾ ಸಾಹಿಬ್ ರಸ್ತೆ
ಕಾಳಿ ಮಂದಿರದ ಹಿಂದೆ
ಗೋಲ್ ಮಾರ್ಕೆಟ್
ನವದೆಹಲಿ-110001

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/05/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 6, 2024

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *