ಉಡುಪಿ : ಕಾರ್ಕಳ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಪ್ರಕರಣ – ಯುವಕರ ಗ್ಯಾಂಗ್ ರೇಪ್ ಆರೋಪದ ಬಗ್ಗೆ ಎಸ್ಪಿ ಖಡಕ್ ರಿಪ್ಲೈ
ನ್ಯೂಸ್ ಆ್ಯರೋ : ಕಾರ್ಕಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿಕೆ ನೀಡಿದ್ದು, ಅತ್ಯಾಚಾರ ಒಬ್ಬನಿಂದಲೇ ನಡೆದ ಘಟನೆ ಎಂದಿದ್ದಾರೆ.
ಈ ಬಗ್ಗೆ ವಿವರಣೆ ನೀಡಿದ ಎಸ್ಪಿ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ ಜೊತೆ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು.
ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ. ಮಧ್ಯದಲ್ಲಿ ಏನನ್ನೊ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ.
ಆರೋಪಿ ಅಲ್ತಾಫ್ ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ ಕೃತ್ಯಕ್ಕೆ ಬಳಸಿದ ವಾಹನ ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಇನ್ನೂ ಯುವತಿಯ ಮೇಲೆ ಗ್ಯಾಂಗ್ ರೇಪ್ ಆರೋಪದ ಬಗ್ಗೆ ಮಾಹಿತಿ ನೀಡಿದ ಎಸ್ಪಿ, ಆ ರೀತಿಯ ಯಾವುದೇ ಘಟನೆ ನಡೆದಿಲ್ಲ. ಕೃತ್ಯ ಒಬ್ಬನಿಂದಲೇ ನಡೆದಿದೆ. ಉಳಿದಿಬ್ಬರು ಸಹಕರಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಅನಾವಶ್ಯಕ ಗೊಂದಲ ನಿರ್ಮಿಸಿ ಜನಸಾಮಾನ್ಯರ ದಾರಿ ತಪ್ಪಿಸುವ ಪ್ರಯತ್ನ ಮಾಡಬಾರದು. ಅಂತಹ ಕೃತ್ಯ ಎಸಗಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಹೇಳಿಕೆ ನೀಡಿದ್ದಾರೆ.
Leave a Comment